ETV Bharat / state

ನಾಮಫಲಕ ತೆರವಿಗೆ ಮುಂದಾದ ಕರವೇ ಕಾರ್ಯಕರ್ತರು ಪೊಲೀಸ್​ ವಶಕ್ಕೆ

author img

By

Published : Aug 18, 2022, 4:57 PM IST

ನಾಮಫಲಕ ವಿಷಯದ ಸಂಬಂಧ ನಗರದ ಚೆನ್ನಮ್ಮ ವೃತ್ತದಲ್ಲಿ ಕರವೇ ಶಿವರಾಮೇಗೌಡ ಬಣದ ಅಧ್ಯಕ್ಷ ವಾಜೀದ್ ಹಿರೆಕೋಡಿ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು.

ನಾಮಫಲಕ ತೆರವಿಗೆ ಮುಂದಾದ ಕರವೇ ಕಾರ್ಯಕರ್ತರು
ನಾಮಫಲಕ ತೆರವಿಗೆ ಮುಂದಾದ ಕರವೇ ಕಾರ್ಯಕರ್ತರು

ಬೆಳಗಾವಿ: ವಿಶ್ವನಾಥ ಶುಗರ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಹೆಸರಿನ ನಾಮಫಲಕ ತೆರವು ಮಾಡುವಂತೆ ಆಗ್ರಹಿಸಿ ನಗರದ ಚೆನ್ನಮ್ಮ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ನಗರದ ಚೆನ್ನಮ್ಮ ವೃತ್ತದಲ್ಲಿ ಕರವೇ ಶಿವರಾಮೇಗೌಡ ಬಣದ ಅಧ್ಯಕ್ಷ ವಾಜೀದ್ ಹಿರೆಕೋಡಿ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು. ಈ ವೇಳೆ ಚೆನ್ನಮ್ಮ ವೃತ್ತದಲ್ಲಿ ಅರಣ್ಯ ಇಲಾಖೆ ಸಚಿವ ಉಮೇಶ ಕತ್ತಿ ಒಡೆತನದ ವಿಶ್ವನಾಥ ಶುಗರ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಹೆಸರಿನ ನಾಮಫಲಕವನ್ನ ತೆರವು ಮಾಡಲು ಮುಂದಾದರು. ಪರಿಣಾಮ ವಾಜೀದ್ ಹಾಗೂ ಪೊಲೀಸರ ನಡುವೆ ತಳ್ಳಾಟ ನೂಕಾಟ ನಡೆಯಿತು.

ನಾಮಫಲಕ ತೆರವಿಗೆ ಮುಂದಾದ ಕರವೇ ಕಾರ್ಯಕರ್ತರು ಪೊಲೀಸ್​ ವಶಕ್ಕೆ

ಬಳಿಕ ಕರವೇ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

ಇದನ್ನೂ ಓದಿ: ಕೊಡಗಿನಲ್ಲಿ ಸಿದ್ದರಾಮಯ್ಯ ಕಾರಿಗೆ ಬಿಜೆಪಿಗರಿಂದ ಮೊಟ್ಟೆ ಎಸೆತ, ಕಪ್ಪು ಬಾವುಟ ಪ್ರದರ್ಶನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.