ETV Bharat / state

ಜಿಲ್ಲಾಧಿಕಾರಿಗಳ ಜೊತೆ ನಾಳೆ ಸಿಎಂ ವಿಡಿಯೋ ಕಾನ್ಫರೆನ್ಸ್​​ನಲ್ಲಿ ಸಭೆ: ಸಚಿವ ಆರ್. ಅಶೋಕ್

author img

By

Published : Sep 9, 2020, 6:42 PM IST

ಸಚಿವ ಆರ್. ಅಶೋಕ್
ಸಚಿವ ಆರ್. ಅಶೋಕ್

ನಾಳೆ ಮುಖ್ಯಮಂತ್ರಿಗಳು ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿ, ಮಳೆ ಅನಾಹುತದ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಬೆಂಗಳೂರು: ಮತ್ತೆ ಮಳೆ ಆರಂಭವಾಗಿದ್ದು, ಇದರ ಜೊತೆಗೆ ಕೆಲ ಜಿಲ್ಲೆಗಳಲ್ಲಿ ಕೊರೊನಾ ಹೆಚ್ಚಾಗಿರುವ ಹಿನ್ನೆಲೆ ನಾಳೆ ಮುಖ್ಯಮಂತ್ರಿಗಳು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಲಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ವಿಕಾಸಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ ಮುಖ್ಯಮಂತ್ರಿಗಳು ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿ, ಮಳೆ ಅನಾಹುತದ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದರು.

ಕಂದಾಯ ಸಚಿವ ಆರ್. ಅಶೋಕ್

ನಿನ್ನೆ ರಾತ್ರಿ ಏಕಾಏಕಿ ಮಳೆ ಬಂದಿದೆ. ಬೆಂಗಳೂರಿನ ಶಾಸಕರು, ಸಚಿವರು ಕ್ಷೇತ್ರಕ್ಕೆ ಹೋಗಲು ಸೂಚನೆ ನೀಡಿದ್ದೇವೆ. ಬಿಬಿಎಂಪಿ ಅಧಿಕಾರಿಗಳಿಗೂ ಸಹ ಸೂಚನೆ ನೀಡಿದ್ದೇವೆ. ನಾನು ಕೂಡ ಅನೇಕ ಪ್ರದೇಶಗಳಿಗೆ ಭೇಟಿ ನೀಡಿದ್ದೇನೆ. ಸಚಿವ ಬೈರತಿ ಬಸವರಾಜ್ ಸೋಮಶೇಖರ್ ಅವರು ಸಹ ಹಲವು ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಸಿಎಂ ಗಮನಕ್ಕೂ ತರುತ್ತೇವೆ ಎಂದರು.

ಬೆಂಗಳೂರು ವಿಚಾರದಲ್ಲಿ ತಾವು ಹಿಂದೆ ಸರಿಯುತ್ತಿದ್ದಿರೀ ಎನ್ನುವ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ ಸಚಿವರು, ಎಲ್ಲ ಸಚಿವರಿಗೂ ಮಳೆಹಾನಿ ಪ್ರದೇಶಕ್ಕೆ ಹೋಗಲು ಸೂಚನೆ ನೀಡುತ್ತೇವೆ ಎಂದು ಹೇಳಿದರು.

ಡ್ರಗ್ಸ್ ಪ್ರಕರಣದಲ್ಲಿ ಜಮೀರ್ ಅಹ್ಮದ್ ಹೆಸರು ಪ್ರಸ್ತಾಪ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಗೃಹ ಸಚಿವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ನಾನು ಅದರ ಬಗ್ಗೆ ಏನೂ ಮಾತನಾಡುವುದಿಲ್ಲ. ತನಿಖೆ ನಡೆಯುತ್ತಿದೆ. ಗೃಹಸಚಿವರೇ ಅದರ ಬಗ್ಗೆ ಪ್ರತಿಕ್ರಿಯೆ ಕೊಡುತ್ತಾರೆ. ನಾನು ಆ ಬಗ್ಗೆ ಮಾತನಾಡುವುದಿಲ್ಲ ಎಂದು ಅಶೋಕ್ ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.