ETV Bharat / state

ಬಿಜೆಪಿಯಿಂದ ಸುಳ್ಳು ಪತ್ರ ವೈರಲ್: ಸಿದ್ದರಾಮಯ್ಯ

author img

By

Published : May 9, 2023, 2:13 PM IST

Opposition Leader Siddaramaiah
ವಿಪಕ್ಷ ನಾಯಕ ಸಿದ್ದರಾಮಯ್ಯ

ಕೆಪಿಸಿಸಿ ಅಧ್ಯಕ್ಷ ಡಿಕೆಶಿ ವಿರುದ್ಧ ಸಿದ್ದರಾಮಯ್ಯ ಅವರು ಹೈಕಮಾಂಡ್​ಗೆ ಪತ್ರ ಬರೆದಿದ್ದಾರೆ ಎನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುತ್ತಿದೆ.

ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸಭಾ ಚುನಾವಣೆ ಮತದಾನ ಎದುರಾಗಿರುವ ಸಂದರ್ಭದಲ್ಲಿ ಬಿಜೆಪಿ ನಮ್ಮ ವಿರುದ್ಧ ಷಡ್ಯಂತ್ರ ನಡೆಸಿದ್ದು, ಡಿ.ಕೆ.ಶಿವಕುಮಾರ್​ ಅವರು ವಿರುದ್ಧ ನಾನು ಹೈಕಮಾಂಡ್​ಗೆ ಪತ್ರ ಬರೆದಿದ್ದೇನೆ ಎಂದು ನಕಲಿ ಪತ್ರ ವೈರಲ್ ಮಾಡಿ ಜನರ ದಿಕ್ಕು ತಪ್ಪಿಸುವ ಕಾರ್ಯ ಮಾಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ವಿರುದ್ಧ ಅಸಮಧಾನ ಎಂಬ ಅರ್ಥ ಬರುವ ರೀತಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿದ್ದರಾಮಯ್ಯ ದೂರು ಕೊಟ್ಟಿದ್ದಾರೆ ಎಂಬ ಒಕ್ಕಣೆಯ ಪತ್ರ ವೈರಲ್ ಆಗಿದ್ದು, ದೂರಿನ‌ ಪತ್ರ ವೈರಲ್ ಆದ ಬೆನ್ನಲ್ಲೆ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಟ್ವೀಟ್ ಮೂಲಕ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದು, ಸೋಲಿನ ಭೀತಿಯಿಂದ ಹತಾಶೆಗೀಡಾಗಿರುವ ಬಿಜೆಪಿ ಈ ರೀತಿ ಮಾಡುತ್ತಿದೆ. ನನ್ನ ಹೆಸರಿನ ಖೊಟ್ಟಿ ಪತ್ರವನ್ನು ರಚಿಸಿ ಅಪಪ್ರಚಾರ ಮಾಡುತ್ತಿದೆ. ಇಂತಹ ಯಾವ ಪತ್ರವನ್ನು ನಾನು ಬರೆದಿಲ್ಲ ಎಂದಿದ್ದಾರೆ.

  • ಸೋಲಿನ ಭೀತಿಯಿಂದ ಹತಾಶೆಗೀಡಾಗಿರುವ @BJPKarnataka ನನ್ನ ಹೆಸರಿನ ಖೊಟ್ಟಿ ಪತ್ರವನ್ನು ರಚಿಸಿ ಅಪಪ್ರಚಾರ ಮಾಡುತ್ತಿದೆ.

    ಇಂತಹ ಯಾವ ಪತ್ರವನ್ನೂ ನಾನು ಬರೆದಿಲ್ಲ.

    ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಈ ಸುಳ್ಳು ಪ್ರಚಾರಕ್ಕೆ ಬಲಿಯಾಗಬಾರದು.
    1/2 pic.twitter.com/HbmAMd9ONq

    — Siddaramaiah (@siddaramaiah) May 8, 2023 " class="align-text-top noRightClick twitterSection" data=" ">

ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಈ ಸುಳ್ಳು ಪ್ರಚಾರಕ್ಕೆ ಬಲಿಯಾಗಬಾರದು. ನನ್ನ ಮತ್ತು ಡಿ.ಕೆ.ಶಿವಕುಮಾರ್ ಸಂಬಂಧ ಸೌಹಾರ್ದಯುತವಾಗಿದೆ. ಇದಕ್ಕೆ ಹುಳಿ ಹಿಂಡುವ ಪ್ರಯತ್ನ ಯಶಸ್ಸು ಕಾಣಲಾರದು. ಶೀಘ್ರದಲ್ಲಿಯೇ ಪೊಲೀಸರಿಗೆ ದೂರು ನೀಡಿ. ಈ ಕಿಡಿಗೇಡಿತನದ ಪತ್ರ ಸೃಷ್ಟಿಸಿ ಹಂಚುತ್ತಿರುವವರ ವಿರುದ್ಧ ಕ್ರಮಕೈಗೊಳ್ಳಲು ಒತ್ತಾಯಿಸುತ್ತೇನೆ ಎಂದು ಸಿದ್ದರಾಮಯ್ಯ ಟ್ವೀಟ್​ನಲ್ಲಿ ತಿಳಿಸಿದ್ದಾರೆ.

ಪತ್ರದಲ್ಲಿರುವ ವಿವರ: 'ಕಳೆದ ಒಂದು ವರ್ಷದಿಂದ ರಾಹುಲ್ ಗಾಂಧಿಯವರ ತಂಡದ ಮಾರ್ಗದರ್ಶನದಂತೆ ಉತ್ತಮವಾಗಿ ಕ್ಯಾಂಪೈನ್ ಮಾಡಿಕೊಂಡು ಬಂದಿದ್ದೆವು. ಡಿ ಕೆ ಶಿವಕುಮಾರ್‌ ಅವರು ತಾವೇ ಮುಂದಿನ ಮುಖ್ಯಮಂತ್ರಿ ಎಂದು ಜನರ ಮುಂದೆ ಘೋಷಣೆ ಕೂಗಿಸಿಕೊಳ್ಳುತ್ತಾ ನನ್ನ ಅಪಾರ ಅಭಿಮಾನಿಗಳಲ್ಲಿ ಗೊಂದಲ ಉಂಟು ಮಾಡಿದ್ದಾರೆ. ಎಲ್ಲ ನಿರ್ಣಯವನ್ನು ಏಕಮುಖವಾಗಿ ತೆಗೆದುಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಹಿತದೃಷ್ಟಿಯಿಂದಾಗಿ ನಾನು ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ತೀರ್ಮಾನ ಮಾಡಿದ್ದೆ. ಆದರೆ ಕೋಲಾರ ಟಿಕೆಟ್ ತಪ್ಪಿಸುವಲ್ಲಿ ಡಿಕೆ ಶಿವಕುಮಾರ್ ಅವರು ಯಶಸ್ವಿಯಾಗಿದ್ದಾರೆ. ಆದರೂ ರಾಜ್ಯ ಸುತ್ತಿ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದುಕೊಂಡಿದ್ದ ನನ್ನ ಆಸೆಗೆ ಎಳ್ಳುನೀರು ಬಿಟ್ಟಿರುತ್ತಾರೆ' ಎಂದು ಸಿದ್ದರಾಮಯ್ಯ ಮಲ್ಲಿಕಾರ್ಜುನ ಖರ್ಗೆಯವರಿಗೆ ವಿವರಿಸಿದ್ದು ಪತ್ರದಲ್ಲಿದೆ. ಇದು ನಕಲಿ ಎಂದು ಈಗ ಸಿದ್ದರಾಮಯ್ಯ ವಿವರಿಸಿದ್ದಾರೆ.

