ETV Bharat / state

ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ತೆರಳುವ ಕ್ರೀಡಾಪಟುಗಳು ಸೇರಿ ವಿದೇಶಕ್ಕೆ ಹೋಗುವವರೆಲ್ಲರಿಗೂ 22ರಿಂದ ಲಸಿಕೆ- ಡಿಸಿಎಂ

author img

By

Published : Jun 20, 2021, 4:22 PM IST

ಲಸಿಕೆ ಕೇಂದ್ರಕ್ಕೆ ಬರುವ ಅರ್ಹ ಲಸಿಕಾಂಕ್ಷಿಗಳ ಸ್ವಯಂ ಘೋಷಣಾ ಪತ್ರ ಸೇರಿ ಇತರೆ ದಾಖಲೆಗಳನ್ನು ಪರಿಶೀಲಿಸಬೇಕು. ಲಸಿಕೆ ಪಡೆದ ದೃಢೀಕರಣ ಪತ್ರವನ್ನು ತಕ್ಷಣವೇ ಆನ್‌ಲೈನ್‌ನಲ್ಲಿ ಅಪ್‌ಲೋಡ್‌ ಮಾಡಿಸಬೇಕು. ಈಗಾಗಲೇ ಮೊದಲ ಡೋಸ್‌ ಪಡೆದಿರುವವರು ತಮ್ಮ ಪಾಸ್‌ಪೋರ್ಟ್‌ ಸಂಖ್ಯೆಯನ್ನು ದಾಖಲು ಮಾಡಿರದಿದ್ದರೆ ಎರಡನೇ ಡೋಸ್‌ ಪಡೆಯಲು ಬರುವಾಗ ಕಡ್ಡಾಯವಾಗಿ ದಾಖಲಿಸಿಕೊಳ್ಳಬೇಕಾಗಿದೆ..

C N Ashwath Narayan
ಡಿಸಿಎಂ ಡಾ.ಸಿ.ಎನ್.‌ ಅಶ್ವತ್ಥನಾರಾಯಣ

ಬೆಂಗಳೂರು : ಕ್ರೀಡಾಪಟುಗಳು ಸೇರಿದಂತೆ ವ್ಯಾಸಂಗ ಅಥವಾ ಉದ್ಯೋಗದ ಸಲುವಾಗಿ ವಿದೇಶಕ್ಕೆ ತೆರಳುವವರಿಗೆ ಬೆಂಗಳೂರು ನಗರ ವಿಶ್ವವಿದ್ಯಾಲಯದ ಸೆಂಟ್ರಲ್‌ ಕಾಲೇಜು ಆವರಣದಲ್ಲಿ ಜೂನ್‌ 22ರಿಂದ ಕೋವಿಡ್ ಲಸಿಕೆ ಹಾಕಲಾಗುವುದು ಎಂದು ಡಿಸಿಎಂ ಡಾ.ಸಿ ಎನ್ ಅಶ್ವತ್ಥ್‌ ನಾರಾಯಣ ಹೇಳಿದರು.

ಟೊಕಿಯೋದಲ್ಲಿ ನಡೆಯುವ ಒಲಿಂಪಿಕ್‌ ಕ್ರೀಡಾಕೂಟಕ್ಕೆ ತೆರಳುವ ಕ್ರೀಡಾಪಟುಗಳು ಸೇರಿದಂತೆ ವಿದೇಶಕ್ಕೆ ವ್ಯಾಸಂಗ, ಉದ್ಯೋಗಕ್ಕೆಂದು ತೆರಳುವ ಎಲ್ಲರೂ ಇಲ್ಲಿ ಬಂದು ಲಸಿಕೆ ಪಡೆಯಬಹುದು. ಮಂಗಳವಾರ ಬೆಳಗ್ಗೆ 10.30 ಗಂಟೆಯಿಂದ ಲಸಿಕೆ ನೀಡಲಾಗುತ್ತದೆ. ಇನ್ನು, ಈ ಮೊದಲೇ ಸೆಂಟ್ರಲ್‌ ಕಾಲೇಜ್‌ನಲ್ಲಿ ವಿದೇಶಕ್ಕೆ ತೆರಳುವ 1,500ಕ್ಕೂ ಹೆಚ್ಚು ವಿದ್ಯಾರ್ಥಿ/ಉದ್ಯೋಗಿಗಳಿಗೆ ಮೊದಲ ಡೋಸ್‌ ಕೊಡಲಾಗಿದೆ.

ಸಮರ್ಥ ಅಧಿಕಾರಿ : ಇದಕ್ಕಾಗಿ ಪಾಲಿಕೆಯ 8 ವಲಯಗಳ ಆಯುಕ್ತರನ್ನು 'ಸಮರ್ಥ ಅಧಿಕಾರಿ' (competent authority) ಗಳನ್ನಾಗಿ ನೇಮಿಸಲಾಗಿದ್ದು, ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ ಪೂರ್ವ ವಲಯದ ಆರೋಗ್ಯಾಧಿಕಾರಿಯನ್ನು 'ಸಮರ್ಥ ಅಧಿಕಾರಿ' ಎಂದು ಗುರುತಿಸಲಾಗಿದೆ. ಈ ವರ್ಗದ ಜನರಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ 28 ದಿನಗಳಲ್ಲೇ ಎರಡನೇ ಡೋಸ್‌ ನೀಡಲಾಗುವುದು.

ಲಸಿಕೆ ಕೇಂದ್ರಕ್ಕೆ ಬರುವ ಅರ್ಹ ಲಸಿಕಾಂಕ್ಷಿಗಳ ಸ್ವಯಂ ಘೋಷಣಾ ಪತ್ರ ಸೇರಿ ಇತರೆ ದಾಖಲೆಗಳನ್ನು ಪರಿಶೀಲಿಸಬೇಕು. ಲಸಿಕೆ ಪಡೆದ ದೃಢೀಕರಣ ಪತ್ರವನ್ನು ತಕ್ಷಣವೇ ಆನ್‌ಲೈನ್‌ನಲ್ಲಿ ಅಪ್‌ಲೋಡ್‌ ಮಾಡಿಸಬೇಕು. ಈಗಾಗಲೇ ಮೊದಲ ಡೋಸ್‌ ಪಡೆದಿರುವವರು ತಮ್ಮ ಪಾಸ್‌ಪೋರ್ಟ್‌ ಸಂಖ್ಯೆಯನ್ನು ದಾಖಲು ಮಾಡಿರದಿದ್ದರೆ ಎರಡನೇ ಡೋಸ್‌ ಪಡೆಯಲು ಬರುವಾಗ ಕಡ್ಡಾಯವಾಗಿ ದಾಖಲಿಸಿಕೊಳ್ಳಬೇಕಾಗಿದೆ.

ಇದನ್ನೂ ಓದಿ: ಖುಷಿ ಸುದ್ದಿ; ಕೆಎಸ್​ಆರ್​ಟಿಸಿ, ಬಿಎಂಟಿಸಿ ಸಂಚಾರ ನಾಳೆಯಿಂದ ಆರಂಭ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.