ETV Bharat / state

ಟ್ವಿಟರ್​ ಬಿಜೆಪಿ ಆಸ್ತಿಯಲ್ಲ, ಕೇಸರೀಕರಣ ಸಲ್ಲದು: ಎಂ.ಎಸ್.ರಕ್ಷಾ ರಾಮಯ್ಯ

author img

By

Published : Aug 9, 2021, 7:02 PM IST

youth congress protest against twitter
ಎಂ.ಎಸ್.ರಕ್ಷಾ ರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ

ರಾಹುಲ್ ಗಾಂಧಿ ಅವರ ಟ್ವಿಟರ್ ಖಾತೆಯನ್ನು ಕೂಡಲೇ ಪುನರ್ ಸ್ಥಾಪಿಸದಿದ್ದರೆ ಟ್ವಟರ್ ಇಂಡಿಯಾ ಕಚೇರಿಗೆ ಮುತ್ತಿಗೆ ಹಾಕಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಯುವ ಕಾಂಗ್ರೆಸ್​ ಎಚ್ಚರಿಕೆ ನೀಡಿದೆ.

ಬೆಂಗಳೂರು: ದೆಹಲಿಯಲ್ಲಿ ಅತ್ಯಾಚಾರಕ್ಕೆ ಒಳಗಾದ ದಲಿತ ಬಾಲಕಿಯ ಪೋಷಕರಿಗೆ ಸಾಂತ್ವನ ಹೇಳುವ ಚಿತ್ರ ಪ್ರಕಟಿಸಿದ ಕಾರಣಕ್ಕಾಗಿ ಕಾಂಗ್ರೆಸ್ ವರಿಷ್ಠ ನಾಯಕ ರಾಹುಲ್ ಗಾಂಧಿ ಅವರ ಟ್ವಿಟರ್ ಖಾತೆಯನ್ನು ಸ್ಥಗಿತಗೊಳಿಸಿದ್ದರ ವಿರುದ್ಧ ಪ್ರದೇಶ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು.

ಎಂ.ಎಸ್.ರಕ್ಷಾ ರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ

ಕೆಪಿವೈಸಿಸಿ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನ ಬೆನ್ನಿಗಾನ ಹಳ್ಳಿಯ ಟ್ವಿಟರ್ ಇಂಡಿಯಾ ಕಚೇರಿ ಮುಂದೆ ನೂರಾರು ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದ್ರು.

“ಅತ್ಯಾಚಾರಿಗಳನ್ನು ಟ್ವಿಟರ್ ಯಾಕೆ ರಕ್ಷಿಸುತ್ತಿದೆ” ಕೂಡಲೇ ರಾಹುಲ್ ಗಾಂಧಿ ಅವರು TWITTER ಅಕೌಂಟ್​ ಅನ್ನು “ ಪುನರ್ ಸ್ಥಾಪಿಸಿ” ಎಂದು ಭಿತ್ತಿಪತ್ರಗಳನ್ನು ಹಿಡಿದು ಯುವ ಕಾರ್ಯಕರ್ತರು ಘೋಷಣೆ ಕೂಗಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ, ರಾಹುಲ್ ಗಾಂಧಿ ಅವರ ಟ್ವಿಟರ್ ಖಾತೆಯನ್ನು ಸ್ಥಗಿತಗೊಳಿಸಿರುವುದು ಖಂಡನೀಯ. ಇಂದು ಕೇವಲ ಸಾಂಕೇತಿಕವಾಗಿ ಪ್ರತಿಭಟನೆ ಮಾಡಿದ್ದೇವೆ. ಟ್ವಿಟರ್ ತನ್ನ ಧೋರಣೆಯನ್ನು ಇದೇ ರೀತಿ ಮುಂದುವರಿಸಿದರೆ ಹಾಗೂ ಮುಂದಿನ 24 ಗಂಟೆಗಳಲ್ಲಿ ಟ್ವಿಟರ್ ಖಾತೆ ಪುನಃ ಚಾಲನೆಗೊಳ್ಳದಿದ್ದರೆ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ. ನೇತೃತ್ವದಲ್ಲಿ ಟ್ವಿಟರ್ ಇಂಡಿಯಾ ಕಚೇರಿಗೆ ಮುತ್ತಿಗೆ ಹಾಕಿ ನಮ್ಮ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಟ್ವಿಟರ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕರು, ಅಧ್ಯಕ್ಷರು, ಆಡಳಿತ ಮಂಡಳಿಯವರು ಕೂಡಲೇ ಎಚ್ಚೆತ್ತುಕೊಳ್ಳಬೇಕು. ಟ್ವಿಟರ್ ಅನ್ನು ಯಾವುದೇ ಕಾರಣಕ್ಕೂ ಕೇಸರೀಕರಣ ಮಾಡಬಾರದು. ಟ್ವಿಟರ್​ ಇರುವುದು ಕೇವಲ ಬಿಜೆಪಿಯವರಿಗೆ ಮಾತ್ರ ಅಲ್ಲ. ಟ್ವಿಟರ್ ಎಲ್ಲರಿಗೂ ಸೇರಿದ್ದು ಎಂದು ಇದೇ ವೇಳೆ ರಕ್ಷಾ ರಾಮಯ್ಯ ಹೇಳಿದ್ರು.

ಇದನ್ನೂ ಓದಿ:ಅತ್ಯಾಚಾರ ಸಂತ್ರಸ್ತೆಯ ಗುರುತು ಬಹಿರಂಗ: ರಾಗಾ ವಿರುದ್ಧ FIR ದಾಖಲಿಸಲು ಹೈಕೋರ್ಟ್​ಗೆ ಅರ್ಜಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.