ರಾಜ್ಯದಲ್ಲಿಂದು 858 ಜನರಲ್ಲಿ ಕೋವಿಡ್‌ ದೃಢ, ಓರ್ವ ಬಲಿ

author img

By

Published : Jun 23, 2022, 10:45 PM IST

corona

ರಾಜ್ಯದಲ್ಲಿ ಇಂದು 858 ಮಂದಿಯಲ್ಲಿ ಕೋವಿಡ್‌ ಸೋಂಕು ಪತ್ತೆಯಾಗಿದ್ದು, 682 ಮಂದಿ ಡಿಸ್ಚಾರ್ಜ್‌ ಆಗಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಗುರುವಾರ 36,289 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 858 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇಂದು 682 ಮಂದಿ ಬಿಡುಗಡೆ ಆಗಿದ್ದು, ಇಲ್ಲಿಯತನಕ ಒಟ್ಟು 39,18,452 ಮಂದಿ ಗುಣಮುಖರಾಗಿದ್ದಾರೆ. ಸೋಂಕಿಗೆ ಒಬ್ಬರು ಮೃತಪಟ್ಟಿದ್ದಾರೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 5,067 ರಷ್ಟಿದೆ. ಈ ಮೂಲಕ ಸೋಂಕಿತರ ಪ್ರಮಾಣ ಶೇ. 2.36 ರಷ್ಟಿದ್ದರೆ, ವಾರದ ಸೋಂಕಿತರ ಪ್ರಮಾಣ ಶೇ. 3.63 ರಷ್ಟಿದೆ. ಇಲ್ಲಿಯವರೆಗೂ ಪರೀಕ್ಷಿಸಲಾದ ಒಟ್ಟು ಜನರ ಸಂಖ್ಯೆ 66,83,7154. ವಾರದ ಸಾವಿನ ಪ್ರಮಾಣ ಶೇ. 0.08 ರಷ್ಟಿದೆ. ವಿಮಾನ ನಿಲ್ದಾಣದಿಂದ ತಪಾಸಣೆಗೆ 5,662 ಮಂದಿ ಒಳಗಾಗಿದ್ದು, ಇದುವರೆಗೂ 10,99,897 ಪ್ರಯಾಣಿಕರು ಕೋವಿಡ್ ತಪಾಸಣೆಗೆ ಒಳಪಟ್ಟಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಬಂದಾಗ ಹಾಕಿದ ಡಾಂಬರು ಕುಸಿತ; ತಪ್ಪಿತಸ್ಥರ ವಿರುದ್ದ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರಿನಲ್ಲಿ ಇಂದು 820 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 17,98,680ಕ್ಕೆ ಏರಿಕೆ ಆಗಿದೆ. ಇಂದು 666 ಮಂದಿ ಬಿಡುಗಡೆಯಾಗಿದ್ದು, ಇದುವರೆಗೂ 17,76,894 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ. ಇದುವರೆಗೆ ಕೋವಿಡ್ ಸಾವಿನ ಸಂಖ್ಯೆ 16,967 ರಷ್ಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 4,818 ಇದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.