ETV Bharat / state

ಕನ್ನೇರಿಮಠದಲ್ಲಿ ಕರ್ನಾಟಕ ಭವನ ನಿರ್ಮಾಣ: ಮೂರು ಕೋಟಿ ರೂಪಾಯಿ ಅನುದಾನ

author img

By

Published : Oct 10, 2022, 2:30 PM IST

ಮಹಾರಾಷ್ಟ್ರದ ಕನ್ನೇರಿಮಠದಲ್ಲಿ ಕರ್ನಾಟಕ ಭವನ ನಿರ್ಮಾಣ ಮಾಡಲು, ಮೂರು ಕೋಟಿ ಅನುದಾನ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Construction of Karnataka Bhavan
ಕೊಲ್ಲಾಪುರದ ಕನ್ನೇರಿ ಸಿದ್ಧಗಿರಿ ಮಠದಲ್ಲಿ ಸಂತ ಸಮಾವೇಶ

ಬೆಳಗಾವಿ: ತಮ್ಮದೇ ಆದ ಆದರ್ಶ ಇಟ್ಟುಕೊಂಡು ಭಕ್ತರಲ್ಲಿ ಜಾಗೃತಿ ಮೂಡಿಸಿ ಧಾರ್ಮಿಕ, ಸಾಮಾಜಿಕ, ಆರ್ಥಿಕ ಕ್ರಾಂತಿಯನ್ನು ಕೊಲ್ಲಾಪುರದ ಕನ್ನೇರಿಮಠ ಮಾಡುತ್ತಿದೆ. ಹೀಗಾಗಿ ಕನ್ನೇರಿಮಠದಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ ಮೂರು ಕೋಟಿ ಹಣ ನೀಡಲಾಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇದು ಆದರ್ಶ ಮಠ: ಮಹಾರಾಷ್ಟ್ರದ ಕೊಲ್ಲಾಪುರದ ಕನ್ನೇರಿ ಸಿದ್ಧಗಿರಿ ಮಠದಲ್ಲಿ ಸಂತ ಸಮಾವೇಶ ಉದ್ಘಾಟಿಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಇಂದು ಸಹೃದಯಿ ಸಂತರ ಸಮಾವೇಶ ನಡೆಯುತ್ತಿರೋದು ಸಂತಸದ ಸಂಗತಿಯಾಗಿದೆ. ಇಲ್ಲಿ ಮೊದಲ ಬಾರಿ ಬರ್ತಿದ್ದೇನೆ. ಭಕ್ತಿ ಭಾವ ಕಾರ್ಯಕ್ರಮ, ಮಠದ ಸೇವೆಯನ್ನು ನೋಡಿದಾಗ ಇದು ಆದರ್ಶ ಮಠ ಅನಿಸುತ್ತದೆ‌ ಎಂದರು.

