ETV Bharat / state

ಬೆಳಗಾವಿಯಲ್ಲಿ ಬಾಲಕನಿಗೆ ಚಾಕು ಇರಿತ; ಕುಂದಾನಗರಿಯಲ್ಲಿ ಬಿಗುವಿನ ವಾತಾವರಣ

author img

By

Published : Sep 27, 2022, 8:02 AM IST

ಅಪ್ರಾಪ್ತ ಬಾಲಕನೊರ್ವನಿಗೆ ತಡರಾತ್ರಿ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟನೆ ನಡೆದಿದೆ.

KN_BGM_01
ಬಾಲಕನಿಗೆ ಚಾಕು ಇರಿತ

ಬೆಳಗಾವಿ: ನಗರದ ಕ್ಯಾಂಪ್ ಪ್ರದೇಶದಲ್ಲಿ ಅಪರಿಚಿತ ದುಷ್ಕರ್ಮಿಗಳು ಬಾಲಕನಿಗೆ ಚಾಕುವಿನಿಂದ ಇರಿದು ಪರಾರಿ ಆಗಿರುವ ಘಟನೆ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾದ ಹಿನ್ನೆಲೆ ಪೊಲೀಸರು ಮೊಕ್ಕಾಂ ಹೂಡಿದ್ದಾರೆ.

ನಗರದ ಕ್ಯಾಂಪ್ ಪ್ರದೇಶದ ನಿವಾಸಿ ಫರಾನ್ ಧಾರವಾಡಕರ್(15) ಬೆನ್ನಿಗೆ ಚೂರಿ ಇರಿದು‌ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ತಕ್ಷಣ ಫರಾನ್​ನನ್ನು ನಗರದ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ‌ನೀಡಲಾಗುತ್ತಿದೆ. ವಿಷಯ ತಿಳಿದ ಕೂಡಲೇ ಬಿಮ್ಸ್ ಆವರಣದಲ್ಲಿ ಜಮಾವಣೆಗೊಳ್ಳುತ್ತಿದ್ದ ಜನರನ್ನು ಎಪಿಎಂಸಿ ಪೊಲೀಸರು ಚದುರಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಸ್ಥಳಕ್ಕೆ ಡಿಸಿಪಿ ಸ್ನೇಹಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು, ಬೀಮ್ಸ್ ಆವರಣದಲ್ಲಿ ಎಪಿಎಂಸಿ ಪೊಲೀಸರು ‌ಮೊಕ್ಕಾಂ ಹೂಡಿದ್ದಾರೆ.

ಇದನ್ನೂ ಓದಿ: ಬೈಕ್​​ ವಿಚಾರಕ್ಕೆ ಗಲಾಟೆ: ಕನಕಗಿರಿಯಲ್ಲಿ ಚಾಕುವಿನಿಂದ ಇರಿದು ಸ್ನೇಹಿತನ ಕೊಲೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.