ETV Bharat / state

ಮತದಾರರ ಮಾಹಿತಿ ಕಳವು ಪ್ರಕರಣ: ವಿಚಾರಣೆಗೆ ಹಾಜರಾದ ಐಎಎಸ್ ಅಧಿಕಾರಿ

author img

By

Published : Dec 3, 2022, 9:05 PM IST

voter-id-theft-case-interrogation-of-ias-officer
ಮತದಾರರ ಮಾಹಿತಿ ಕಳವು ಪ್ರಕರಣ : ವಿಚಾರಣೆಗೆ ಹಾಜರಾದ ಐಎಎಸ್ ಅಧಿಕಾರಿ

ಮತದಾರರ ಮಾಹಿತಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಐಎಎಸ್ ಅಧಿಕಾರಿ ರಂಗಪ್ಪ ಅವರನ್ನು ವಿಚಾರಣೆ ನಡೆಸಲಾಗಿದೆ. ಐಎಎಸ್ ಅಧಿಕಾರಿ ಶ್ರೀನಿವಾಸ್ ಅವರು ಅನಾರೋಗ್ಯ ಕಾರಣದಿಂದ ವಿಚಾರಣೆಗೆ ಗೈರಾಗಿರುವುದಾಗಿ ತಿಳಿದು ಬಂದಿದೆ.

ಬೆಂಗಳೂರು: ಮತದಾರರ ಮಾಹಿತಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಐಎಎಸ್ ಅಧಿಕಾರಿ ರಂಗಪ್ಪ ಅವರನ್ನು ವಿಚಾರಣೆ ನಡೆಸಲಾಗಿದೆ. ಹಲಸೂರು ಗೇಟ್ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಜಗದೀಶ್ ವಿಚಾರಣೆ ನಡೆಸಿದ್ದಾರೆ. ಈ ವೇಳೆ, ಅವರಿಗೆ ಸುಮಾರು‌ 40 ಕ್ಕೂ ಹೆಚ್ಚು ಪ್ರಶ್ನೆ ಕೇಳಿ ವಿಚಾರಣೆ ನಡೆಸಲಾಗಿದ್ದು, ಈ ವೇಳೆ ರಂಗಪ್ಪ ಕೇವಲ 15 ಪ್ರಶ್ನೆಗಳಿಗೆ ಮಾತ್ರ ಉತ್ತರ ನೀಡಿದ್ದಾರೆ ಎನ್ನಲಾಗಿದೆ.

ಇನ್ನು ನಾನು ಆರ್​ಒಗಳಿಗೆ ಯಾವುದೇ ಅನುಮತಿ‌ ಕೊಟ್ಟಿಲ್ಲ. ನನಗೂ ಇದಕ್ಕೂ ಸಂಬಂಧ ಇಲ್ಲ ಎಂದಷ್ಟೆ ಹೇಳಿರುವ ರಂಗಪ್ಪ ಅವರ ಎದುರು ಕೆಲ ದಾಖಲೆಗಳನ್ನು ಇಟ್ಟು ಪೊಲೀಸರು ವಿಚಾರಣೆ ನಡೆಸಿದ್ದಾರೆ‌ ಎಂದು ತಿಳಿದು ಬಂದಿದೆ.

ವಿಚಾರಣೆಗೆ ಗೈರಾದ ಐಎಎಸ್ ಅಧಿಕಾರಿ ಶ್ರೀನಿವಾಸ್ : ಐಎಎಸ್ ಅಧಿಕಾರಿ ಶ್ರೀನಿವಾಸ್ ಅವರು ವಿಚಾರಣೆಗೆ ಗೈರಾಗಿದ್ದು, ಮುಂದಿನ ವಿಚಾರಣೆಗೆ ಹಾಜರಾಗುವಾಗ ದಾಖಲೆ ಸಮೇತ ಬರುವಂತೆ ಸೂಚಿಸಲಾಗಿದೆ. ಇಂದಿನ ವಿಚಾರಣೆಗೆ ಶ್ರೀನಿವಾಸ್ ಅನಾರೋಗ್ಯದ ಹಿನ್ನೆಲೆ ಗೈರಾಗಿದ್ದರು ಎಂದು ಮೂಲಗಳಿಂದ ತಿಳಿದು ಬಂದಿದೆ.

ಇದನ್ನೂ ಓದಿ : ಮತದಾರರ ಮಾಹಿತಿ ಕಳವು ಹಗರಣದಲ್ಲಿ ಮೋದಿ ಸರ್ಕಾರವೂ ಭಾಗಿಯಾಗಿದೆ: ಸುರ್ಜೇವಾಲ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.