ETV Bharat / state

ಉಪಚುನಾವಣೆಯ ಎರಡೂ ಕ್ಷೇತ್ರದಲ್ಲಿ ಬಿಜೆಪಿಗೆ ಗೆಲುವು: ಸಿಎಂ ವಿಶ್ವಾಸ

author img

By

Published : Nov 2, 2021, 10:43 AM IST

ರಾಜ್ಯದ ಎರಡು ಉಪಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಕುತೂಹಲ ಮೂಡಿಸಿದೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳೇ ಗೆಲುವು ಸಾಧಿಸಲಿದ್ದಾರೆ ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

cm-bommai
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಸಿಂದಗಿ ಮತ್ತು ಹಾನಗಲ್ ಎರಡೂ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಉಪಚುನಾವಣೆಯ ಎರಡೂ ಕ್ಷೇತ್ರದಲ್ಲಿ ಬಿಜೆಪಿಗೆ ಗೆಲುವು: ಸಿಎಂ ವಿಶ್ವಾಸ

ಮಂಡ್ಯ ಪ್ರವಾಸಕ್ಕೆ ತೆರಳುವ ಮುನ್ನ ಆರ್.ಟಿ ನಗರ ನಿವಾಸದಲ್ಲಿ ಮಾತನಾಡಿದ ಅವರು, ಎರಡು ಕ್ಷೇತ್ರಗಳಿಗೆ ನಡೆದ ಉಪಚುನಾವಣಾ ಮತಎಣಿಕೆ ಆರಂಭವಾಗಿದೆ. ಈಗಲೇ ಅದರ ಬಗ್ಗೆ ಏನೂ ಹೇಳಲು ಸಾಧ್ಯವಿಲ್ಲ. ಇನ್ನೊಂದೆರಡು ಗಂಟೆ ಕಳೆದ ಮೇಲೆ ಸ್ಪಷ್ಟ ಚಿತ್ರಣ ಸಿಗಬಹುದು. ಆದರೆ ಎರಡೂ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈಗ ಕಬಿನಿ ಜಲಾಶಯಕ್ಕೆ ತೆರಳಿ ಬಾಗಿನ ಅರ್ಪಿಸುತ್ತೇನೆ. ನಂತರ ಕೆಆರ್‌ಎಸ್‌ ಜಲಾಶಯಕ್ಕೆ ತೆರಳಿ ಬಾಗಿನ ಅರ್ಪಿಸಲಿದ್ದು, ಸಂಜೆ ಬೆಂಗಳೂರಿಗೆ ವಾಪಸಾಗಲಿದ್ದೇನೆ ಎಂದು ಸಿಎಂ ತಿಳಿಸಿದರು.

ಇದನ್ನೂ ಓದಿ: ಸಿಂದಗಿ ಬೈಎಲೆಕ್ಷನ್​ ಫಲಿತಾಂಶ.. ಏಳನೇ ಸುತ್ತಿನಲ್ಲಿಯೂ ಮುನ್ನಡೆ ಸಾಧಿಸಿದ ಬಿಜೆಪಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.