ETV Bharat / state

ಆನೇಕಲ್​ನಲ್ಲಿ ಡಬಲ್​ ಮರ್ಡರ್: ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

author img

By

Published : Oct 22, 2021, 11:35 AM IST

ಅತ್ತಿಬೆಲೆ-ಟಿವಿಎಸ್ ರಸ್ತೆಯಲ್ಲಿ ಇಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ.

two-persons-murdered-in-anekal
ಆನೇಕಲ್​ನಲ್ಲಿ ಡಬಲ್​ ಮರ್ಡರ್​... ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಆನೇಕಲ್: ಇಲ್ಲಿನ ಅತ್ತಿಬೆಲೆ-ಟಿವಿಎಸ್ ರಸ್ತೆಯಲ್ಲಿ ಇಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೈದಿರುವ ಘಟನೆ ನಿನ್ನೆ ರಾತ್ರಿ ನಡೆದಿದ್ದು, ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.

ಕೊಲೆಯಾದವರನ್ನು ಅತ್ತಿಬೆಲೆಯ ದೀಪಕ್ ಹಾಗೂ ಮಾಯಸಂದ್ರದ ಬಾಸ್ಕರ್ ಎಂದು ಗುರುತಿಸಲಾಗಿದೆ. ಹಣಕಾಸಿನ ವ್ಯವಹಾರದಲ್ಲಿ ಗಲಾಟೆ ನಡೆದು ಮತ್ತೊಂದು ಕಡೆಯವರು ಈ ಇಬ್ಬರನ್ನು ಅಟ್ಟಾಡಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

two-persons-murdered-in-anekal
ಕೊಲೆಯಾದವರು

ಈ ಬಗ್ಗೆ ಮಾಹಿತಿ ತಿಳಿದ ಅತ್ತಿಬೆಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳದಲ್ಲಿ ಮೃತದೇಹಗಳ ಪಕ್ಕದಲ್ಲಿ ಎರಡು ಬೈಕ್​ಗಳು ಪತ್ತೆಯಾಗಿವೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಇದನ್ನೂ ಓದಿ: ಬಾಗಲಕೋಟೆ: ತಡರಾತ್ರಿ ಕಾರು ಪಲ್ಟಿಯಾಗಿ ದುರಂತ, ಸ್ಥಳದಲ್ಲೇ ನಾಲ್ವರ ದುರ್ಮರಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.