ETV Bharat / state

ಆರ್ಥಿಕತೆ ಮೇಲೆ ಪರಿಣಾಮ ಬೀರದ ರೀತಿ ಕೆಲವು ನಿಯಮ ಜಾರಿ: ಸಿಎಂ ಬೊಮ್ಮಾಯಿ

author img

By

Published : Dec 26, 2022, 1:23 PM IST

Updated : Dec 26, 2022, 2:28 PM IST

CM Basavaraj Bommai
ಸಿಎಂ ಬಸವರಾಜ ಬೊಮ್ಮಾಯಿ

ಇಂದು ಮಧ್ಯಾಹ್ನ ಕೋವಿಡ್​ ಸಂಬಂಧ ಉನ್ನತ ಮಟ್ಟದ ತಜ್ಞರ ಸಭೆ - ಬೂಸ್ಟರ್ ಡೋಸ್ ಕಡ್ಡಾಯ ಕುರಿತು ಚರ್ಚೆ - ದೆಹಲಿಗೆ ತೆರಳಲಿರುವ ಬಸವರಾಜ ಬೊಮ್ಮಾಯಿ - ಅಮಿತ್ ಶಾ ಜೊತೆ ಚುನಾವಣಾ ತಯಾರಿ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತುಕತೆ

ಸುವರ್ಣ ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ

ಬೆಳಗಾವಿ: ಚೀನಾದಲ್ಲಿ ಕೊರೊನಾ ವೈರಸ್​ ಸೋಂಕು ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆ ರಾಜ್ಯ, ದೇಶದಲ್ಲಿ ಕೊರೊನಾ ಆತಂಕ ಶುರುವಾಗಿದೆ. ಇಂದು ಮಧ್ಯಾಹ್ನ ಕೋವಿಡ್​ ಸಂಬಂಧ ಉನ್ನತ ಮಟ್ಟದ ತಜ್ಞರ ಸಭೆ ನಡೆಯಲಿದ್ದು, ಕೊರೊನಾ ಜಾಗೃತಿ ಹಾಗೂ ಬೂಸ್ಟರ್ ಡೋಸ್ ಕಡ್ಡಾಯ ಮತ್ತು ಆರ್ಥಿಕತೆ ಮೇಲೆ ಪರಿಣಾಮ ಬೀರದ ರೀತಿ ಕೆಲವು ನಿಯಮಗಳನ್ನ ಜಾರಿ ಮಾಡುವ ಕುರಿತು ಚರ್ಚೆ ನಡೆಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬೆಳಗಾವಿ ಅಧಿವೇಶನದಲ್ಲಿ ಯಾವ ವಿಚಾರವನ್ನು ಕೂಡ ಚರ್ಚೆ ಮಾಡಲು ನಾವು ಸಿದ್ಧ. ಮಧ್ಯಾಹ್ನ ದೆಹಲಿಗೆ ಹೋಗ್ತಿದ್ದೇನೆ, ಕಳೆದ ಬಾರಿ ಹೋದಾಗ ಸಭೆಗಳು ಅಪೂರ್ಣ ಆಗಿದ್ದವು. ಈ ಬಾರಿ ಅಮಿತ್ ಶಾ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಚುನಾವಣಾ ತಯಾರಿ, ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಮಾಡಲಾಗುವುದು. ಸಾಧ್ಯವಾದರೆ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ ನಡೆಸುತ್ತೇನೆ ಎಂದು ಹೇಳಿದರು.

ಸಚಿವ ಸುಧಾಕರ್ ಹೇಳಿಕೆ: ಚೀನಾದಿಂದ ಬಂದಿದ್ದ ವ್ಯಕ್ತಿಗೆ ಕೋವಿಡ್​ ದೃಢಪಟ್ಟಿದೆ. ಆದ್ರೆ ಆತನಿಗೆ ದೃಢಪಟ್ಟಿರುವ ಕೋವಿಡ್​ ಯಾವ ತಳಿ ಎಂಬುದು ಇನ್ನೂ ಪತ್ತೆಯಾಗಿಲ್ಲ. ಕೊರೊನಾ ಪಾಸಿಟಿವ್ ಬಂದ ತಕ್ಷಣ ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಸರ್ಕಾರ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ ಎಂದು ಆರೋಗ್ಯ ಸಚಿವ ಕೆ ಸುಧಾಕರ್ ಹೇಳಿದರು.

ಅವರು ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾದ್ಯಮದವರೊಂದಿಗೆಮಾತನಾಡಿ, ಸದ್ಯ ನಮ್ಮ ದೇಶದಲ್ಲಿ ಆತಂಕ ಪಡುವಂತ ಸ್ಥಿತಿ ಬಂದಿಲ್ಲಾ. ಚೀನಾಗೆ ಹೋಲಿಕೆ ಮಾಡೋದು ಬೇಡ. ಯಾರು ಆತಂಕ ಪಡುವ ಅಗತ್ಯವಿಲ್ಲ. ಮುಂಜಾಗ್ರತಾ ಕ್ರಮ ತಗೆದುಕೊಂಡರೆ ಸಾಕು. ನಮ್ಮ ವ್ಯಾಕ್ಸಿನೇಷನ್‌ ಚನ್ನಾಗಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ ಅಂತಾ ಸುಧಾಕರ್ ತಿಳಿಸಿದ್ದಾರೆ.

ಇದನ್ನೂ ಓದಿ: ವಿದೇಶದಿಂದ ಶಿವಮೊಗ್ಗಕ್ಕೆ ಬಂದ ವ್ಯಕ್ತಿಗೆ ಕೋವಿಡ್ ಪಾಸಿಟಿವ್: ಇಬ್ಬರು ಹೋಂ ಐಸೋಲೇಷನ್

Last Updated :Dec 26, 2022, 2:28 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.