ETV Bharat / state

ನಿಗಮ, ಮಂಡಳಿ ನೇಮಕಾತಿ ವಿಚಾರವಾಗಿ ದೆಹಲಿ ನಾಯಕರ ಭೇಟಿ: ಡಿ.ಕೆ.ಶಿವಕುಮಾರ್

author img

By ETV Bharat Karnataka Team

Published : Dec 17, 2023, 7:49 PM IST

ಡಿಸಿಎಂ ಡಿ ಕೆ ಶಿವಕುಮಾರ್
ಡಿಸಿಎಂ ಡಿ ಕೆ ಶಿವಕುಮಾರ್

ದೆಹಲಿ ನಾಯಕರು ನಮ್ಮನ್ನು ಕರೆದಿಲ್ಲ. ನಾವೇ ಅಲ್ಲಿಗೆ ಹೋಗುತ್ತಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ಬೆಂಗಳೂರು: "ನಿಗಮ, ಮಂಡಳಿ ನೇಮಕ ಪಟ್ಟಿಯನ್ನು ನಾವು ನಮ್ಮ ಹೈಕಮಾಂಡ್ ನಾಯಕರಿಗೆ ರವಾನಿಸಿದ್ದು, ಅದಕ್ಕೆ ಅಂಕಿತ ಪಡೆಯಬೇಕಾಗಿದೆ. ಹೀಗಾಗಿ ರಾಜ್ಯದ ನಾಯಕರು ದೆಹಲಿಗೆ ತೆರಳುತ್ತಿದ್ದೇವೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದ ಬಳಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಎಐಸಿಸಿ ಅಧ್ಯಕ್ಷರು ನಮ್ಮ ಗ್ಯಾರಂಟಿ ಯೋಜನೆಗಳ ಜಾರಿ, ತಾಲೂಕು ಹಾಗೂ ಜಿಲ್ಲಾಮಟ್ಟದ ಪದಾಧಿಕಾರಿಗಳ ನೇಮಕ ಸಂಬಂಧ ನಿರ್ದೇಶನ ನೀಡಿದ್ದಾರೆ. ತಿಂಗಳಲ್ಲಿ ತಾಲೂಕು ಮಟ್ಟದಲ್ಲಿ ಸಮಿತಿ ಮಾಡಲು ಪ್ರಸ್ತಾವನೆ ಸಲ್ಲಿಸಲು ಶಾಸಕರಿಗೆ ಸೂಚಿಸುತ್ತೇವೆ'' ಎಂದರು.

ನಾರಾಯಣ ಗೌಡ ಭೇಟಿ ವಿಚಾರ ಕುರಿತು ಪ್ರತಿಕ್ರಿಯಿಸಿ, "ನಾರಾಯಣ ಗೌಡರು ಕನ್ನಡದಲ್ಲಿ ನಾಮಫಲಕ ಹಾಕಲು ಹೋರಾಟ ಮಾಡುತ್ತಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅವರು ಹೋರಾಟಗಾರರು, ಹೋರಾಟ ಮಾಡುವುದು ಸಹಜ. ಕರ್ನಾಟಕದಲ್ಲಿ ಕನ್ನಡದಲ್ಲಿ ನಾಮಫಲಕ ಹಾಕುವಂತೆ ಆದೇಶವಿದೆ. ಯಾರೋ ಅವರ ವಿರುದ್ಧ ದೂರು ನೀಡಿದ್ದಾರೆ. ಈ ಬಗ್ಗೆ ನಾನು ಪೊಲೀಸ್ ಆಯುಕ್ತರ ಜೊತೆ ಮಾತನಾಡಿದ್ದೇನೆ. ಹೋರಾಟಗಾರರಿಗೆ ನಾವು ಎಷ್ಟು ಗೌರವ ನೀಡಬೇಕೋ ಅದನ್ನು ನೀಡಲೇಬೇಕು. ಅವರುಗಳ ಹೋರಾಟದಿಂದ ಕನ್ನಡ ಉಳಿಯುತ್ತಿದೆ. ಅವರಿಗೆ ರಾಜಕೀಯ ಬೇಡ. ಅವರ ವಿರುದ್ಧ ಸುಳ್ಳು ಕೇಸು ದಾಖಲಿಸಬಾರದು ಎಂದು ಆಯುಕ್ತರಿಗೆ ಹೇಳಿದ್ದೇನೆ" ಎಂದು ಹೇಳಿದರು.

ಟ್ರ್ಯಾಪ್ ಮಾಡಲು ಪ್ರತಾಪ್ ಸಿಂಹ ಹುಡುಗ ಅಲ್ಲ: ಸಂಸತ್ ಭದ್ರತಾ ವೈಫಲ್ಯ ಪ್ರಕರಣದಲ್ಲಿ ಪ್ರತಾಪ್ ಸಿಂಹ ಅವರನ್ನು ಟ್ರ್ಯಾಪ್ ಮಾಡಲಾಗುತ್ತಿದೆಯೇ ಎಂಬ ಪ್ರಶ್ನೆಗೆ, "ಅವರನ್ನು ಯಾರು ಟ್ರ್ಯಾಪ್ ಮಾಡುತ್ತಾರೆ?. ಪ್ರತಾಪ್ ಸಿಂಹ ಅವರೇನೂ ಸಣ್ಣ ಹುಡುಗನಲ್ಲ, ನಾನೂ ಹುಡುಗನಲ್ಲ. ಇದು ನಮ್ಮ ಜವಾಬ್ದಾರಿ ಅಷ್ಟೇ" ಎಂದರು.

ಇದನ್ನೂ ಓದಿ: ಮೈಸೂರು: ಸಂಸದ ಪ್ರತಾಪ್ ಸಿಂಹ ಕಚೇರಿಗೆ ಬಿಗಿ ಪೊಲೀಸ್ ಬಂದೋಬಸ್ತ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.