ETV Bharat / state

ಬೆಳಗಾವಿಯಲ್ಲಿ ರಾಜ್ಯೋತ್ಸವ ಸಂಭ್ರಮ: ಪುನೀತ್ ಭಾವಚಿತ್ರವಿರುವ ಕೇಕ್ ಕತ್ತರಿಸಿ ಅಭಿಮಾನ

author img

By

Published : Nov 1, 2022, 8:05 AM IST

Updated : Nov 1, 2022, 1:17 PM IST

ಬೆಳಗಾವಿಯಲ್ಲಿ 67ನೇ ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಅಭಿಮಾನಿಗಳು, ಪುನೀತ್ ರಾಜಕುಮಾರ್ ಭಾವಚಿತ್ರ ಇರುವ ಕೇಕ್ ಕತ್ತರಿಸಿ ಸಂಭ್ರಮಿಸಿದರು.

Kannada Rajyothsava Celebration
ಅದ್ಧೂರಿ ಕನ್ನಡ ರಾಜ್ಯೋತ್ಸವ

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಕನ್ನಡ ಹಬ್ಬದ ಸಂಭ್ರಮ ಮನೆ ಮಾಡಿದೆ. ಮಧ್ಯರಾತ್ರಿಯೇ ರಾಜ್ಯೋತ್ಸವಕ್ಕೆ ಅದ್ಧೂರಿಯಾಗಿ ಕನ್ನಡಾಭಿಮಾನಿಗಳು ಚಾಲನೆ ನೀಡಿದ್ದಾರೆ. ಈ ವೇಳೆ ಪುನೀತ್ ಭಾವಚಿತ್ರ ಇರುವ ಕೇಕ್ ಕತ್ತರಿಸಿ ಸಂಭ್ರಮಿಸಿದರು.

ಅದ್ಧೂರಿ ಕನ್ನಡ ರಾಜ್ಯೋತ್ಸವ

ಚೆನ್ನಮ್ಮ ವೃತ್ತದಲ್ಲಿ ಸೇರಿದ ಯುವಕರು ಕನ್ನಡದ ಬಾವುಟ ಹಿಡಿದು ಕುಣಿದು ಕುಪ್ಪಳಿಸಿದರು. 12 ಗಂಟೆ ಆಗುತ್ತಿದ್ದಂತೆ ಕನ್ನಡಾಭಿಮಾನಿಗಳ ಖುಷಿ ಇಮ್ಮಡಿಯಾಗಿತ್ತು. ಕನ್ನಡ ಪರ, ಅಪ್ಪು ಪರವಾಗಿ ಜಯಘೋಷಗಳನ್ನು ಕೂಗಿದರು.

ಇದನ್ನೂ ಓದಿ: ನಿಮ್ಮಲ್ಲಿ ಸ್ಮಾರ್ಟ್ ಫೋನ್ ಇದ್ದರೆ, ನಾಳೆಯಿಂದ ಮೆಟ್ರೋ ಪ್ರಯಾಣ ಇನ್ನೂ ಸುಲಭ

Last Updated : Nov 1, 2022, 1:17 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.