ETV Bharat / state

ನನ್ನ ನೇತೃತ್ವದಲ್ಲೇ 2023 ರ ಚುನಾವಣೆ: ಸಾಮೂಹಿಕ ನಾಯಕತ್ವದ ಜಪ ಮಾಡುತ್ತಿದ್ದ ನಾಯಕರಿಗೆ ಬೊಮ್ಮಾಯಿ ಶಾಕ್

author img

By

Published : Oct 8, 2021, 9:41 PM IST

2023ರ ಚುನಾವಣೆ ನನ್ನ ನೇತೃತ್ವದಲ್ಲಿಯೇ ನಡೆಯಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಸಾಮೂಹಿಕ ನಾಯಕತ್ವದ ಜಪ ಮಾಡುತ್ತಿದ್ದ ನಾಯಕರಿಗೆ ಶಾಕ್ ನೀಡಿದ್ದಾರೆ.

ಬೊಮ್ಮಾಯಿ
ಬೊಮ್ಮಾಯಿ

ಬೆಂಗಳೂರು: 2023ರ ಚುನಾವಣೆ ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ಮಾರ್ಗದರ್ಶನದಲ್ಲಿ ನನ್ನ ನೇತೃತ್ವದಲ್ಲಿಯೇ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಸಾಮೂಹಿಕ ನಾಯಕತ್ವದ ಜಪ ಮಾಡುತ್ತಿರುವ ರಾಜ್ಯ ನಾಯಕರಿಗೆ ಶಾಕ್ ನೀಡಿದ್ದಾರೆ.

‘ಮತ್ತೊಂದು ಅವಧಿಗೆ ಬಿಜೆಪಿ ಸರ್ಕಾರ ತರ್ತೇನೆ’

ನವದೆಹಲಿಯಲ್ಲಿ ನಡೆದ ಇಂಡಿಯಾ ಟುಡೇ ಕಾನ್ ಕ್ಲೇವ್​ನಲ್ಲಿ ಮಾತನಾಡಿದ ಅವರು, ಎಷ್ಟು ಅವಧಿಗೆ ಮುಖ್ಯಮಂತ್ರಿಯಾಗಿರುತ್ತೇನೆ ಎಂಬುದು ಮುಖ್ಯವಲ್ಲ. ಈ ಅವಧಿಯಲ್ಲಿ ಏನು ಮಾಡುತ್ತೇನೆ ಎಂಬುದು ಮುಖ್ಯ. ಸಿಕ್ಕಿರುವ ಈ ಅವಧಿಯಲ್ಲಿ ಉತ್ತಮ ಆಡಳಿತ ನೀಡುವುದರ ಜೊತೆಗೆ ಮತ್ತೊಂದು‌ ಅವಧಿಗೆ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇನೆ ಎಂದು ಸಿಎಂ ಬೊಮ್ಮಾಯಿ‌ ವಿಶ್ವಾಸ ವ್ಯಕ್ತಪಡಿಸಿದರು.

ಬಿಎಸ್​ವೈ ಪ್ರಬಲ ನಾಯಕ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು, ಅವರು ಮುಂದಿನ ಜನಾಂಗಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಅವರೊಬ್ಬ ಪ್ರಬಲ ನಾಯಕ ಎಂದು ಬಿಎಸ್​ವೈ ಗುಣಗಾನ ಮಾಡಿದ್ರು.

‘ಎಲ್ಲಾ ವರ್ಗದವರೂ ಬಿಜೆಪಿಯನ್ನು ಬೆಂಬಲಿಸಿದ್ದಾರೆ’

ಬಿಜೆಪಿ ಈಗ ಕರ್ನಾಟಕದಲ್ಲಿ ಕೇವಲ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಾಗಿಲ್ಲ. ಅದು ಸಮಾಜದ ಎಲ್ಲ ವರ್ಗದವರಿಗೂ ತಲುಪಿ ಅವರ ಬೆಂಬಲ ಗಳಿಸಿರುವ ಪಕ್ಷವಾಗಿದೆ. ಉತ್ತರ ಕರ್ನಾಟಕ ಭಾಗದಿಂದ ಹಲವಾರು ಜನ ಲಿಂಗಾಯತ ಸಮುದಾಯದವರು ಬಿಜೆಪಿಯಿಂದ ಶಾಸಕರು ಮತ್ತು ಸಂಸದರಾಗಿದ್ದಾರೆ.

ಆದರೆ, ಒಂದು ಸರ್ಕಾರ ಅಧಿಕಾರಕ್ಕೆ ಬರಬೇಕೆಂದರೆ ಎಸ್​ಸಿ, ಎಸ್​ಟಿ, ಒಕ್ಕಲಿಗ ಸೇರಿ ಹಿಂದುಳಿದ ವರ್ಗದವರ ಬೆಂಬಲ‌ವೂ ಬೇಕು. ಈ ಎಲ್ಲ ವರ್ಗದವರು ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸಿದ್ದಾರೆ. ಹೀಗಾಗಿ ಬಿಜೆಪಿ ಈಗ ಕರ್ನಾಟಕದಲ್ಲಿ ಸಮಾಜದ ಎಲ್ಲ ವರ್ಗದವರ ಪಕ್ಷವಾಗಿದೆ ಎಂದರು.

‘ನೀಟ್ ಪರೀಕ್ಷೆಗೆ ತಮಿಳುನಾಡು ವಿರೋಧಿಸೋದು ಸರಿಯಲ್ಲ’

ಇದೇ ವೇಳೆ ಅವರು, ನೀಟ್ ಪರೀಕ್ಷೆಗೆ ತಮಿಳುನಾಡು ವಿರೋಧ ಮಾಡುತ್ತಿರುವುದು ಸರಿಯಲ್ಲ ಎಂದು ಹೇಳಿದರು.‌

ETV Bharat Logo

Copyright © 2024 Ushodaya Enterprises Pvt. Ltd., All Rights Reserved.