ETV Bharat / state

ಬೆಂಗಳೂರಲ್ಲಿ ಟ್ರಾಫಿಕ್ ಪೊಲೀಸರ ಕಾರ್ಯಾಚರಣೆ: ವ್ಹೀಲಿಂಗ್ ಮಾಡುತ್ತಿದ್ದ 26 ಮಂದಿ ವಿರುದ್ಧ ಕ್ರಮ

author img

By

Published : Jun 18, 2023, 11:01 PM IST

ಕಳೆದ ಆರು ತಿಂಗಳಲ್ಲಿ ವ್ಹೀಲಿಂಗ್ ಸಂಬಂಧ ದಕ್ಷಿಣ ಸಂಚಾರ ಉಪವಿಭಾಗದ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ 26 ಪ್ರಕರಣಗಳನ್ನು ದಾಖಲಿಸಲಾಗಿದೆ.

ಟ್ರಾಫಿಕ್ ಪೊಲೀಸರು
ಟ್ರಾಫಿಕ್ ಪೊಲೀಸರು

ಬೆಂಗಳೂರು : ಸಾರ್ವಜನಿಕ ರಸ್ತೆಗಳಲ್ಲಿ ದ್ವಿಚಕ್ರ ವಾಹನಗಳಲ್ಲಿ ಅಪಾಯಕಾರಿ ವ್ಹೀಲಿಂಗ್ ಮಾಡುತ್ತಿದ್ದವರ ವಿರುದ್ದ ನಗರದ ದಕ್ಷಿಣ ವಿಭಾಗದ ಸಂಚಾರ ಪೊಲೀಸರು ಹಲವು ತಿಂಗಳುಗಳ ಕಾಲ ವಿಶೇಷ ಕಾರ್ಯಾಚರಣೆ ನಡೆಸಿದ್ದು, 26 ಪ್ರಕರಣ ದಾಖಲಿಸಿ, 26 ಮಂದಿ ಸವಾರರ ವಿರುದ್ಧ ಕ್ರಮ ಕೈಗೊಂಡಿದ್ದಾರೆ.

ವ್ಹೀಲಿಂಗ್ ಪ್ರಕರಣಗಳ ತಡೆಗೆ ಸಂಚಾರಿ ಪೊಲೀಸರ ಕ್ರಮ: ದಕ್ಷಿಣ ಸಂಚಾರ ಉಪ ವಿಭಾಗದ ವ್ಯಾಪ್ತಿಯ ಚಾಮರಾಜಪೇಟೆ 5ನೇ ಕ್ರಾಸ್, ಹನುಮಂತನಗರ 7ನೇ ಕ್ರಾಸ್, ಜೆ ಪಿ ನಗರ ಕೆಳಸೇತುವೆ, ಇಲಿಯಾಸ್ ನಗರ, ಕೆ ಎಸ್ ಲೇಔಟ್ ರಿಂಗ್ ರಸ್ತೆ, ಗುಬ್ಬಲಾಳ, ಅಂಜನಾಪುರ ಸೇರಿ ವಿವಿಧ ರಸ್ತೆಗಳಲ್ಲಿ ಯುವಕರು ದ್ವಿಚಕ್ರ ವಾಹನಗಳಲ್ಲಿ ವ್ಹೀಲಿಂಗ್ ಮಾಡುವ ಪ್ರವೃತ್ತಿ ಹೆಚ್ಚಳವಾಗಿದ್ದ ಹಿನ್ನೆಲೆಯಲ್ಲಿ ಸಂಚಾರ ಪೊಲೀಸರು ವ್ಹೀಲಿಂಗ್ ಪ್ರಕರಣಗಳ ತಡೆಗೆ ಮುಂದಾಗಿದ್ದರು.

ಇದನ್ನೂ ಓದಿ: Guarantee scheme: ಬಿಜೆಪಿ ಸರ್ಕಾರದ ಬೆಲೆ ಏರಿಕೆ ಹೊಡೆತಕ್ಕೆ ತತ್ತರಿಸಿದವರಿಗಾಗಿ ಗ್ಯಾರಂಟಿ ತರಬೇಕಾಯಿತು : ಸಚಿವ ದಿನೇಶ್ ಗುಂಡೂರಾವ್

