ETV Bharat / state

ಬೈಕ್​ ಸ್ಕಿಡ್ ಆಗಿ ರಸ್ತೆ ಮೇಲೆ ಬಿದ್ದ ಮಹಿಳೆ: ಟಿಪ್ಪರ್‌ ಹರಿದು ಸ್ಥಳದಲ್ಲೇ ಸಾವು

author img

By

Published : Feb 13, 2023, 1:19 PM IST

bengaluru
ಬೆಂಗಳೂರು

ಬೈಕ್​ ಸ್ಕಿಡ್ ಆಗಿ ರಸ್ತೆ ಮೇಲೆ ಬಿದ್ದ ಮಹಿಳೆ-ಟಿಪ್ಪರ್‌ ಹರಿದು ಸ್ಥಳದಲ್ಲೇ ಸಾವು-ಕಬ್ಬನ್ ಪಾರ್ಕ್ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ.

ಟಿಪ್ಪರ್‌ ಹರಿದು ಮಹಿಳೆ ಸಾವು ..ಸಿಸಿಟಿವಿ ದೃಶ್ಯ

ಬೆಂಗಳೂರು: ದ್ವಿಚಕ್ರ ವಾಹನದ ಮೇಲೆ ಹೋಗುತ್ತಿದ್ದಾಗ ಸ್ಕಿಡ್ ಆಗಿ ಬಿದ್ದು ಅಪಘಾತವಾಗಿ ಮಹಿಳೆ‌ಯೋರ್ವ ಸಾವಿಗೀಡಾಗಿದ್ದಾರೆ. ಕಬ್ಬನ್ ಪಾರ್ಕ್ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಶಿವಾಜಿ ನಗರದ ನಿವಾಸಿ ಸುಧಾ(37) ಮೃತ ಮಹಿಳೆ.

ಇಂದು ಬೆಳಗ್ಗೆ 8.15ರ ವೇಳೆ ಮಗಳನ್ನ ಖಾಸಗಿ ಕಾಲೇಜಿಗೆ ಬಿಟ್ಟು ಎಂಜಿ ರಸ್ತೆ ಕಡೆ ಹೋಗುತ್ತಿದ್ದರು. ಈ ವೇಳೆ ರಸ್ತೆಯಲ್ಲಿ ವಾಹನವೊಂದರ ಇಂಜಿನ್ ಆಯಿಲ್ ಲೀಕ್ ಆಗಿತ್ತು. ಆಗ ನಿಧಾನ ಗತಿಯಲ್ಲಿಯೇ ವಾಹನಗಳು ಹೋಗುತ್ತಿದ್ದವು. ಇದನ್ನು ಗಮನಿಸದೇ ಆಯಿಲ್ ಮೇಲೆ ವೇಗವಾಗಿ ದ್ವಿಚಕ್ರ ವಾಹನ ಚಲಾಯಿಸಿದ ಪರಿಣಾಮ ಸ್ಕಿಡ್ ಆಗಿ ರಸ್ತೆ ಮೇಲೆ ಬಿದ್ದಿದ್ದಾರೆ. ಈ ವೇಳೆ ಹಿಂದಿನಿಂದ ಬರುತ್ತಿದ್ದ ಟಿಪ್ಪರ್ ಲಾರಿಯ ಹಿಂಬದಿ ಚಕ್ರ ಮಹಿಳೆ ತಲೆಯ ಮೇಲೆ ಹರಿದಿದೆ. ಈ ಸಂದರ್ಭ ತಲೆಗೆ ಗಂಭೀರ ಗಾಯವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಅವರ ಸಾವಿಗೆ ಹೆಲ್ಮೆಟ್ ಕೂಡ ಕಾರಣ ಎನ್ನಲಾಗುತ್ತಿದೆ. ಅಪಘಾತ ಸಂಭವಿಸಿದ ಸಂದರ್ಭ ಆ ಮಹಿಳೆ ಕಳಪೆ ಗುಣಮಟ್ಟದ ಧರಿಸಿದ್ದರು. ಇದರಿಂದ ತಲೆಗೆ ಬಲವಾದ ಏಟು ಬಿದ್ದಿದ್ದು ಮಹಿಳೆ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಆಟೋ-ಮಿನಿ ಬಸ್ ನಡುವೆ ಭೀಕರ ಅಪಘಾತ: ಮೂವರು ಸಾವು, ಹಲವರಿಗೆ ಗಾಯ

