ETV Bharat / state

ಪಂಚಮಸಾಲಿ ಸಮುದಾಯ 2ಎಗೆ ಸೇರಿಸಲು ವಿರೋಧ ವ್ಯಕ್ತಪಡಿಸಿಲ್ಲ: ಸಚಿವ ಶೆಟ್ಟರ್ ಸ್ಪಷ್ಟನೆ​

author img

By

Published : Feb 19, 2021, 1:21 PM IST

ಸಚಿವ ಸಂಪುಟ ಸಭೆಯಲ್ಲಿ ನಡೆದಿದೆ ಎನ್ನಲಾದ ಮಾತಿನ ಚಕಮಕಿ ಸತ್ಯಕ್ಕೆ ದೂರವಾದ ಅಂಶವಾಗಿದೆ. ಪಂಚಮಸಾಲಿ ಸಮುದಾಯಕ್ಕೆ ವಿರೋಧ ವ್ಯಕ್ತಪಡಿಸುವುದು ನಮ್ಮ ನಿಲುವಲ್ಲ. ಮೊದಲಿನಿಂದಲೂ ಈ ಸಮುದಾಯಕ್ಕೆ ಸೂಕ್ತ ಸ್ಥಾನಮಾನ ದೊರಕಬೇಕು ಎನ್ನುವ ಅಭಿಲಾಷೆ ಹಾಗೂ ಪ್ರತಿಪಾದನೆಯನ್ನು ಮಾಡಿಕೊಂಡು ಬಂದಿದ್ದೇವೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್​​ ಹೇಳಿದ್ದಾರೆ.

Jagadeesh Shetter
ಸಚಿವ ಜಗದೀಶ್ ಶೆಟ್ಟರ್​

ಬೆಂಗಳೂರು: ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗಿರುವಂತೆ ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರಿಸುವ ವಿಷಯದಲ್ಲಿ ನಾನು ವಿರೋಧ ವ್ಯಕ್ತಪಡಿಸಿಲ್ಲ. ಅಲ್ಲದೇ ಪಂಚಮಸಾಲಿ ಸಮುದಾಯ 2ಎಗೆ ಸೇರಬೇಕು ಎನ್ನುವ ನಿಲುವು ನಮ್ಮದಾಗಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್​​ ಸ್ಪಷ್ಟನೆ ನೀಡಿದ್ದಾರೆ.

ಪತ್ರಿಕಾ ಪ್ರಕಟಣೆ
ಪತ್ರಿಕಾ ಪ್ರಕಟಣೆ

ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ಸಚಿವ ಸಂಪುಟ ಸಭೆಯಲ್ಲಿ ನಡೆದಿದೆ ಎನ್ನಲಾದ ಮಾತಿನ ಚಕಮಕಿ ಸತ್ಯಕ್ಕೆ ದೂರವಾದ ಅಂಶವಾಗಿದೆ. ಪಂಚಮಸಾಲಿ ಸಮುದಾಯಕ್ಕೆ ವಿರೋಧ ವ್ಯಕ್ತಪಡಿಸುವುದು ನಮ್ಮ ನಿಲುವಲ್ಲ. ಮೊದಲಿನಿಂದಲೂ ಈ ಸಮುದಾಯಕ್ಕೆ ಸೂಕ್ತ ಸ್ಥಾನಮಾನ ದೊರಕಬೇಕು ಎನ್ನುವ ಅಭಿಲಾಷೆ ಹಾಗೂ ಪ್ರತಿಪಾದನೆ ಮಾಡಿಕೊಂಡು ಬಂದಿದ್ದೇವೆ. ಇಂತಹ ಸುಳ್ಳು ಸುದ್ದಿಗಳನ್ನು ಹಬ್ಬಿಸುವ ಮೂಲಕ ಸಮುದಾಯದಲ್ಲಿ ನನ್ನ ಬಗ್ಗೆ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಹೇಳಿದರು.

ಓದಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕುರುಬ ಸಮಾಜದಿಂದ ಪ್ರತಿಭಟನೆ

ಪಂಚಮಸಾಲಿ ಸಮುದಾಯದ ಸ್ವಾಮೀಜಿಗಳು ಪಾದಯಾತ್ರೆಯ ಮೂಲಕ ನಡೆಸುತ್ತಿರುವ ಹೋರಾಟಕ್ಕೆ ಈಗಾಗಲೇ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ಕಾನೂನಾತ್ಮಕವಾಗಿ ನಡೆಯಬೇಕಾದ ಕೆಲಸಗಳಿಗೆ ಚಾಲನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಈ ಹೋರಾಟಕ್ಕೆ ಬೇಕಾದ ಬೆಂಬಲವನ್ನು ನಾವು ನೀಡಲು ಸಿದ್ದರಿದ್ದೇವೆ ಎಂದು ಸಚಿವರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.