ETV Bharat / state

ಕರ ವಸೂಲಿಗಾರರು, ಗುಮಾಸ್ತರಿಗೆ ಬಡ್ತಿ ನೀಡುವ ಬಗ್ಗೆ ಪರಿಶೀಲನೆ: ಸಚಿವ ಈಶ್ವರಪ್ಪ

author img

By

Published : Feb 3, 2021, 3:26 PM IST

ಗ್ರಾಮ ಪಂಚಾಯಿತಿಗಳಲ್ಲಿ ಜಿಲ್ಲಾ ಪಂಚಾಯತಿಯಿಂದ ಅನುಮೋದನೆಗೊಂಡ ಕರ ವಸೂಲಿಗಾರರು ಮತ್ತು ಗುಮಾಸ್ತರು ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, ಅವರಿಗೆ ಬಡ್ತಿ ನೀಡಬೇಕೆಂಬ ಬೇಡಿಕೆ ಇದೆ. ಕೋವಿಡ್ ಕಾರಣದಿಂದ ಸಾಧ್ಯವಾಗಿಲ್ಲ. ಇವರಿಗೆ ಅನುಕೂಲ ಮಾಡಿಕೊಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

Minister K.S.Eshwarappa
ಸಚಿವ ಕೆ.ಎಸ್. ಈಶ್ವರಪ್ಪ

ಬೆಂಗಳೂರು: ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ ವಸೂಲಿಗಾರರು ಮತ್ತು ಗುಮಾಸ್ತರುಗಳಿಗೆ ಬಡ್ತಿ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‍ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ವಿಧಾನಸಭೆಯಲ್ಲಿ ಇಂದು ತಿಳಿಸಿದ್ದಾರೆ.

ಪ್ರಶ್ನೋತ್ತರ ವೇಳೆ ಮಾಲೂರು ಶಾಸಕ ನಂಜೇಗೌಡ ಕೆ.ವೈ. ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಗ್ರಾಮ ಪಂಚಾಯಿತಿಗಳಲ್ಲಿ ಜಿಲ್ಲಾ ಪಂಚಾಯಿತಿಯಿಂದ ಅನುಮೋದನೆಗೊಂಡ ಕರ ವಸೂಲಿಗಾರರು ಮತ್ತು ಗುಮಾಸ್ತರು ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, ಅವರಿಗೆ ಬಡ್ತಿ ನೀಡಬೇಕೆಂಬ ಬೇಡಿಕೆ ಇದೆ. ಕೋವಿಡ್ ಕಾರಣದಿಂದ ಸಾಧ್ಯವಾಗಿಲ್ಲ. ಇವರಿಗೆ ಅನುಕೂಲ ಮಾಡಿಕೊಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ಸಚಿವ ಕೆ.ಎಸ್. ಈಶ್ವರಪ್ಪ

ಇದಕ್ಕೂ ಮುನ್ನ ಶಾಸಕ ನಂಜೇಗೌಡ ಮಾತನಾಡಿ, ಕೋಲಾರದಲ್ಲಿ 173 ಕರ ವಸೂಲಿಗಾರರು, 24 ಗುಮಾಸ್ತರು ಸೇರಿದಂತೆ 197 ಮಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದರಲ್ಲಿ ಕೆಲವರು ನಿವೃತ್ತಿ ಅಂಚಿನಲ್ಲಿದ್ದಾರೆ. ಕೂಡಲೇ ಇದರ ಬಗ್ಗೆ ಗಮನಹರಿಸಬೇಕೆಂದು ಮನವಿ ಮಾಡಿದರು.

ಇದಕ್ಕೆ ದನಿಗೂಡಿಸಿದ ಜೆಡಿಎಸ್ ಶಾಸಕ ಶಿವಲಿಂಗೇಗೌಡ, ಇದರಲ್ಲಿ ಕೆಲವರು ಬಿಎ, ಬಿಎಡ್, ಎಂಎ ಸೇರಿದಂತೆ ವಿವಿಧ ಪದವೀಧರರಿದ್ದಾರೆ. ಕೆಲವು ಕಡೆ 70-30 ಅನುಪಾತದಲ್ಲಿ ಬಡ್ತಿ ನೀಡಲಾಗಿದೆ. ಉಳಿದ ಕಡೆ ಶೇ. 30ರಷ್ಟು ಹುದ್ದೆಗಳು ಖಾಲಿಯಿವೆ. ಅದರಲ್ಲೂ ಕಾರ್ಯದರ್ಶಿ ಹುದ್ದೆಗಳು ಖಾಲಿಯಿದ್ದು, ಭರ್ತಿ ಮಾಡಿಕೊಂಡಿಲ್ಲ. ಕೂಡಲೇ ಬಡ್ತಿ ನೀಡಬೇಕೆಂದು ಮನವಿ ಮಾಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.