ETV Bharat / state

ಮಧ್ಯಾಹ್ನ ಕಾಂಗ್ರೆಸ್‌ ಮಹತ್ವದ ಸುದ್ದಿಗೋಷ್ಠಿ: ಬಿಜೆಪಿ ಶಾಸಕರ ವಿಡಿಯೋ ಬಿಡುಗಡೆ?

author img

By

Published : Sep 12, 2022, 10:42 AM IST

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಧ್ಯಾಹ್ನ 12:30ಕ್ಕೆ ರಾಜ್ಯ ಕಾಂಗ್ರೆಸ್ ನಾಯಕರ ಸುದ್ದಿಗೋಷ್ಠಿ ನಡೆಯಲಿದೆ.

Representative image
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರು ಇಂದು ಮಹತ್ವದ ಸುದ್ದಿಗೋಷ್ಠಿ ಕರೆದಿದ್ದಾರೆ. ಈ ವೇಳೆ ಬಿಜೆಪಿ ಶಾಸಕರೊಬ್ಬರ ವಿಡಿಯೋ ಬಿಡುಗಡೆ ಮಾಡಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಪಿಎಸ್ಐ ನೇಮಕ ಹಗರಣ ರಾಜ್ಯದಲ್ಲಿ ದೊಡ್ಡಮಟ್ಟದ ಸುದ್ದಿ ಮಾಡಿತ್ತು. ಇದೇ ವಿಚಾರವಾಗಿ ಈಗಾಗಲೇ ಸಾಕಷ್ಟು ಕಾಂಗ್ರೆಸ್ ಮಾಹಿತಿ ಹೊರಗೆಡವಿದೆ. ಇದೀಗ ಸಚಿವ ಶಿವರಾಜ್ ತಂಗಡಗಿ ಸುದ್ದಿಗೋಷ್ಠಿ ಕರೆದಿದ್ದು ಮಹತ್ವದ ವಿಡಿಯೋ ಬಿಡುಗಡೆ ಮಾಡಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಧ್ಯಾಹ್ನ 12:30ಕ್ಕೆ ಸುದ್ದಿಗೋಷ್ಠಿ ನಡೆಯಲಿದೆ.

ವಿಧಾನಮಂಡಲ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರವನ್ನು ಇನ್ನಷ್ಟು ಮುಜುಗರಕ್ಕೆ ಸಿಲುಕಿಸುವ ಹಾಗೂ ತಮ್ಮ ಕ್ಷೇತ್ರದಲ್ಲಿ ಇನ್ನೊಮ್ಮೆ ಬಲವರ್ಧನೆಗೆ ಮುಂದಾಗುವ ನಿಟ್ಟಿನಲ್ಲಿ ಶಿವರಾಜ್ ತಂಗಡಗಿ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಪಿಎಸ್ಐ ನೇಮಕಾತಿ ಅಕ್ರಮ: ಬಿಜೆಪಿ ಶಾಸಕ ದಡೇಸಗೂರು ವಿರುದ್ಧ ತನಿಖೆ ಸುಳಿವು ನೀಡಿದ ಸಿಎಂ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.