ETV Bharat / state

ಬಂಕಾಪುರ‌ ಮೀಸಲು ಅರಣ್ಯ ಪ್ರದೇಶಕ್ಕೆ 'ತೋಳ ವನ್ಯಜೀವಿ ಧಾಮ' ಸ್ಥಾನ

author img

By

Published : Jan 20, 2021, 3:08 AM IST

ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬಂಕಾಪುರ ಮೀಸಲು ಅರಣ್ಯ ಪ್ರದೇಶವನ್ನು ಬಂಕಾಪುರ ತೋಳ ವನ್ಯಜೀವಿ ಧಾಮ’ ಎಂದು ಘೋಷಿಸಲು ರಾಜ್ಯ ವನ್ಯಜೀವಿ ಮಂಡಳಿ ಒಪ್ಪಿಗೆ ನೀಡಿತು.

CM BSY
CM BSY

ಬೆಂಗಳೂರು: ಕೊಪ್ಪಳ ಜಿಲ್ಲೆಯ ಗಂಗಾವತಿ ವಲಯದ ಬಂಕಾಪುರ ಮೀಸಲು ಅರಣ್ಯ ಪ್ರದೇಶ ರಾಜ್ಯದ ಮೊದಲ ತೋಳ ವನ್ಯಜೀವಿ ಧಾಮವಾಗಲಿದೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ವನ್ಯಜೀವಿ ಮಂಡಳಿ ಸಭೆ ನಡೆಯಿತು.

ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬಂಕಾಪುರ ಮೀಸಲು ಅರಣ್ಯ ಪ್ರದೇಶವನ್ನು ಬಂಕಾಪುರ ತೋಳ ವನ್ಯಜೀವಿ ಧಾಮ’ ಎಂದು ಘೋಷಿಸಲು ರಾಜ್ಯ ವನ್ಯಜೀವಿ ಮಂಡಳಿ ಒಪ್ಪಿಗೆ ನೀಡಿತು.

ಓದಿ: ಮಾಲಿನ್ಯ ನಿಯಂತ್ರಣ ಮಂಡಳಿ ಮೊಬೈಲ್ ಆ್ಯಪ್ ಬಿಡುಗಡೆ ಮಾಡಿದ ಸಿಎಂ

ಚಿತ್ರದುರ್ಗ ವಿಭಾಗದ ಹಿರಿಯೂರು ಹಾಗೂ ಹೊಳಲ್ಕೆರೆ ಉತ್ತಾರೆ ಗುಡ್ಡ ವನ್ಯಜೀವಿ ಧಾಮ ಎಂದು ಘೋಷಿಸಲು, ಉತ್ತರ ಕನ್ನಡ ಜಿಲ್ಲೆಯ ಮುಂಡಿಗೆ ಕೆರೆ ಮತ್ತು ಪಕ್ಷಿ ಸಂರಕ್ಷಣಾ ಮೀಸಲು ಪ್ರದೇಶ ಎಂದು ಘೋಷಿಸಲು, ಕೊಪ್ಪಳದಲ್ಲಿ ಹಿಡಿಸುಲೆಕೆರೆ ಕರಡಿ ಧಾಮ, ಆಲಮಟ್ಟಿ ಚಿಕ್ಕ ಸಂಗಮ ಪಕ್ಷಿ ಧಾಮ ಎಂದು ಘೋಷಿಸಲು ವನ್ಯಜೀವಿ ಮಂಡಳಿ ಸಮ್ಮತಿ ನೀಡಿತು.

ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿರುವ ಅರಣ್ಯ ವಾಸಿಗಳನ್ನು ಸ್ಥಳಾಂತರಿಸಲು ಬೇರೆ ಜಾಗ ಗುರುತಿಸಲು ಸೂಚಿಸಲಾಗುದ್ದು, ಕೊಪ್ಪಳ ಜಿಲ್ಲೆಯ ಯಲಬುರ್ಗಾ ಮತ್ತು ಕೊಪ್ಪಳ ತಾಲೂಕುಗಳ ಕೆರೆಗಳಿಗೆ ಕುಡಿಯುವ ನೀರಿನ ಸಲುವಾಗಿ ತುಂಗಭದ್ರಾಾ ಏತ ನೀರಾವರಿ ಮೂಲಕ ನೀರನ್ನು ತುಂಬಿಸುವ ಕಾಮಗಾರಿಗೆ ರಾಷ್ಟ್ರೀಯ ವನ್ಯ ಜೀವಿ ಮಂಡಳಿಯ ಅನುಮೋದನೆ ಪಡೆಯಲು ರಾಜ್ಯ ವನ್ಯಜೀವಿ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಕರಡಿ ಧಾಮ ಘೋಷಣೆ ಮುಂದೂಡಿಕೆ: ರಾಮನಗರ ಬಳಿಯ ಹಂದಿಗುಂದಿ ಮೀಸಲು ಅರಣ್ಯ ಪ್ರದೇಶದ 4,167 ಎಕರೆ ಪ್ರದೇಶವನ್ನು ಕರಡಿ ಧಾಮ’ ಎಂದು ಘೋಷಿಸುವ ಪ್ರಸ್ತಾವದ ಬಗ್ಗೆ ಚರ್ಚೆ ನಡೆಯಿತಾದರೂ, ಯಾವುದೇ ತೀರ್ಮಾನ ತೆಗೆದುಕೊಳ್ಳದೆ ಮುಂದೂಡಲಾಗಿದೆ.
ಗ್ರೇಟರ್ ಹೆಸರುಘಟ್ಟ ಹುಲ್ಲುಗಾವಲು ಘೋಷಣೆ ಇಲ್ಲ: ಹೆಸರುಘಟ್ಟ ಸುತ್ತಮುತ್ತಲಿನ ಸುಮಾರು 5 ಸಾವಿರ ಎಕರೆ ಪ್ರದೇಶವನ್ನು ಗ್ರೇಟರ್ ಹೆಸರುಘಟ್ಟ ಹುಲ್ಲಗಾವಲು ಸಂರಕ್ಷಿತ ಪ್ರದೇಶ’ ಎಂದು ಘೋಷಣೆ ಮಾಡಲಾಗುತ್ತದೆ ಎನ್ನುವ ನಿರೀಕ್ಷೆ ಇತ್ತು. ಆದರೆ ನಿರೀಕ್ಷೆ ಹುಸಿಯಾಗಿದ್ದು,ಈ ಪ್ರಸ್ತಾವ ಕೈಬಿಡಲಾಗಿದೆ.

ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ವಿರೋಧದಿಂದ ಪ್ರಸ್ತಾವನೆ ಕೈಬಿಡಲಾಗಿದೆ. ವಿಶ್ವನಾಥ್ ಪುತ್ರ ಅಲೋಕ್ ಕೂಡ ವನ್ಯಜೀವಿ ಮಂಡಳಿ ಸದಸ್ಯರಾಗಿದ್ದು ಅವರೂ ವಿರೋಧಿಸಿದ ಕಾರಣಕ್ಕೆ ಪ್ರಸ್ತಾಪವನ್ನು ಕೈಬಿಡಲು ನಿರ್ಧರಿಸಲಾಯಿತು ಎನ್ನಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.