Construction of Karnataka Bhavan
ಕೊಲ್ಲಾಪುರದ ಕನ್ನೇರಿ ಸಿದ್ಧಗಿರಿ ಮಠದಲ್ಲಿ ಸಂತ ಸಮಾವೇಶ

ಆದರ್ಶ ಮಠ ಆಗಲು ತನ್ನದೇ ಆದ ಆದರ್ಶ ಇರಬೇಕು. ತಮ್ಮದೇ ಆದ ಆದರ್ಶ ಇಟ್ಟುಕೊಂಡು ಭಕ್ತರಲ್ಲಿ ಜಾಗೃತಿ ಮೂಡಿಸಿ ಧಾರ್ಮಿಕ, ಸಾಮಾಜಿಕ, ಆರ್ಥಿಕ ಕ್ರಾಂತಿಯನ್ನು ಕನ್ನೇರಿಮಠ ಮಾಡ್ತಿದೆ. ಭಕ್ತಿ ಅಂದ್ರೆ ಉತ್ಕೃಷ್ಟವಾದ ಪ್ರೀತಿ, ಅನ್‌ಕಂಡೀಷನಲ್ ಲವ್ ಅಂತಾ ಭಕ್ತಿಯನ್ನು ನಾನು ಇಲ್ಲಿ ನೋಡ್ತಿದೀನಿ. ಗರ್ಭದಿಂದ ಭೂತಾಯಿ. ಗರ್ಭದವರೆಗೆ ತಾಯಿ ಅನ್ನೋದು ಬಹಳ ಶ್ರೇಷ್ಠವಾದದ್ದು. ಜನ್ಮಪೂರ್ವ ಸಂಬಂಧ ತಾಯಿ ಸಂಬಂಧ. ಬಳಿಕ ಉಳಿದ ಎಲ್ಲ ಸಂಬಂಧಗಳು. ಹೀಗಾಗಿ ತಾಯಿಗೆ ಉತ್ತಮ ಸ್ಥಾನ ಕೊಟ್ಟಿದ್ದೇವೆ. ಜನ್ಮಕೊಟ್ಟ ತಾಯಿ, ಸಲಹುವ ತಾಯಿ ಎರಡನ್ನೂ ಪೋಷಿಸಿದಾಗ ನಮ್ಮ ಜನ್ಮ ಸಾರ್ಥಕವಾಗುತ್ತದೆ ಎಂದು ಸಿಎಂ ಹೇಳಿದರು.

ಸಂಸ್ಕೃತಿ, ಸಂಸ್ಕಾರ ಮಠ, ಮಂದಿರಗಳಲ್ಲಿ ಸಿಗುತ್ತದೆ: ಬೇರೆ ದೇಶಕ್ಕೂ ನಮಗೂ ಇರುವ ವ್ಯತ್ಯಾಸ ನಮ್ಮ ಸಂಸ್ಕೃತಿ, ಸಂಸ್ಕಾರ. ಅದು ನಮ್ಮ ದೇಶದ ಮಠ, ಮಂದಿರಗಳಲ್ಲಿ ಸಿಗುತ್ತದೆ. ನಾಗರಿಕತೆ ಮತ್ತು ಸಂಸ್ಕೃತಿ ಮಧ್ಯದ ವ್ಯತ್ಯಾಸ ಮರೆತಿದ್ದೇವೆ. ನಾಗರಿಕತೆಯನ್ನೇ ನಾವು ಸಂಸ್ಕೃತಿ ಅಂದುಕೊಂಡಿದ್ದೇವೆ. ನಾವು ಹಿಂದೆ ಏನಾಗಿದ್ದೆವೋ ಅದು ನಾಗರಿಕತೆ, ನಾವೇನ್ ಆಗಬೇಕಲ್ಲ ಅದು ನಮ್ಮ ಸಂಸ್ಕೃತಿ.

ಇದನ್ನೂ ಓದಿ: ಸಿಎಂ ಭೇಟಿಯಾದ ಮಹಾರಾಷ್ಟ್ರ ಶಾಸಕ ರಾಜು ಶೆಟ್ಟಿ: ಆಲಮಟ್ಟಿ ಜಲಾಶಯ ಎತ್ತರಿಸದಂತೆ ಮನವಿ

ನಮ್ಮ ಬೀಸುಕಲ್ಲು ಹೋಗಿ ಬಟನ್ ಒತ್ತುವ ಮಿಕ್ಸರ್ ಬಂದಿದೆ. ಈ ಮಿಕ್ಸರ್ ನಮ್ಮ ನಾಗರಿಕತೆ, ಬೀಸುಕಲ್ಲು ಸಂಸ್ಕೃತಿ, ನಾಗರಿಕತೆ, ಸಂಸ್ಕೃತಿ ಇವತ್ತಿನ ಆಧುನೀಕರಣದಿಂದ ಬೇರ್ಪಡುತ್ತಿವೆ. ಇದು ಸರಿಯಾದ ಬೆಳವಣಿಗೆಯಲ್ಲ. ಸತ್ಯ, ಧರ್ಮ, ನ್ಯಾಯದಿಂದ ಸಂಸ್ಕೃತಿ ಬರುತ್ತದೆ‌. ಇವು ಮಠ-ಮಾನ್ಯಗಳಲ್ಲಿ ಸಿಗುತ್ತದೆ. ಕನ್ಹೇರಿಮಠದ ಗುರುಗಳನ್ನು ನೋಡಿದಾಗ ಮುಗ್ಧತೆ ಕಾಣುತ್ತದೆ. ಮುಗ್ಧ ಮಗುವಿನ ಭಾವ ಅವರ ಮುಖದಲ್ಲಿ ಕಾಣುತ್ತದೆ‌ ಎಂದರು.

