ETV Bharat / state

ಶಾಸಕಿ ಅಂಜಲಿ ನಿಂಬಾಳ್ಕರ್ ತರಾಟೆ ಪ್ರಕರಣ.. ಆರೋಗ್ಯ ಇಲಾಖೆಗೆ ಬೆಳಗಾವಿ ಡಿಹೆಚ್‌ಒ ಪತ್ರ

author img

By

Published : Jul 30, 2022, 5:07 PM IST

belgaum-dho-mahesh-koni-wrote-letter-to-health-dept-against-mls-anjali-nimbalkar
ಶಾಸಕಿ ಅಂಜಲಿ ನಿಂಬಾಳ್ಕರ್ ತರಾಟೆ ಪ್ರಕರಣ : ಆರೋಗ್ಯ ಇಲಾಖೆಗೆ ಬೆಳಗಾವಿ ಡಿಹೆಚ್‌ಒ ಪತ್ರ

ಕೈ ಶಾಸಕಿ ಅಂಜಲಿ ನಿಂಬಾಳ್ಕರ್ ಅವರಿಂದ ತರಾಟೆ- ಡಿಹೆಚ್​ಓ ಅಸಮಾಧಾನ- ಆರೋಗ್ಯ ಇಲಾಖೆಗೆ ಪತ್ರ

ಬೆಳಗಾವಿ : ಡಿಹೆಚ್‌ಒಗೆ 'ಕೈ' ಶಾಸಕಿ ಅಂಜಲಿ ನಿಂಬಾಳ್ಕರ್ ತರಾಟೆ ಪ್ರಕರಣ ಹಿನ್ನೆಲೆ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಬೆಳಗಾವಿ ಡಿಹೆಚ್‌ಒ ಡಾ.ಮಹೇಶ್ ಕೋಣಿ ಪತ್ರ ಬರೆದಿದ್ದಾರೆ. ತಮ್ಮದೇನೂ ತಪ್ಪು ಇಲ್ಲದೇ ಇದ್ದರೂ ಜನಪ್ರತಿನಿಧಿಗಳು ತಮಗೆ ಕರೆ ಮಾಡಿ ತರಾಟೆಗೆ ತಗೆದುಕೊಳ್ಳುತ್ತಿದ್ದಾರೆ ಎಂದು ಬೆಳಗಾವಿ ಡಿಹೆಚ್‌ಒ ಡಾ.ಮಹೇಶ್ ಕೋಣಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

belgaum-dho-mahesh-koni-wrote-letter-to-health-dept-against-mls-anjali-nimbalkar
ಆರೋಗ್ಯ ಇಲಾಖೆಗೆ ಬೆಳಗಾವಿ ಡಿಹೆಚ್‌ಒ ಪತ್ರ

ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿರುವ ಅವರು, ತಾಲೂಕು ಆಸ್ಪತ್ರೆಯಿಂದ ಬೆಳಗಾವಿಯ ಬಿಮ್ಸ್‌ಗೆ ನಿಯೋಜನೆಗೊಂಡ ತಜ್ಞ ವೈದ್ಯರು ಹಾಗೂ ಇತರ ಸಿಬ್ಬಂದಿ ಪಟ್ಟಿ ಸಮೇತ ಪತ್ರ ಬರೆದಿದ್ದಾರೆ. ಪ್ರಾದೇಶಿಕ ಆಯುಕ್ತ ಆದಿತ್ಯ ಅಮ್ಲಾನ್ ಬಿಸ್ವಾಸ್ ಅವರ ಪತ್ರಗಳ ಹಾಗೂ ಮೌಖಿಕ ಆದೇಶಗಳ ಅನ್ವಯ ವೈದ್ಯರು ಹಾಗೂ ಸಿಬ್ಬಂದಿಯನ್ನು ಬಿಮ್ಸ್ ಗೆ ನಿಯೋಜಿಸಲಾಗಿದೆ ಎಂದು ಡಾ. ಮಹೇಶ್ ಕೋಣಿ ಉಲ್ಲೇಖಿಸಿದ್ದಾರೆ.