ಅಲ್ಲದೇ ಈ ಪತ್ರದಲ್ಲಿ ಮುಂದುವರಿದು, 'ಟಿಕೆಟ್‌ ಹಂಚಿಕೆ ವಿಷಯದಲ್ಲಿ ಒಬಿಸಿ ವರ್ಗದ ಆಕಾಂಕ್ಷಿಗಳಿಗೆ ಡಿಕೆ ಶಿವಕುಮಾರ್ ಅನ್ಯಾಯ ಮಾಡಿದ್ದಾರೆ. ಚಿತ್ರದುರ್ಗದ ಪ್ರಬಲ ಆಕಾಂಕ್ಷಿಯಾಗಿದ್ದ ರಘು ಆಚಾರ್‌ಗೆ ನನ್ನ ಶಿಷ್ಯ ಎನ್ನುವ ಕಾರಣಕ್ಕೆ ಟಿಕೆಟ್ ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮತ್ತೊಬ್ಬ ತರಿಕೇರಿಯ ಒಬಿಸಿ ಟಿಕೆಟ್ ಆಕಾಂಕ್ಷಿಯಾಗಿದ್ದ ಗೋಪಿಕೃಷ್ಣನಿಗೂ ಟಿಕೆಟ್ ಸಿಗದಂತೆ ಮಾಡಿದ್ದಾರೆ. ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿಯಾಗಿರುವ ಪುಟ್ಟರಂಗ ಶೆಟ್ಟಿಗೂ ಟಿಕೆಟ್ ತಪ್ಪಿಸಲು ಸಾಕಷ್ಟು ಪ್ರಯತ್ನ ಮಾಡಿದ್ದಾರೆ. ನನ್ನ ಪ್ರಯತ್ನದ ಫಲವಾಗಿ ಅದು ಅವರ ಕೈಯಿಂದ ಸಾಧ್ಯವಾಗಲಿಲ್ಲ. ಡಿಕೆ ಶಿವಕುಮಾರ್‌ ಅವರ ಕುತಂತ್ರದಿಂದ ಒಬಿಸಿ ಸಮುದಾಯ ತನ್ನ ವಿರುದ್ಧ ತಿರುಗಿಬೀಳುವಂತೆ ಮಾಡಿದ್ದಾರೆ.'

'ರಾಜ್ಯ ಕಾಂಗ್ರೆಸ್‌ನಲ್ಲಿ ಇತ್ತೀಚೆಗೆ ನಡೆಯುತ್ತಿರುವ ವಿದ್ಯಮಾನಗಳು ಬಹಳ ಬೇಸರವನ್ನುಂಟು ಮಾಡಿದೆ. ಇಡೀ ರಾಜ್ಯದ ತುಂಬಾ ಸುತ್ತಾಡಿ ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರಬೇಕೆನ್ನುವುದು ನಮ್ಮ ಉದ್ದೇಶವಾಗಿತ್ತು. ತಮಗಿಂತ ವಯಸ್ಸಿನಲ್ಲಿ ಕಿರಿಯರು ಹಾಗೂ ಪಕ್ಷದ ಅಧ್ಯಕ್ಷರಾದ ಡಿಕೆ ಶಿವಕುಮಾ‌ರ್ ತೆಗೆದುಕೊಳ್ಳುತ್ತಿರುವ ನಿರ್ಧಾರ, ನಡೆದುಕೊಳ್ಳುತ್ತಿರುವ ವರ್ತನೆ ಬಗ್ಗೆ ಅಸಮಾಧಾನವಿದೆ.' ಎಂದು ಸಿದ್ದರಾಮಯ್ಯ ಉಲ್ಲೇಖಿಸಿದ್ದರೆಂದು ಪತ್ರದಲ್ಲಿ ವಿವರಿಸಲಾಗಿದೆ.

ಚುನಾವಣೆ ಸಂದರ್ಭದಲ್ಲಿ ಸಿದ್ದರಾಮಯ್ಯ ಬರೆದಿದ್ದಾರೆ ಎಂದು ಹೇಳಿ ವೈರಲ್ ಆಗಿರುವ ಈ ನಕಲಿ ಪತ್ರ ಕಾಂಗ್ರೆಸ್ ಕಾರ್ಯಕರ್ತರಲ್ಲಿ ತೀವ್ರ ಅಚ್ಚರಿ ಮೂಡಿಸಿತ್ತು. ಅದಕ್ಕೆ ತಕ್ಷಣವೇ ಸಿದ್ದರಾಮಯ್ಯ ಸ್ಪಷ್ಟೀಕರಣ ಸಹ ನೀಡಿದ್ದಾರೆ.

ಇದನ್ನೂ ಓದಿ: ಬಿಜೆಪಿಯಿಂದ ದ್ವೇಷ ರಾಜಕಾರಣ: ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.