ETV Bharat / state

ರಸ್ತೆಯಲ್ಲೇ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ : ನಾಲ್ಕು ವರ್ಷದ ಮಗು ಅನಾಥ !

author img

By

Published : Mar 25, 2022, 4:29 PM IST

Updated : Mar 25, 2022, 4:37 PM IST

ಬೆಳಗಾವಿಯ ಕೋಟೆ ಕರೆ ಬಳಿ ಮಧ್ಯಾಹ್ನ ಎರಡು ಗಂಟೆಗೆ ಪತ್ನಿಯನ್ನೇ ಪತಿ ಮಚ್ಚಿನಿಂದ ಕೊಚ್ಚಿ ಕೊಲೆ ಗೈದಿರುವ ಘಟನೆ ನಡೆದಿದೆ. ಮಂಜೂರ್-ಹೀನಾಕೌಸರ್ ನಡುವೆ ಕೌಟುಂಬಿಕ ಕಲಹವಿತ್ತು. ಈ ಕಾರಣಕ್ಕೆ ಕೊಲೆ ಮಾಡಲಾಗಿದೆ ಎನ್ನಲಾಗ್ತಿದೆ..

Husband who killed his wife on the road at belgaum
ರಸ್ತೆಯಲ್ಲೇ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ

ಬೆಳಗಾವಿ : ಸಾರ್ವಜನಿಕವಾಗಿ ಪತ್ನಿಯನ್ನೇ ಪತಿ ಮಚ್ಚಿನಿಂದ ಕೊಚ್ಚಿ ಕೊಲೆಗೈದಿದ್ದಾನೆ. ಬೆಳಗಾವಿಯ ಕೋಟೆ ಕೆರೆ ಬಳಿ ಮಧ್ಯಾಹ್ನ ಎರಡು ಗಂಟೆಗೆ ಈ ಘಟನೆ ನಡೆದಿದೆ. ಹೀನಾ ಕೌಸರ್ ಮಂಜೂರ್ ಇಲಾಹಿ ನದಾಫ್ (27) ಎಂಬುವರು ಕೊಲೆಯಾದ ದುರ್ದೈವಿ. ಈ ಘಟನೆ ನಡೆದ ಕೆಲವೇ ಕ್ಷಣಗಳಲ್ಲಿ ಆರೋಪಿ ಮಂಜೂರ್ ಇಲಾಹಿ ನದಾಫ್ (34) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಸ್ತೆಯಲ್ಲೇ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ

ಬೆಳಗಾವಿಯ ಗಾಂಧಿನಗರದ ಹೀನಾಕೌಸರ್ ಕಳೆದ ನಾಲ್ಕು ವರ್ಷಗಳ ಹಿಂದೆ ಬೈಲಹೊಂಗಲ ತಾಲೂಕಿನ ದೇವಲಾಪುರ ಗ್ರಾಮದ ಮಂಜೂರ್ ಜೊತೆ ವಿವಾಹವಾಗಿದ್ದರು. ಈ ದಂಪತಿಗೆ ನಾಲ್ಕು ವರ್ಷದ ಪುತ್ರನಿದ್ದಾನೆ. ತಾಯಿ ಮೃತಪಟ್ಟಿದ್ದು, ತಂದೆ ಜೈಲು ಪಾಲಾದ ಕಾರಣಕ್ಕೆ ನಾಲ್ಕು ವರ್ಷದ ಮಗು ಈಗ ಅನಾಥವಾಗಿದೆ.

ಕೌಟುಂಬಿಕ ಕಲಹ : ಮಂಜೂರ್-ಹೀನಾಕೌಸರ್ ನಡುವೆ ಕೌಟುಂಬಿಕ ಕಲಹವಿತ್ತು. ಈ ಕಾರಣಕ್ಕೆ ಕಳೆದ ಎಂಟು ತಿಂಗಳ ಹಿಂದೆ ಹೀನಾಕೌಸರ್ ವಿಚ್ಛೇದನ ಕೋರಿ, ಬೆಳಗಾವಿಯ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಇಂದು ಕೋರ್ಟ್‌ಗೆ ಹಾಜರಾಗಿ ಗಾಂಧಿನಗರದಲ್ಲಿರುವ ತವರು ಮನೆಗೆ ಹೀನಾಕೌಸರ್ ವಾಪಸ್ ಆಗುತ್ತಿದ್ದರು.

ಈ ವೇಳೆ ಕೋಟೆ ಕೆರೆ ಬಳಿ ಆಗಮಿಸಿದ ಮಂಜೂರು ನಡೆದುಕೊಂಡು ಹೋಗುತ್ತಿದ್ದ ಹೀನಾಕೌಸರ್​ನನ್ನು ಅಡ್ಡಗಟ್ಟಿದ್ದಾನೆ. ಕೆಲ ಹೊತ್ತು ಹೀನಾಕೌಸರ್ ಜೊತೆಗೆ ವಾಗ್ವಾದವನ್ನೂ ಮಾಡಿದ್ದಾನೆ. ಬಳಿಕ ಹೀನಾಕೌಸರ್ ಕುತ್ತಿಗೆ, ಕೈಗೆ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ರಕ್ತದ ಮಡುವಿನಲ್ಲಿ ವಿಲವಿಲನೇ ಒದ್ದಾಡುತ್ತಿದ್ದ ಆಕೆಯನ್ನು, ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ, ಮಾರ್ಗ ಮಧ್ಯೆಯೇ ಹೀನಾಕೌಸರ್ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಸಿಡಿಲು ಬಡಿದು ಸಹೋದರರಿಬ್ಬರು ಗಂಭೀರ.. 15 ಕುರಿಗಳ ಸಾವು

ಮೃತದೇಹವನ್ನು ಜಿಲ್ಲಾಸ್ಪತ್ರೆಯಿಂದ ಶವಾಗಾರಕ್ಕೆ ಸಾಗಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಪೊಲೀಸರು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಿದ್ದಾರೆ. ಸ್ಥಳಕ್ಕೆ ಮಾರ್ಕೇಟ್ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದರು. ಮಂಜೂರ್​ ಕೆಲ ವರ್ಷಗಳಿಂದ ಹೀನಾಮಂಜೂರ್​ ಮೇಲೆ ದೈಹಿಕ ಹಲ್ಲೆ ಜೊತೆಗೆ ಮಾನಸಿಕ ಕಿರುಕುಳ ನೀಡುತ್ತಿದ್ದ. ಈ ಕಾರಣಕ್ಕೆ ಹೀನಾಕೌಸರ್ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು.

Last Updated : Mar 25, 2022, 4:37 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.