ETV Bharat / state

ಸತೀಶ್ ಜಾರಕಿಹೊಳಿ ಹೇಳಿಕೆ ಅಕ್ಷಮ್ಯ ಅಪರಾಧ.. ಬಿ ಎಸ್ ಯಡಿಯೂರಪ್ಪ

author img

By

Published : Nov 9, 2022, 1:44 PM IST

yadiyurappa
ಬಿ ಎಸ್ ಯಡಿಯೂರಪ್ಪ

ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ನವದೆಹಲಿಗೆ ತೆರಳುತ್ತಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಸತೀಶ್​ ಜಾರಕಿಹೊಳಿ ಅವರ ಹೇಳಿಕೆಯನ್ನು ಖಂಡಿಸಿದ್ದಾರೆ.

ಬೆಂಗಳೂರು: ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ನವದೆಹಲಿಗೆ ತೆರಳುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಬಾರಿಯ ದೆಹಲಿ ಭೇಟಿ ವೇಳೆ ರಾಜ್ಯ ರಾಜಕೀಯ ವಿಷಯಗಳ ಕುರಿತು ಯಾವುದೇ ಚರ್ಚೆ ನಡೆಯುವ ಸಾಧ್ಯತೆಗಳಿಲ್ಲ ಎಂದು ತಿಳಿಸಿದರು.

ದೆಹಲಿ ಪ್ರವಾಸಕ್ಕೆ ತೆರಳುವ ಮುನ್ನ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚುನಾವಣೆ ಸಮಿತಿ ಸಭೆ ಇರುವ ಕಾರಣ ದೆಹಲಿಗೆ ಹೋಗುತ್ತಿದ್ದೇನೆ, ಇಂದು ಸಂಜೆ 6 ಗಂಟೆಗೆ ಸಭೆ ಮುಗಿಸಿ ಕರ್ನಾಟಕ ಭವನದಲ್ಲಿ ವಾಸ್ತವ್ಯ ಹೂಡುತ್ತೇನೆ. ನಾಳೆ ಬೆಳಗ್ಗೆ ಹಿಂತಿರುಗುತ್ತೆನೆ ಎಂದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ, ಇದೊಂದು ಅಕ್ಷಮ್ಯ ಅಪರಾಧ, ಹಿಂದೂಗಳಿಗೆ ಅಪಮಾನ ಮಾಡುವಂತ ಹೇಳಿಕೆಯಾಗಿದೆ. ಆಕ್ಷೇಪಾರ್ಹ ಹೇಳಿಕೆ ನೀಡಿ ಬಳಿಕ ಹಾಗಲ್ಲ ಹೀಗೆ ಅಂತ ಅನ್ನುವುದು ಸರಿಯಲ್ಲ. ಕೂಡಲೇ ಅವರು ಕ್ಷಮೆ ಕೇಳಬೇಕು. ಕ್ಷಮೆ ಕೇಳದಿದ್ದರೆ ಮುಂದಿನ ದಿನಗಳಲ್ಲಿ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದರು.

ಸತೀಶ್ ಜಾರಕಿಹೊಳಿ ಹೇಳಿಕೆ ಖಂಡಿಸಿದ ಬಿ ಎಸ್ ಯಡಿಯೂರಪ್ಪ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ವಿಜೇಯೇಂದ್ರ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಈಗ ಶಿಕಾರಿಪುರ ಎಂದು ಹೇಳಿದ್ದೇನೆ, ಮುಂದೆ ಪಕ್ಷದ ವರಿಷ್ಠರು ಯಾವ ನಿರ್ಧಾರ ತೇಗೆದು ಕೊಳ್ಳುತ್ತಾರೆ ನೋಡೋಣ ಎಂದರು.

ಇದನ್ನೂ ಓದಿ:ಹಿಂದುಳಿದ ವರ್ಗದ ಸಚಿವರನ್ನು ಟಾರ್ಗೆಟ್ ಮಾಡಲಾಗುತ್ತಿದೆ: ಭೈರತಿ ಬಸವರಾಜ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.