ETV Bharat / state

ಕರ್ನಾಟಕ ಸಿಜೆ ಹುದ್ದೆಗೆ  ರಿತುರಾಜ್ ಅವಸ್ತಿ ಹೆಸರು ಶಿಫಾರಸು ಮಾಡಿದ ಸುಪ್ರೀಂ ಕೋರ್ಟ್

author img

By

Published : Sep 18, 2021, 5:17 AM IST

ಹಿಮಾಚಲ ಪ್ರದೇಶ ಹೈಕೋರ್ಟ್​ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಆಗಿರುವ ಕನ್ನಡಿಗ ನ್ಯಾಯಮೂರ್ತಿ ರವಿ ಮಳಿಮಠ ಅವರನ್ನು ಅದೇ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಹುದ್ದೆಗೆ ಶಿಫಾರಸು ಮಾಡಿಲಾಗಿದೆ ಎಂದು ತಿಳಿದು ಬಂದಿದೆ.

Ritu Raj Awasthi
ರಿತುರಾಜ್ ಅವಸ್ತಿ

ಬೆಂಗಳೂರು: ರಾಜ್ಯ ಹೈಕೋರ್ಟ್​ನಲ್ಲಿ ಖಾಲಿ ಇರುವ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ಅವರ ಹೆಸರನ್ನು ಸುಪ್ರೀಂ ಕೋರ್ಟ್ ಶಿಫಾರಸು ಮಾಡಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ನೇತೃತ್ವದ ಕೊಲಿಜಿಯಂ 8 ನ್ಯಾಯಮೂರ್ತಿಗಳ ಹೆಸರನ್ನು ವಿವಿಧ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಹುದ್ದೆಗೆ ಶಿಫಾರಸು ಮಾಡಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಆ ಪ್ರಕಾರ ನ್ಯಾ. ರಿತುರಾಜ್ ಅವಸ್ತಿ ಅವರ ಹೆಸರನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಶಿಫಾರಸು ಮಾಡಿದೆ.

Satish Chandra Sharma
ಸತೀಶ್ ಚಂದ್ರ ಶರ್ಮಾ

ಇದೇ ವೇಳೆ ಕರ್ನಾಟಕ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಆಗಿರುವ ಸತೀಶ್ ಚಂದ್ರ ಶರ್ಮ ಅವರನ್ನು ತೆಲಂಗಾಣ ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಹಾಗೂ ಹಿರಿಯ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರನ್ನು ಗುಜರಾತ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಶಿಫಾರಸು ಮಾಡಿದೆ. ಹಾಗೆಯೇ, ಹಿಮಾಚಲ ಪ್ರದೇಶ ಹೈಕೋರ್ಟ್​ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಆಗಿರುವ ಕನ್ನಡಿಗ ನ್ಯಾಯಮೂರ್ತಿ ರವಿ ಮಳಿಮಠ ಅವರನ್ನು ಅದೇ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಹುದ್ದೆಗೆ ಶಿಫಾರಸು ಮಾಡಿಲಾಗಿದೆ ಎಂದು ತಿಳಿದು ಬಂದಿದೆ.

ನ್ಯಾ. ರಿತುರಾಜ್ ಅವಸ್ತಿ ಹಿನ್ನೆಲೆ
ನ್ಯಾ. ರಿತುರಾಜ್ ಅವಸ್ತಿ ಅವರು 1960ರ ಜುಲೈ 3ರಂದು ಜನಿಸಿದ್ದು, 1986ರಲ್ಲಿ ಲಕ್ನೋ ವಿವಿಯಿಂದ ಕಾನೂನು ಪದವಿ ಪಡೆದಿದ್ದಾರೆ. ವಕೀಲರಾಗಿ 1987ರ ಫೆಬ್ರವರಿ 1ರಂದು ನೋಂದಾಯಿಸಿಕೊಂಡಿರುವ ನ್ಯಾ. ರಿತುರಾಜ್ ಅವಸ್ತಿ ಕೇಂದ್ರ ಸರ್ಕಾರದ ಸಹಾಯಕ ಸಾಲಿಸಿಟರ್ ಜನರಲ್ ಆಗಿ ಸೇವೆ ಸಲ್ಲಿಸಿದ್ದಾರೆ. 2009ರ ಏಪ್ರಿಲ್ 13ರಿಂದ ಲಕ್ನೋ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿದ್ದು, 2022ರ ಜುಲೈ 2ರಂದು ನಿವೃತ್ತಿ ಹೊಂದಲಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.