ETV Bharat / state

ಪೆಟ್ರೋಲ್ ಬೆಲೆ ಏರಿಕೆ ಆಗಿದ್ರಿಂದ ಎಲೆಕ್ಟ್ರಿಕ್ ವೆಹಿಕಲ್ ತರ್ತಿದ್ದೇವೆ: ಡಿಸಿಎಂ ಅಶ್ವತ್ಥ ನಾರಾಯಣ

author img

By

Published : Jul 14, 2021, 3:33 PM IST

ರಾಜ್ಯದಲ್ಲಿ ಪೆಟ್ರೋಲ್​ ಬೆಲೆ ಏರಿಕೆಯಾದ ಕಾರಣದಿಂದ ನಮ್ಮ ಸರ್ಕಾರ ಎಲೆಕ್ಟ್ರಿಕ್ ವಾಹನಗಳನ್ನು ತರುತ್ತಿದೆ ಎಂದು ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

DCM Ashwath Narayan
ಡಿಸಿಎಂ ಅಶ್ವತ್ಥನಾರಾಯಣ

ಬೆಂಗಳೂರು: ಜನಸಂಖ್ಯೆ ಮಿತಿ ಕುರಿತು ಎಲ್ಲೆಡೆ ಚರ್ಚೆಯಾಗಬೇಕು. ಜನಾಭಿಪ್ರಾಯ ಹೊರಬರಬೇಕು ಎಂದು ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕವಾಗಿ ಅದು ಚರ್ಚೆಗೆ ಬರಲಿ, ಈ ಕುರಿತಾಗಿ ಹಾದಿ ಬೀದಿಯಲ್ಲಿ ಮಾತನಾಡುವುದು ಸರಿಯಲ್ಲ ಎಂದರು.

ಅಭಿವೃದ್ಧಿ, ಪೆಟ್ರೋಲ್ ಬೆಲೆ ಏರಿಕೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಹಲವು ವಿಚಾರಗಳನ್ನು ಯಾರೂ ಮುಟ್ಟಿರಲಿಲ್ಲ. ಇಂತಹ ವಿಚಾರಗಳನ್ನು ನಾವು ಕೈಗೆತ್ತಿಕೊಂಡು ಸರಿ ಮಾಡ್ತಿದ್ದೇವೆ. ರಾಷ್ಟ್ರೀಯ ಶಿಕ್ಷಣ ನೀತಿ, 50 ಕೋಟಿ ಜನರಿಗೆ ಆರೋಗ್ಯ ವಿಮೆ, ಪೆಟ್ರೋಲ್ ಬೆಲೆ ಏರಿರೋದ್ರಿಂದ ಎಲೆಕ್ಟ್ರಿಕ್ ವೆಹಿಕಲ್ ತರ್ತಿದ್ದೇವೆ. ನಾವು ಅಭಿವೃದ್ಧಿ ವಿಚಾರದಲ್ಲೂ ಮುಂದಿದ್ದೇವೆ ಎಂದು ಕೇಂದ್ರ ಸರ್ಕಾರವನ್ನು ಸಮರ್ಥಿಸಿಕೊಂಡರು.

ಮೂರನೇ ಅಲೆಗೆ ಸಿದ್ಧತೆ:

ಮೂರನೇ ಅಲೆ ಕಾಣಿಸಿಕೊಳ್ಳುತ್ತಿದ್ದು, ಅದಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದೇವೆ. ಉತ್ತಮ ಆರೋಗ್ಯ ವ್ಯವಸ್ಥೆ ಕಟ್ಟಿಕೊಳ್ಳುತ್ತಿದ್ದೇವೆ. ಕೋವಿಡ್ ಪರೀಕ್ಷೆಗಳ ಸಂಖ್ಯೆ ಹೆಚ್ಚಳ‌ ಮಾಡುತ್ತಿದ್ದೇವೆ. ಮನೆಯಲ್ಲೇ ಐಸೋಲೇಟ್​​ ಆಗೋಕೆ ಅವಕಾಶ ಕೊಡುತ್ತಿಲ್ಲ ಎಂದರು.

ಇದನ್ನೂ ಓದಿ: ಕೇಸ್​ ಪೊಲೀಸ್ ಠಾಣೆಯಲ್ಲಿದೆ, ಅಲ್ಲಿಯೇ ಇತ್ಯರ್ಥವಾಗಲಿದೆ: ನಟ ದರ್ಶನ್​

ಬಸನಗೌಡ ಪಾಟೀಲ್ ಯತ್ನಾಳ್ ದೆಹಲಿ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸುತ್ತಾ, ಅದರ ಬಗ್ಗೆ ನನಗೆ ಗೊತ್ತಿಲ್ಲ, ಅಂತಹ ಯಾವ ಚರ್ಚೆಯೂ ಇಲ್ಲ ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.