ETV Bharat / state

ಬೆಳಗಾವಿ: ಸ್ವಾಮಿ ವಿವೇಕಾನಂದ ಸೇವಾ ಪ್ರತಿಷ್ಠಾನಕ್ಕೆ ಗವರ್ನರ್​ ಭೇಟಿ, ಮಕ್ಕಳೊಂದಿಗೆ ಸಂವಾದ

author img

By

Published : Mar 9, 2022, 5:46 PM IST

ಸ್ವಾಮಿ ವಿವೇಕಾನಂದ ಸೇವಾ ಪ್ರತಿಷ್ಠಾನದ ಮಕ್ಕಳೊಂದಿಗೆ ಸಂವಾದ ನಡೆಸಿದರು. ಪ್ರತಿಷ್ಠಾನದ ಮೂಲಭೂತ ಸೌಕರ್ಯಗಳನ್ನು ವೀಕ್ಷಿಸಿ ಮಾಹಿತಿ ಪಡೆದರು.

Governor Thaawarchand Gehlot visited Swami Vivekanand Seva Pratishthan
ಸ್ವಾಮಿ ವಿವೇಕಾನಂದ ಸೇವಾ ಪ್ರತಿಷ್ಠಾನಕ್ಕೆ ರಾಜ್ಯಪಾಲರ ಭೇಟಿ

ಬೆಳಗಾವಿ: ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಸ್ವಾಮಿ ವಿವೇಕಾನಂದ ಸೇವಾ ಪ್ರತಿಷ್ಠಾನದ ಗಂಗಮ್ಮ ಚಿಕ್ಕುಂಬಿಮಠ ಬಾಲ ಕಲ್ಯಾಣ ಕೇಂದ್ರಕ್ಕೆ ಭೇಟಿ ನೀಡಿ, ಮಕ್ಕಳೊಂದಿಗೆ ಕೆಲವು ಕ್ಷಣ ಕಳೆದರು.

ಮಕ್ಕಳನ್ನು ಪಾಲನೆ ಮಾಡುತ್ತಿರುವ ವಿವೇಕಾನಂದ ಸೇವಾ ಸಂಸ್ಥೆಗೆ ರಾಜ್ಯಪಾಲರು ಭೇಟಿ ನೀಡಿ ಸಂಸ್ಥೆಯಲ್ಲಿರುವ ಎಲ್ಲ ಮೂಲಭೂತ ಸೌಕರ್ಯಗಳನ್ನು ವೀಕ್ಷಿಸಿದರು. ಸಂಸ್ಥೆಯು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ಒಂದು ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

ಪುಟ್ಟ ಪುಟ್ಟ ಮಕ್ಕಳ ಪಾಲನೆಗಾಗಿ ಸಂಸ್ಥೆಯ ಕಾಳಜಿ ಶ್ಲಾಘನೀಯ, ಸಮಾಜಮುಖಿ ಕಾರ್ಯ ಮಾಡುತ್ತಿರುವುದು ಸಂತಸದ ವಿಷಯ. ಹೀಗೆ ಅವರ ಕಾರ್ಯ ಮುಂದುವರೆಯಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಸಂಸದರಾದ ಮಂಗಳ ಅಂಗಡಿ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಸಂಸ್ಥೆಯ ಅಧ್ಯಕ್ಷ ಮನೀಶ್ ಬಂಡ್ಮಕರ್, ಕಾರ್ಯದರ್ಶಿ ಗಿರೀಶ್ ಇನಾಮದಾರ್ ಉಪಸ್ಥಿತರಿದ್ದರು.

ಇದನ್ನೂ ಓದಿ: ನಾನು ಜನರಿಗೋಸ್ಕರ ಕೆಲಸ ಮಾಡುತ್ತೇನೆ, ಕ್ರೆಡಿಟ್​​​ಗಾಗಿ ಅಲ್ಲ: ಸಂಸದೆ ಸುಮಲತಾ ಅಂಬರೀಶ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.