ETV Bharat / state

ಚಿಕ್ಕೋಡಿಯಲ್ಲಿ ಯುವಕನ ಬರ್ಬರ ಕೊಲೆ.. ಕಬ್ಬಿನ ಗದ್ದೆಯಲ್ಲಿ ಶವ ಎಸೆದು ದುಷ್ಕರ್ಮಿಗಳು ಪರಾರಿ

author img

By

Published : Mar 27, 2022, 6:37 PM IST

ಯುವಕನ ಬರ್ಬರ ಹತ್ಯೆ
ಯುವಕನ ಬರ್ಬರ ಹತ್ಯೆ

ಚಿಕ್ಕೋಡಿ ತಾಲೂಕಿನ ಯಡೂರುವಾಡಿ ಗ್ರಾಮದಲ್ಲಿ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಶವವನ್ನು ಕಬ್ಬಿನ ಗದ್ದೆಯಲ್ಲಿ ಎಸೆದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಚಿಕ್ಕೋಡಿ(ಬೆಳಗಾವಿ): ಬೆಳಗಾವಿ ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿ, ಕಬ್ಬಿನ ಗದ್ದೆಯಲ್ಲಿ ಎಸೆದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಯಡೂರುವಾಡಿ ಗ್ರಾಮದಲ್ಲಿ ನಡೆದಿದೆ. ಯಡೂರುವಾಡಿ ಗ್ರಾಮದ ಅನೀಲ್ ಸವಳೆ(30) ಕೊಲೆಗೀಡಾಗಿರುವ ಯುವಕ.

ದುಷ್ಕರ್ಮಿಗಳು ಅನೀಲ್​​ನನ್ನ ಕೊಲೆ ಮಾಡಿ ಗ್ರಾಮದ ಹೊರವಲಯದಲ್ಲಿರುವ ಕಬ್ಬಿನ ಗದ್ದೆಯಲ್ಲಿ ಶವವನ್ನು ಎಸೆದು ಪರಾರಿಯಾಗಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಅಂಕಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುವಕನ ಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈ ಕುರಿತು ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.