Karnataka Weather Report: ಬೆಂಗಳೂರು ಸೇರಿ 16 ಜಿಲ್ಲೆಗಳಲ್ಲಿ ಮುಂದುವರೆಯಲಿದೆ ವರ್ಷಧಾರೆ

author img

By

Published : Oct 20, 2021, 9:22 AM IST

yellow-alert-in-some-district-of-karnataka
WEATHER REPORT: ಸಿಲಿಕಾನ್ ಸಿಟಿ ಸೇರಿ 16 ಜಿಲ್ಲೆಗಳಲ್ಲಿ ಮುಂದುವರೆಯಲಿದೆ ವರ್ಷಧಾರೆ ()

ಹವಾಮಾನ ವೈಪರೀತ್ಯದಿಂದ ರಾಜ್ಯದ ಹಲವೆಡೆ ಇನ್ನೂ ಎರಡು ದಿನಗಳ ಕಾಲ ಅತ್ಯಧಿಕ ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬೆಂಗಳೂರು: ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದ 16 ಜಿಲ್ಲೆಗಳಲ್ಲಿ ಅಕ್ಟೋಬರ್ 24ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕೆಲವು ಜಿಲ್ಲೆಗಳಲ್ಲಿ ಒಣಹವೆ:

ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಹೆಚ್ಚಾಗಲಿದೆ ಮಳೆ:

ಹವಾಮಾನ ವೈಪರೀತ್ಯದಿಂದ ಬೆಂಗಳೂರಿನಲ್ಲಿ ಇನ್ನೂ 48 ಗಂಟೆಗಳ ಕಾಲ ಅತ್ಯಧಿಕ ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ಇಂದು ಮತ್ತೆ ತೈಲ ದರ ಏರಿಕೆ: ವಿಮಾನ ಇಂಧನಕ್ಕಿಂತ ದುಬಾರಿಯಾದ ಪೆಟ್ರೋಲ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.