ETV Bharat / state

UPSC ತರಬೇತಿ ಪಡೆಯುವ ಹಿಂದುಳಿದ ವಿದ್ಯಾರ್ಥಿಗಳಿಗೆ ಉಚಿತ ವಸತಿ ವ್ಯವಸ್ಥೆ: ಸಚಿವ ತಂಗಡಗಿ

author img

By

Published : Jul 21, 2023, 9:04 PM IST

Minister Shivraj then spoke.
ಹಿರಿಯ ಅಧಿಕಾರಿಗಳ ಸಭೆಯಲ್ಲಿ ಸಚಿವ ಶಿವರಾಜ್ ತಂಗಡಗಿ ಮಾತನಾಡಿದರು.

ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಸಚಿವ ಶಿವರಾಜ್ ತಂಗಡಗಿ ಅವರು ವಿವಿಧ ನಿಗಮದ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು. ಈ ವೇಳೆ ಶೈಕ್ಷಣಿಕ , ಸ್ವಾವಲಂಬಿ ಸಾಲ, ಗಂಗಾ ಕಲ್ಯಾಣ ಸೇರಿದಂತೆ ನಾನಾ ಯೋಜನೆಗಳ ಕುರಿತಾಗಿ ಚರ್ಚಿಸಿದರು.

ಬೆಂಗಳೂರು: ಕೇಂದ್ರ ಲೋಕಾಸೇವಾ ಆಯೋಗದ (ಯುಪಿಎಸ್ಸಿ) ಪರೀಕ್ಷೆಗೆ ಸಿದ್ಧತೆ ನಡೆಸುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಬೆಂಗಳೂರು ಹಾಗೂ ದೆಹಲಿಯಲ್ಲಿ ಉಚಿತ ವಸತಿ ವ್ಯವಸ್ಥೆ ಕಲ್ಪಿಸುವ ಬಗ್ಗೆ ಅಗತ್ಯವಾದ ಕ್ರಮ ವಹಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಅಧಿಕಾರಿಗಳಿಗೆ ಸೂಚನೆ‌ ನೀಡಿದ್ದಾರೆ.

ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಶುಕ್ರವಾರ ವಿವಿಧ ನಿಗಮದ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಸಚಿವರು ಈ ಸೂಚನೆ ನೀಡಿದರು. ಯುಪಿಎಸ್​​​ಸಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ‌‌ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ದೆಹಲಿ ಮತ್ತು ಬೆಂಗಳೂರಿನಲ್ಲಿ ಪ್ರತ್ಯೇಕ ವಸತಿ ವ್ಯವಸ್ಥೆ ಕಲ್ಪಿಸುವಂತೆ ಮನವಿ‌ ಮಾಡಿದರು. ಗ್ರಾಮೀಣ ಭಾಗದ ಹಿಂದುಳಿದ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವ್ಯವಸ್ಥೆ ಕಲ್ಪಿಸಬೇಕು. ಇದಕ್ಕೆ ಸಂಬಂಧಿಸಿದಂತೆ ಸಂಬಂಧ ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸಿ, ವರದಿ ಸಿದ್ಧಪಡಿಸುವಂತೆ ಇಲಾಖಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.‌