ಮೊಬೈಲ್, ಸರ ಕಸಿದು ಪರಾರಿಯಾಗುತ್ತಿದ್ದವರ ಬಂಧನ: ಮತ್ತೊಂದೆಡೆ ದ್ವಿಚಕ್ರ ವಾಹನದಲ್ಲಿ ಬಂದು ಸಾರ್ವಜನಿಕರ ಮೊಬೈಲ್ ಫೋನ್ ಕಸಿದು ಪರಾರಿಯಾಗುತ್ತಿದ್ದ ಇಬ್ಬರು ಆರೋಪಿಗಳನ್ನು ಅನ್ನಪೂರ್ಣೇಶ್ವರಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ‌. ರಾಜಕುಮಾರ್ ಹಾಗೂ ವೆಂಕಟೇಶ್ ಬಂಧಿತ ಆರೋಪಿಗಳು.

ರಸ್ತೆಯಲ್ಲಿ ಮೊಬೈಲ್​​ನಲ್ಲಿ‌ ಮಾತನಾಡಿಕೊಂಡು ಹೋಗುವರನ್ನೇ ಟಾರ್ಗೆಟ್ ಮಾಡುತ್ತಿದ್ದ‌ ಆರೋಪಿಗಳು, ದ್ವಿಚಕ್ರ ವಾಹನದಲ್ಲಿ ಬಂದು ಅವರ ಮೊಬೈಲ್ ಕಸಿದು ಪರಾರಿಯಾಗುತ್ತಿದ್ದರು. ಫೆ. 7ರಂದು ಇದೇ ರೀತಿ ಅನ್ನಪೂರ್ಣೇಶ್ವರಿ ನಗರದ ಮೇಲ್ಸೇತುವೆ ಕೆಳಗೆ ಸಾಗುತ್ತಿದ್ದ ಕೃಷ್ಣಮೂರ್ತಿ ಎಂಬುವವರ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದರು. ಬಂಧಿತರಿಂದ ಎರಡು ಮೊಬೈಲ್ ಹಾಗೂ ಮೂರು ದ್ವಿಚಕ್ರ ವಾಹನ ವಶಕ್ಕೆ ಪಡೆದಿದ್ದಾರೆ.

ಸರಗಳ್ಳತನ-ಆರೋಪಿಗಳ ಬಂಧನ: ಮಹಿಳೆಯರನ್ನ ಟಾರ್ಗೆಟ್ ಮಾಡಿ ಸರಗಳ್ಳತನ ಮಾಡುತಿದ್ದ ಇಬ್ಬರು ಆರೋಪಿಗಳನ್ನು ಕೆಂಗೇರಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಬ್ಬಾಳು ಚಂದ್ರು ಹಾಗೂ ರಘು ಬಂಧಿತ ಆರೋಪಿಗಳು. ಬೆಳಗ್ಗೆ ವಾಕಿಂಗ್ ಮಾಡುತಿದ್ದ ಮಹಿಳೆಯರನ್ನ ಟಾರ್ಗೆಟ್ ಮಾಡುತಿದ್ದ ಆರೋಪಿಗಳು ದ್ವಿಚಕ್ರ ವಾಹನದಲ್ಲಿ ಬಂದು ಸರಗಳ್ಳತನ ಮಾಡಿ ಎಸ್ಕೇಪ್ ಆಗುತ್ತಿದ್ದರು. ಆರೋಪಿಗಳು ತಲಘಟ್ಟಪುರ, ಸುಬ್ರಹ್ಮಣ್ಯಪುರ ವ್ಯಾಪ್ತಿಯಲ್ಲಿ ಕೃತ್ಯ ಎಸಗಿದ್ದರು. ಇತ್ತೀಚೆಗೆ ಇದೇ ರೀತಿ ಕೆಂಗೇರಿ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರ ಸರ ಕಿತ್ತುಕೊಂಡು ಪರಾರಿಯಾಗಿದ್ದರು. ಬಂಧಿತ ಆರೋಪಿಗಳಿಂದ ಆರು ಲಕ್ಷ ಮೌಲ್ಯದ ಚಿನ್ನದ ಸರಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಒಂದು ಬೈಕ್ ವಶಕ್ಕೆ ಪಡೆದಿದ್ದಾರೆ‌.

ಇದನ್ನೂ ಓದಿ: ಮದುವೆ ಮುಗಿಸಿ ಹಿಂತಿರುಗುತ್ತಿದ್ದ ಬುಲೆಟ್​ಗೆ ಅಪರಿಚಿತ ವಾಹನ ಡಿಕ್ಕಿ; 3 ಜನ ಬೈಕ್​ ಸವಾರರು ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.