ETV Bharat / state

ತೀರ್ಪು ನ್ಯಾಯಸಮ್ಮತವಾಗಿದೆ: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ

author img

By

Published : Sep 30, 2020, 4:13 PM IST

ಸುಮಾರು 28 ವರ್ಷಗಳ ಬಳಿಕ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಇಂದು ಹೊರ ಬಿದ್ದಿದ್ದು, ಪ್ರಕರಣದ ಎಲ್ಲರನ್ನೂ ನ್ಯಾಯಾಲಯ ಆರೋಪದಿಂದ ಮುಕ್ತಗೊಳಿಸಿದೆ. ಈ ತೀರ್ಪನ್ನು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ವಾಗತಿಸಿದ್ದಾರೆ.

Visheshwara hegde kageri
Visheshwara hegde kageri

ಬೆಂಗಳೂರು: ಅಯೋಧ್ಯೆ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಯುತವಾದ ತೀರ್ಪು ಬಂದಿದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ಇಪ್ಪತ್ತೆಂಟು ವರ್ಷದ ನಂತರ ಈ ತೀರ್ಪು ಬಂದಿದ್ದು, ಲಖನೌ ವಿಶೇಷ ಸಿಬಿಐ ಕೋರ್ಟ್ ನ್ಯಾಯಾಧೀಶರಾದ ಎಸ್.ಕೆ.ಯಾದವ್ ಅವರು ಪರಿಪೂರ್ಣವಾಗಿ ಎಲ್ಲಾ ಅಂಶಗಳನ್ನು ಸುಧೀರ್ಘವಾಗಿ ಅವಲೋಕನ ಮಾಡಿದ್ದಾರೆ. ಆರೋಪಿಗಳ ವಿರುದ್ಧ ಯಾವುದೇ ಸಾಕ್ಷಿಗಳು ಲಭ್ಯವಿಲ್ಲವೆಂದು ಹಾಗೂ ಇಂದು ನಡೆದಿರುವ ಘಟನೆಗಳು ಪೂರ್ವ ಯೋಜಿತವಲ್ಲವೆಂದು ತಿಳಿಸಿದ್ದು, ಎಲ್ಲರನ್ನೂ ನ್ಯಾಯಾಲಯ ಆರೋಪದಿಂದ ಮುಕ್ತಗೊಳಿಸಿದ ಈ ತೀರ್ಪನ್ನು ನಾವು ಮನಃಪೂರ್ವಕವಾಗಿ ಸ್ವಾಗತಿಸುತ್ತೇನೆ ಎಂದು ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.