ಶೇ. 100ರಷ್ಟು ಗುರಿ ಸಾಧಿಸಿ: ಬಜೆಟ್ ನಲ್ಲಿ ಇಲಾಖೆಗೆ ನೀಡಲಾಗಿರುವ ಹಣವನ್ನು ಸೂಕ್ತವಾಗಿ ಬಳಸಿಕೊಳ್ಳಬೇಕು. ಮಾರ್ಚ್ ವೇಳೆಗೆ ಶೇ.100ರಷ್ಟು ಗುರಿ ಸಾಧಿಸಬೇಕು. ಮಾರ್ಚ್ ತಿಂಗಳ ವರೆಗೆ ಹಣ ಉಳಿಸಿಕೊಂಡು ತರಾತುರಿಯಲ್ಲಿ ಹಣ ವ್ಯಯಿಸುವ ಕೆಲಸ ಆಗಬಾರದು. ಅವಧಿಗೂ ಮುನ್ನ ಬಳಕೆ ಮಾಡಿದರೆ ಮುಖ್ಯಮಂತ್ರಿಗಳ ಬಳಿ ಹೆಚ್ಚಿನ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಗಂಗಾ ಕಲ್ಯಾಣ ಯೋಜನೆಯ ಫಲಾನುಭವಿಗಳ ಆಯ್ಕೆ ಪಟ್ಟಿಯನ್ನು ಪ್ರಸ್ತುತ ಕ್ಷೇತ್ರದಲ್ಲಿ ಆಯಾ ಶಾಸಕರು ಕಳುಹಿಸುತ್ತಿರುವುದು ತಡವಾಗುತ್ತಿದೆ ಎಂದು ಅಧಿಕಾರಿಗಳು ಸಚಿವರ ಗಮನಕ್ಕೆ ತಂದರು.‌ ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈ ಕೂಡಲೇ ಶಾಸಕರಿಗೆ ನವೆಂಬರ್ ಒಳಗೆ ಯೋಜನೆಯ ಫಲಾನುಭವಿಗಳ ಆಯ್ಕೆ ಪಟ್ಟಿ ಸಿದ್ಧಪಡಿಸಿ‌ ಕಳುಹಿಸುವಂತೆ ಪತ್ರ ಬರೆಯಿರಿ ಎಂದು ಸಲಹೆ ನೀಡಿದರು.

ಇಲಾಖೆಯಲ್ಲಿನ ಶೈಕ್ಷಣಿಕ ಸಾಲ, ಸ್ವಾವಲಂಬಿ ಸಾಲ, ಗಂಗಾ ಕಲ್ಯಾಣ ಯೋಜನೆ ಸೇರಿದಂತೆ ಪ್ರತಿಯೊಂದು ಯೋಜನೆಗಳು ಜನರಿಗೆ ಪರಿಣಾಮಕಾರಿಯಾಗಿ ತಲುಪಬೇಕು. ಇಲಾಖೆ ವ್ಯಾಪ್ತಿಗೆ ಬರುವ ನಿಗಮಗಳ ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿಯೇ ಇಲ್ಲ. ಈ ನಿಟ್ಟಿನಲ್ಲಿ ಹಿಂದುಳಿದ ವರ್ಗಗಳ ಇಲಾಖೆಯಲ್ಲಿನ ಯೋಜನೆಗಳ ಬಗ್ಗೆ ರಾಜ್ಯದ ಜನರಿಗೆ ಮಾಹಿತಿ ಒದಗಿಸಬೇಕು. ಈ ಬಗ್ಗೆ ಅಧಿಕಾರಿಗಳು ಗಮನವಹಿಸಬೇಕು ಎಂದು ಸಚಿವರು ಸೂಚಿಸಿದರು.

ಸಭೆಯಲ್ಲಿ ಇಲಾಖೆ ಕಾರ್ಯದರ್ಶಿ ತುಳಸಿ ಮದಿನೇನಿ, ಒಕ್ಕಲಿಗ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ.ಮುರಳೀಧರ್, ಲಿಂಗಾಯತ ಅಭಿವೃದ್ಧಿ ನಿಗಮದ ಅಮರೇಗೌಡ ಮಾಲಿ ಪಾಟೀಲ್, ಮಧುಸೂದನ್ ರೆಡ್ಡಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.


ಕೇಂದ್ರಕ್ಕೆ ಪತ್ರ: ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ಎಸ್ ತಂಗಡಗಿ ಅವರು, ಎಫ್ ಎಂ ರೈನ್ ಬೋ ಕನ್ನಡ ಕಾಮನಬಿಲ್ಲು ಪ್ರಸಾರಕ್ಕೆ ಅಡ್ಡಿಪಡಿಸದಂತೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಇದನ್ನೂಓದಿ: ಬೆಂಗಳೂರು - ಧಾರವಾಡ ವಂದೇ ಭಾರತ್ ರೈಲು ಸೇವೆಗೆ ಜನರಿಂದ ಉತ್ತಮ ಸ್ಪಂದನೆ..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.