ಸವಾರರನ್ನು ಪತ್ತೆಹಚ್ಚಿ ಪ್ರಕರಣ ದಾಖಲು: ಈ ನಿಟ್ಟಿನಲ್ಲಿ ಮಫ್ತಿಯಲ್ಲಿ ಸಂಚಾರ ಪೊಲೀಸರು ರಸ್ತೆಗಳಿಗೆ ಬ್ಯಾರಿಕೇಡ್ ಅಳವಡಿಸಿ, ವ್ಹೀಲಿಂಗ್ ಮಾಡುವ ಪುಂಡರನ್ನು ಹಿಡಿಯುವಲ್ಲಿ ಪ್ರಕರಣ ದಾಖಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಂತೆಯೇ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ವ್ಹೀಲಿಂಗ್ ವಿಡಿಯೋಗಳು, ಸಾಮಾಜಿಕ ಜಾಲತಾಣ ಖಾತೆಗಳ ಪರಿಶೀಲನೆ ವೇಳೆ ಪತ್ತೆಯಾದ ವ್ಹೀಲಿಂಗ್ ವಾಹನಗಳು ಹಾಗೂ ಸವಾರರನ್ನು ಪತ್ತೆಹಚ್ಚಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: ಕೇಂದ್ರ ಆರೋಗ್ಯ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ.. ರಾಯಚೂರಲ್ಲಿ ಏಮ್ಸ್ ಸ್ಥಾಪನೆ ಹೋರಾಟಕ್ಕೆ ಬಲ

ವಾಹನ ಮಾಲೀಕರಿಗೆ ನೋಟಿಸ್ : ದಕ್ಷಿಣ ಸಂಚಾರ ಉಪವಿಭಾಗದ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳೆದ ಆರು ತಿಂಗಳಲ್ಲಿ ವ್ಹೀಲಿಂಗ್ ಸಂಬಂಧ 26 ಪ್ರಕರಣ ದಾಖಲಿಸಲಾಗಿದೆ. ಸಿಕ್ಕಿಬಿದ್ದ 26 ಮಂದಿ ಸವಾರರ ಪೈಕಿ 21 ಮಂದಿ 18 ವರ್ಷಕ್ಕಿಂತ ಮೇಲ್ಪಟ್ಟವರು ಹಾಗೂ 5 ಮಂದಿ ಅಪ್ರಾಪ್ತರು ಇದ್ದಾರೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ವಾಹನ ಮಾಲೀಕರಿಗೆ ನೋಟಿಸ್ ನೀಡಿ, ಸವಾರರಿಂದ ಮುಚ್ಚಳಿಕೆ ಬರೆಸಿಕೊಂಡು ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

ಇದನ್ನೂ ಓದಿ: ಮುಂದೆ ಎಸ್ಟಿ ಸಮುದಾಯ ವ್ಯಕ್ತಿ ಸಿಎಂ ಆಗಬೇಕು; ಸಿಎಂ ಆಗೋ ಅರ್ಹತೆ ಇರೋದು ಸತೀಶ್ ಜಾರಕಿಹೊಳಿಗೆ ಮಾತ್ರ : ಸಚಿವ ಕೆ.ಎನ್ ರಾಜಣ್ಣ

ವ್ಹೀಲಿಂಗ್ ಮಾಡುವವರ ವಿರುದ್ಧ ಕಾರ್ಯಾಚರಣೆ: ಆರೋಪಿಗಳು ಎರಡನೇ ಬಾರಿ ವ್ಹೀಲಿಂಗ್ ಪ್ರಕರಣದಲ್ಲಿ ಭಾಗಿಯಾಗಿಯಾದರೆ ಕಠಿಣ ಕ್ರಮದ ಎಚ್ಚರಿಕೆ ನೀಡಲಾಗಿದೆ. ನ್ಯಾಯಾಲಯದಲ್ಲಿ ಶಿಕ್ಷೆಯಾದ ಬಳಿಕ ಆರೋಪಿಗಳ ವಾಹನಗಳ ನೋಂದಣಿ ಪ್ರಮಾಣ ಪತ್ರ (ಆರ್‌ಸಿ) ಮತ್ತು ಚಾಲನಾ ಪರವಾನಗಿ (ಡಿಎಲ್) ರದ್ಧುಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಮುಂದಿನ ದಿನಗಳಲ್ಲಿಯೂ ವ್ಹೀಲಿಂಗ್ ಮಾಡುವವರ ವಿರುದ್ಧ ಕಾರ್ಯಾಚರಣೆ ಮುಂದುವರೆಸುವುದಾಗಿ ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಅರ್ಧ ಅವಧಿಗೆ ಸಿಎಂ ಅಂತಾ ಯಾರೂ ಹೇಳಿಲ್ಲ, ಐದು ವರ್ಷ ಅವರೇ ಮುಂದುವರೆಯುತ್ತಾರೆ: ಸಚಿವ ಸತೀಶ್ ಜಾರಕಿಹೊಳಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.