ETV Bharat / state

Jobs in Belagavi Court: ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲಿ ಸ್ಟೆನೋಗ್ರಾಫರ್​ ಹುದ್ದೆಗೆ ಅರ್ಜಿ ಆಹ್ವಾನ

author img

By

Published : Jul 24, 2023, 1:09 PM IST

ಪಿಯುಸಿ ಪೂರ್ಣಗೊಳಿಸಿದ ಆಸಕ್ತ ಪದವೀಧರರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

Belagavi District Court Recruitment for 13 Stenographer jobs
Belagavi District Court Recruitment for 13 Stenographer jobs

ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಶೀಘ್ರ ಲಿಪಿಗಾರ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ. ಒಟ್ಟು ಖಾಲಿ ಇರುವ 13 ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ.

ವಿದ್ಯಾರ್ಹತೆ: ಅಭ್ಯರ್ಥಿಗಳು ಪಿಯುಸಿ ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿ ನಡೆಸುವ ಡಿಪ್ಲೊಮಾ ಇನ್​ ಕಮರ್ಷಿಯಲ್​ ಪ್ರಾಕ್ಟೀಸ್​ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸುವ ಕನ್ನಡ ಮತ್ತು ಇಂಗ್ಲಿಷ್​ ಭಾಷೆಯ ಶೀಘ್ರಲಿಪಿ ಮತ್ತು ಶಾರ್ಟ್​ಎಂಡ್​​ ಪರೀಕ್ಷೆಯಲ್ಲಿ ಕಿರಿಯ ದರ್ಜೆ ಮತ್ತು ಹಿರಿಯ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು.

ಅಧಿಸೂಚನೆ
ಅಧಿಸೂಚನೆ

ವಯೋಮಿತಿ: ಗರಿಷ್ಠ ವಯೋಮಿತಿ ಗರಿಷ್ಠ 35 ವರ್ಷ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ 2ಎ, 2ಬಿ, 3ಎ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇದೆ.

ವೇತನ: ಮಾಸಿಕ ₹27,650- ₹52,650

ಅರ್ಜಿ ಸಲ್ಲಿಕೆ: ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಮುನ್ನ ಅಧಿಸೂಚನೆಯನ್ನು ಸರಿಯಾಗಿ ಓದಿ, ಮುಂದುವರೆಯಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ವಿಶೇಷಚೇತನ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಸಾಮಾನ್ಯ ಮತ್ತು ಪ್ರವರ್ಗ 2ಎ, 2ಬಿ, 3ಬಿ ಅಭ್ಯರ್ಥಿಗಳಿಗೆ 300 ರೂ ಅರ್ಜಿ ಶುಲ್ಕವಿದೆ.

ಆಯ್ಕೆ ಹೇಗೆ?: ಸಂದರ್ಶನ ಮತ್ತು ಕೆಳಕಂಡ ಪರೀಕ್ಷೆಗಳ ಮೂಲಕ ಮೆರಿಟ್​ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಅರ್ಹತಾ ಪರೀಕ್ಷೆ: ಅಭ್ಯರ್ಥಿಗಳು ಕನ್ನಡ ಮತ್ತು ಇಂಗ್ಲಿಷ್​ ಭಾಷೆಗಳಲ್ಲಿ ಪ್ರತಿ ನಿಮಿಷಕ್ಕೆ 120 ಪದಗಳ ವೇಗದಂತೆ 5 ನಿಮಿಷದ ಉಕ್ತಲೇಖನ ನೀಡಲಾಗುತ್ತದೆ. 45 ನಿಮಿಷದ ಟೈಪಿಂಗ್​ ಅಥವಾ ಕಂಪ್ಯೂಟರ್​ ಟೈಪಿಂಗ್​ ಪರೀಕ್ಷೆ ನಡೆಸಲಾಗುತ್ತದೆ.

ಜುಲೈ 21ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಆಗಸ್ಟ್​ 21 ಕಡೇಯ ದಿನ. ಅರ್ಜಿ ಶುಲ್ಕ ಪಾವತಿಗೆ ಆಗಸ್ಟ್​ 24 ಕಡೆಯ ದಿನಾಂಕ. ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅರ್ಜಿ ಸಲ್ಲಿಕೆ ಸೇರಿದಂತೆ ಇನ್ನಿತರ ಮಾಹಿತಿಗೆ districts.ecourts.gov.inಗೆ ಅಭ್ಯರ್ಥಿಗಳು ಭೇಟಿ ನೀಡಿ, ಅಲ್ಲಿ ಯಾವ ಜಿಲ್ಲಾ ಕೋರ್ಟ್​ ಎಂದು ಆಯ್ಕೆ ಮಾಡಿ ಮುಂದುವರೆಯಬೇಕು.

ಇದನ್ನೂ ಓದಿ: IBPS Recruitment: ಕ್ಲರ್ಕ್​ ಹುದ್ದೆಗಳಿಗೆ ಐಬಿಪಿಎಸ್‌ ನೇಮಕಾತಿ; ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.