ನಮ್ಮ ದೇಶದಲ್ಲಿ ಆಧ್ಯಾತ್ಮರು ಇದ್ದಾರೆ: ಭಾರತ ಸಂಸ್ಕಾರ, ಸಂಸ್ಕೃತಿಯಿಂದ ಕೂಡಿದ ದೇಶ. ನಿರಂತರ ಭಕ್ತಿಯ ಚಳವಳಿ ಆದ ದೇಶ ಭಾರತ. ಇಲ್ಲಿ ಆಧ್ಯಾತ್ಮದ ಚಿಂತನೆ, ಆಧ್ಯಾತ್ಮರು ನಮ್ಮ ದೇಶದಲ್ಲಿ ಇದ್ದಾರೆ. ಕನ್ನೇರಿಮಠದ ದೊಡ್ಡ ಮಠ ಕರ್ನಾಟಕದಲ್ಲಿಯೂ ಸ್ಥಾಪನೆ ಮಾಡಬೇಕು. ಅದಕ್ಕೆ ಸಂಪೂರ್ಣ ಸಹಕಾರ, ಜಾಗ ಸರ್ಕಾರದ ವತಿಯಿಂದ ಒದಗಿಸುತ್ತೇವೆ.

ಭೌತಿಕವಾಗಿ ಕೆಲಸ ಮಾಡಲು ಸಾಧ್ಯ. ಬೌದ್ಧಿಕವಾಗಿ ಮಾಡಲು ಗುರುಗಳು ಬೇಕು. ಈ ಪುಣ್ಯಭೂಮಿಗೆ ಬಂದು ನಾನು ಸಹ ಪ್ರೇರಿತನಾಗಿದ್ದೇನೆ. ನಮ್ಮ ರಾಜ್ಯದಲ್ಲಿ ಪುಣ್ಯಕೋಟಿ ಯೋಜನೆ ಮಾಡಿದ್ದೇವೆ. ನೂರು ಕೋಟಿ ರೂಪಾಯಿ ಇದೇ ತಿಂಗಳು ಕಲೆಕ್ಟ್ ಆಗ್ತಿದೆ. ಒಂದು ಲಕ್ಷ ಗೋವುಗಳನ್ನು ಜನರ ದುಡ್ಡಿನಿಂದ ರಕ್ಷಣೆ ಮಾಡಿದ್ದೇವೆ. ಈ ಮಠದಲ್ಲಿ ಇದು ಕಾರ್ಯಗತವಾಗುತ್ತಿದೆ ಎಂದು ಹೇಳಿದರು.

ಕನ್ನೇರಿ ಮಠದಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ ಮೂರು ಕೋಟಿ ನೀಡಿದ್ದು, ಕೆಲಸವನ್ನು ಪ್ರಾರಂಭ ಮಾಡಬೇಕು. ಮುಂಬರುವ ದಿನಗಳಲ್ಲಿ ಕರ್ನಾಟಕ ಭವನದೊಳಗಿನ ಕೆಲಸ ಕಾರ್ಯಕ್ಕೆ ಎರಡು ಕೋಟಿ ನೀಡುತ್ತೇನೆ‌ ಎಂದು ಸಿಎಂ‌ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.