belgaum-dho-mahesh-koni-wrote-letter-to-health-dept-against-mls-anjali-nimbalkar
ಆರೋಗ್ಯ ಇಲಾಖೆಗೆ ಬೆಳಗಾವಿ ಡಿಹೆಚ್‌ಒ ಪತ್ರ

ಆಯಾ ತಾಲೂಕು ಕೇಂದ್ರಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೈದ್ಯರು ಹಾಗೂ ಸಿಬ್ಬಂದಿಯನ್ನು ಬಿಮ್ಸ್‌ಗೆ ನಿಯೋಜನೆ ಮಾಡಿದ್ದರಿಂದ ಆಯಾ ಕ್ಷೇತ್ರದ ಜನಪ್ರತಿನಿಧಿಗಳು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ತಜ್ಞ ವೈದ್ಯರು ಹಾಗೂ ಸಿಬ್ಬಂದಿಯನ್ನು ತಾಲೂಕು ಕೇಂದ್ರಗಳಿಂದ ಬಿಮ್ಸ್‌ಗೆ ನಿಯೋಜನೆ ಮಾಡುವುದರಿಂದ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಲು ಆಗುತ್ತಿಲ್ಲ ಎಂದು ಜನಪ್ರತಿನಿಧಿಗಳು ಆಕ್ಷೇಪಣೆ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಬಿಮ್ಸ್‌ಗೆ ನಿಯೋಜನೆಗೊಂಡ ಸಿಬ್ಬಂದಿಯನ್ನು ಮೂಲ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುವಂತೆ ಆದೇಶಿಸಲು ಸೂಚಿಸಿರುತ್ತಾರೆ. ಹೀಗಾಗಿ ನಿಯೋಜಿತ ಅಧಿಕಾರಿಗಳು, ಸಿಬ್ಬಂದಿ ಬಿಮ್ಸ್‌ಗೆ ಕಳಿಸುವುದರಿಂದ ಆಗುತ್ತಿರುವ ತೊಂದರೆ ನಿವಾರಿಸುವಂತೆ ಮನವಿ ಮಾಡಿದ್ದಾರೆ.

ಆರೋಗ್ಯ ಇಲಾಖೆ ಮೂಲಗಳ ಪ್ರಕಾರ ಬೆಳಗಾವಿ ಜಿಲ್ಲೆಯಲ್ಲಿ 60ಕ್ಕೂ ಹೆಚ್ಚು ತಜ್ಞ ವೈದ್ಯರ ಕೊರತೆ ಇದೆ. ಈ ಮಧ್ಯೆ ತಾಲೂಕು ಕೇಂದ್ರಗಳಿಗೆ ನೇಮಕಗೊಂಡ ತಜ್ಞ ವೈದ್ಯರನ್ನು ಜಿಲ್ಲಾ ಕೇಂದ್ರಕ್ಕೆ ಕಳುಹಿಸಿದರೆ ತಾಲೂಕು ಆಸ್ಪತ್ರೆಗಳಿಗೆ ಬರುವ ಹಳ್ಳಿ ಜನರ ಪಾಡೇನು? ಈ ಬಗ್ಗೆ ಸರ್ಕಾರ ಸೂಕ್ತ ಗಮ‌ನ ಹರಿಸಲಿ, ಹಳ್ಳಿ ಜನರ ಆರೋಗ್ಯದ ಕಡೆ ಗಮನ ಹರಿಸಲಿ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

ಓದಿ : ಗೃಹ ಸಚಿವ ನಿವಾಸ ಮುತ್ತಿಗೆ: ಪ್ರವೀಣ್ ಕೊಲೆ ಪ್ರಕರಣದ ಪ್ರಗತಿ ಬಗ್ಗೆ ಡಿಜಿಪಿ ಸೂದ್​ಗೆ ಸಿಎಂ ತರಾಟೆ

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.