ETV Bharat / state

ನಿನ್ನೆ ಮಧ್ಯರಾತ್ರಿವರೆಗೂ ಸಿಡಿ ಬಿಡ್ತಿನಿ ಅಂತಾ ಡಿಕೆಶಿ ಬ್ಲ್ಯಾಕ್​ಮೇಲ್ ಮಾಡ್ತಿದ್ರು: ರಮೇಶ ಜಾರಕಿಹೊಳಿ ಆರೋಪ

author img

By

Published : May 10, 2023, 2:32 PM IST

ಸಿಡಿ ಬಿಡುಗಡೆ ಮಾಡ್ತೇನಿ ಎಂದು ಡಿಕೆ ಶಿವಕುಮಾರ್​ ಬ್ಲಾಕ್​ಮೇಲ್​ ಮಾಡಿದ್ದಾರೆ ಎಂದು ರಮೇಶ್​ ಜಾರಕಿಹೊಳಿ ಆರೋಪ ಮಾಡಿದ್ದಾರೆ.

ರಮೇಶ್ ಜಾರಕಿಹೊಳಿ
ರಮೇಶ್ ಜಾರಕಿಹೊಳಿ

ರಮೇಶ್​ ಜಾರಕಿಹೊಳಿ ಹೇಳಿಕೆ

ಬೆಳಗಾವಿ: ನಿನ್ನೆ ಮಧ್ಯರಾತ್ರಿವರೆಗೂ ಸಿಡಿ ಬಿಡ್ತಿನಿ, ಸಿಡಿ ಬಿಡ್ತಿನಿ ಎಂದು ಡಿ.ಕೆ.ಶಿವಕುಮಾರ್ ನನ್ನನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು ಎಂದು ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ. ಗೋಕಾಕ್ ಪಟ್ಟಣದಲ್ಲಿ ಇಂದು ಮತ ಚಲಾಯಿಸಿದ ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಚುನಾವಣೆ ಘೋಷಣೆ ಆದಾಗಿನಿಂದ ಡಿಕೆ ಶಿವಕುಮಾರ್​ ಬ್ಲ್ಯಾಕ್​ಮೇಲ್ ಮಾಡುತ್ತಲೇ ಇದ್ದಾರೆ. ಕೇಂದ್ರ ಗೃಹಸಚಿವರು ಹಾಗೂ ಮುಂಬರುವ ರಾಜ್ಯದ ಮುಖ್ಯಮಂತ್ರಿ ಸಿಡಿ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು. ಡಿಕೆಶಿ ಸಿಡಿ ಮಾಡಿ ನೂರಾರು ಜನರ ಬಾಳು ಹಾಳು ಮಾಡಿದ್ದಾರೆ ಎಂದು ಕಿಡಿಕಾರಿದರು.

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಹಸ್ತಕ್ಷೇಪ ಬಿಡಬೇಕು. ಇಲ್ಲದಿದ್ದರೆ ಸಿಡಿ ಬಿಡುವುದಾಗಿ ