ETV Bharat / state

ಎಪಿಎಲ್ ಕಾರ್ಡ್​ದಾರರಿಗೂ ಉಚಿತ ಡಯಾಲಿಸಿಸ್ ಚಿಕಿತ್ಸೆ ಚಿಂತನೆ: ಸಚಿವ ಸೋಮಣ್ಣ

author img

By

Published : Mar 21, 2023, 4:18 PM IST

Housing Minister Somanna inaugurated the anniversary
ಡಯಾಲಿಸಿಸ್ ಕೇಂದ್ರದ ಪ್ರಥಮ ವಾರ್ಷಿಕೋತ್ಸವಕ್ಕೆ ವಸತಿ ಸಚಿವ ಸೋಮಣ್ಣ ಚಾಲನೆ

ಬಿಬಿಎಂಪಿ ಆಶ್ರಯದಲ್ಲಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಮಾರುತಿ ಮಂದಿರ ವಾರ್ಡ್‌ನಲ್ಲಿ ಸಂಗೊಳ್ಳಿ ರಾಯಣ್ಣ ಡಯಾಲಿಸಿಸ್ ಕೇಂದ್ರದ ಪ್ರಥಮ ವಾರ್ಷಿಕೋತ್ಸವ ನಡೆಯಿತು.

ಬೆಂಗಳೂರು: ಸಂಗೊಳ್ಳಿ ರಾಯಣ್ಣ ಡಯಾಲಿಸಿಸ್ ಕೇಂದ್ರದಲ್ಲಿ ಒಂದು ವರ್ಷದಲ್ಲಿ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿರುವ 20ರಿಂದ 100 ರೋಗಿಗಳಿಗೆ ಡಯಾಲಿಸಿಸ್‌ ಚಿಕಿತ್ಸೆ ನೀಡಲಾಗಿದೆ. ಬಿಪಿಎಲ್‌ ಕಾರ್ಡ್​ದಾರರಿಗೆ ಸಿಗುವಂತೆ ಎಪಿಎಲ್‌ ಕಾರ್ಡ್​ ಹೊಂದಿರುವವರಿಗೆ ಉಚಿತ ಡಯಾಲಿಸಿಸ್‌ ಅವಕಾಶ ಮಾಡಿಕೊಡಲು ಚಿಂತನೆ ನಡೆಸಲಾಗುತ್ತಿದೆ. ಬಿಬಿಎಂಪಿ ಆಯುಕ್ತರೊಂದಿಗೆ ಚರ್ಚಿಸಿದ್ದು ಸದ್ಯದಲ್ಲಿ ಈ ಯೋಜನೆಯ ಕಾರ್ಯಾರಂಭ ಮಾಡಲಾಗುವುದು ಎಂದು ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ ಸೋಮಣ್ಣ ಭರವಸೆ ನೀಡಿದರು.

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾರುತಿ ಮಂದಿರ ವಾರ್ಡ್‌ನಲ್ಲಿ ಸಂಗೊಳ್ಳಿ ರಾಯಣ್ಣ ಡಯಾಲಿಸಿಸ್ ಕೇಂದ್ರದ ಪ್ರಥಮ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಸ್ಥಳೀಯ ಶಾಸಕ ವಿ. ಸೋಮಣ್ಣ ಚಾಲನೆ ನೀಡಿ ಮಾತನಾಡಿದರು.

ಸಂಗೊಳ್ಳಿ ರಾಯಣ್ಣ ಡಯಾಲಿಸಿಸ್ ಕೇಂದ್ರದಲ್ಲಿ 68 ಡಯಾಲಿಸಿಸ್ ಉಪಕರಣಗಳ ವ್ಯವಸ್ಥೆ ಮಾಡಲು ಸ್ಥಳಾವಕಾಶವಿದೆ. ಪ್ರಾರಂಭದಲ್ಲಿ 2 ಉಪಕರಣಗಳಿಂದ ಪ್ರಾರಂಭವಾಗಿ ಇದೀಗ 42 ಉಪಕರಣಗಳು ಕಾರ್ಯನಿರ್ವಹಿಸುತ್ತಿವೆ. ಒಂದು ವರ್ಷದಲ್ಲಿ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿರುವ 20,100 ರೋಗಿಗಳಿಗೆ ಡಯಾಲಿಸಿಸ್‌ ಚಿಕಿತ್ಸೆ ನೀಡಿದೆ ಎಂದು ತಿಳಿಸಿದರು.

ದುಸ್ಥಿತಿಯಲ್ಲಿದ್ದ ಜಾಗವನ್ನ ನ್ಯಾಯಾಲಯದ ಮೂಲಕ ಬಿಬಿಎಂಪಿ ವಶಕ್ಕೆ ತಗೆದುಕೊಂಡು ಅತ್ಯುತ್ತಮ ಸೌಕರ್ಯಗಳನ್ನು ಹೊಂದಿರುವ ಡಯಾಲಿಸಿಸ್‌ ಕೇಂದ್ರವನ್ನು ಪ್ರಾರಂಭಿಸಿದ್ದೇವೆ. ಅದಕ್ಕೆ ಇಲ್ಲಿನ ಜನಪ್ರತಿನಿಧಿಗಳು ಪಟ್ಟ ಕಷ್ಟ ಬಹಳಷ್ಟಿದೆ.

ಇನ್ಸ್ ಟಿಟ್ಯೂಟ್ ಆಫ್ ನೆಫ್ರೋ ಯುರಾಲಜಿ ಸಂಸ್ಥೆಯ ಮೂಲಕ ಕೇವಲ ಬಿಬಿಎಂಪಿ ವ್ಯಾಪ್ತಿಯ ಅಷ್ಟೇ ಅಲ್ಲದೇ, ಬೆಂಗಳೂರು ಗ್ರಾಮಾಂತರ, ರಾಮನಗರ ಹೀಗೆ ಸುತ್ತಲಿನ ಜಿಲ್ಲೆಗಳ ರೋಗಿಗಳು ಇಲ್ಲಿ ಚಿಕಿತ್ಸೆಯ ಲಾಭವನ್ನು ಪಡೆದುಕೊಳ್ಳುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಬಿಪಿಎಲ್‌ ಕಾರ್ಡ್‌ ಹೊಂದಿರುವ ರೋಗಿಗಳಿಗೆ ಈ ಕೇಂದ್ರದಲ್ಲಿ ಉಚಿತವಾಗಿ ಡಯಾಲಿಸಿಸ್‌ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ, ಎಪಿಎಲ್‌ ಕಾರ್ಡ್‌ ಹೊಂದಿರುವ ರೋಗಿಗಳು 700 ರೂಪಾಯಿಗಳ ಹಣ ಭರಿಸಬೇಕಾಗುತ್ತದೆ. ಇಲ್ಲಿ ಚಿಕಿತ್ಸೆಯನ್ನು ಪಡೆದುಕೊಂಡಿರುವ ರೋಗಿಗಳ ಸಂಖ್ಯೆಯನ್ನು ನೋಡಿದಲ್ಲಿ ಬಹಳಷ್ಟು ಕಡಿಮೆ ಪ್ರಮಾಣದ ಎಪಿಎಲ್‌ ಕಾರ್ಡ್‌ದಾರ ರೋಗಿಗಳು ಚಿಕಿತ್ಸೆ ಪಡೆದುಕೊಂಡಿರುವುದು ಕಂಡಬರುತ್ತದೆ. ಈ ಹಿನ್ನೆಲೆ ಎಪಿಎಲ್‌ ಕಾರ್ಡ್‌ನ ರೋಗಿಗಳಿಗೂ ಉಚಿತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳುವಂತೆ ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಆಯುಕ್ತ ಶ್ರೀ ತುಷಾರ್ ಗಿರಿನಾಥ್, ವಲಯ ಜಂಟಿ ಆಯುಕ್ತ ಲೋಕನಾಥ್, ಕ್ಲಿನಿಕಲ್‌ ವಿಭಾಗದ ಮುಖ್ಯ ಆರೋಗ್ಯಾಧಿಕಾರಿ ಡಾ. ನಿರ್ಮಲ ಬುಗ್ಗಿ, ವಲಯ ಆರೋಗ್ಯಾಧಿಕಾರಿ ಡಾ. ಮನೋರಂಜನ್ ಹೆಗ್ಡೆ, ಇನ್ಸ್ ಟಿಟ್ಯೂಟ್ ಆಫ್ ನೆಫ್ರೋ ಯುರಾಲಜಿ ಸಂಸ್ಥೆಯ ನಿರ್ದೇಶಕರಾದ ಡಾ. ಕೇಶವಮೂರ್ತಿ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸಂಗೊಳ್ಳಿ ರಾಯಣ್ಣ ಡಯಾಲಿಸಿಸ್ ಕೇಂದ್ರದಲ್ಲಿ 68 ಡಯಾಲಿಸಿಸ್ ಉಪಕರಣಗಳ ವ್ಯವಸ್ಥೆ ಮಾಡಲು ಸ್ಥಳಾವಕಾಶವಿದೆ. ಪ್ರಾರಂಭದಲ್ಲಿ 2 ಉಪಕರಣಗಳಿಂದ ಪ್ರಾರಂಭವಾಗಿ ಇದೀಗ 42 ಉಪಕರಣಗಳು ಕಾರ್ಯನಿರ್ವಹಿಸುತ್ತಿವೆ.

• ಇದುವರೆಗೆ 20,100 ಮಂದಿ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿರುವ ರೋಗಿಗಳಿಗೆ ಡಯಾಲಿಸಿಸ್ ಚಿಕಿತ್ಸೆ ನೀಡಲಾಗಿದೆ.
• ಬಿಪಿಎಲ್ ಕಾರ್ಡ್ ಹೊಂದಿರುವವರು ಉಚಿತ ಚಿಕಿತ್ಸೆ ಪಡೆಯುತ್ತಿದ್ದಾರೆ.
• ಎ.ಪಿ.ಎಲ್ ಕಾರ್ಡ್ ಹೊಂದಿರುವವರಿಗೆ 700 ರೂ.ದರ ನಿಗದಿ ಪಡಿಸಲಾಗಿದೆ.

ಇದನ್ನೂಓದಿ:ನನಗೆ ಗೋವಿಂದರಾಜನಗರ ಇದೆ, ಮತ್ತೊಂದು ಕ್ಷೇತ್ರದ ಅಗತ್ಯ ಇಲ್ಲ: ವಿ.ಸೋಮಣ್ಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.