ETV Bharat / state

ಝಿಕಾ ವೈರಸ್ ನಿಯಂತ್ರಣಕ್ಕೆ ಅಗತ್ಯ ಕ್ರಮ: ಆರೋಗ್ಯ ಸಚಿವ ಸುಧಾಕರ್

author img

By

Published : Jul 10, 2021, 1:07 PM IST

Updated : Jul 10, 2021, 1:12 PM IST

sudhakar
ಆರೋಗ್ಯ ಸಚಿವ ಸುಧಾಕರ್

ರಾಜ್ಯದಲ್ಲಿ ಝಿಕಾ ವೈರಸ್ ನಿಯಂತ್ರಣಕ್ಕೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಬೇರೆ ರಾಜ್ಯಕ್ಕೆ ಹೋಲಿಸಿದರೆ ನಮ್ಮಲ್ಲಿ ಪ್ರಕರಣಗಳು ಕಡಿಮೆ ಇದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದು ಸಚಿವ ಸುಧಾಕರ್ ತಿಳಿಸಿದರು.

ಬೆಂಗಳೂರು: ರಾಜ್ಯದಲ್ಲಿ ಝಿಕಾ ವೈರಸ್ ನಿಯಂತ್ರಣಕ್ಕೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಈ ಸಂಬಂಧ ರಾಜ್ಯದಲ್ಲಿ ವೈದ್ಯಕೀಯ ವ್ಯವಸ್ಥೆಯನ್ನು ಸರಿಯಾಗಿ ಮಾಡಲಾಗಿದೆ. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿಕೊಳ್ಳಬಹುದಾಗಿದೆ ಎಂದು ಸಚಿವ ಡಾ. ಕೆ ಸುಧಾಕರ್ ತಿಳಿಸಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೇರೆ ರಾಜ್ಯಕ್ಕೆ ಹೋಲಿಸಿದರೆ ನಮ್ಮಲ್ಲಿ ಪ್ರಕರಣಗಳು ಕಡಿಮೆ ಇದ್ದು, ಆತಂಕ ಪಡುವ ಅಗತ್ಯವಿಲ್ಲ. ನೆರೆ ರಾಜ್ಯ ಕೇರಳದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಹೇಳಿದರು.

ಸಚಿವ ಸುಧಾಕರ್ ಇಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಆಸ್ಪತ್ರೆ ನಿರ್ವಹಣೆ ಕುರಿತು ಜಿಲ್ಲಾಧಿಕಾರಿ ಹಾಗೂ ಆರೋಗ್ಯ ಇಲಾಖೆಯೊಂದಿಗೆ ಸಭೆ ನಡೆಸಲಿದ್ದಾರೆ. ಜಿಲ್ಲೆಯ ಆಸ್ಪತ್ರೆ, ಹಾಸಿಗೆ ವ್ಯವಸ್ಥೆ ಕುರಿತು ಮಾಹಿತಿ ಪಡೆಯಲಿದ್ದಾರೆ‌.

ರಾಜ್ಯಗಳಿಗೆ ಲಸಿಕೆ ಹಂಚಿಕೆ ಕೇಂದ್ರವೇ ವಹಿಸಿಕೊಂಡಿದ್ದು, ಉತ್ತಮ ನಿರ್ಧಾರ ಕೈಗೊಂಡಿದೆ. ಖಾಸಗಿಯವರಿಗೆ ಶೇ. 25 ರಷ್ಟು ಮಾರಾಟ ಮಾಡಲು ಕಂಪನಿಗಳಿಗೆ ಅನುಮತಿ ನೀಡಲಾಗಿದೆ. ‌ಸದ್ಯ ಖಾಸಗಿಯವರಿಗೆ ಲಸಿಕೆ ಸಿಗುತ್ತಿಲ್ಲ, ಆದರೆ 7-10 ದಿನಗಳಲ್ಲಿ ಅದು ಕೂಡ ಸರಿಯಾಗಲಿದೆ ಎಂದು ಮಾಹಿತಿ ನೀಡಿದರು.

Last Updated :Jul 10, 2021, 1:12 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.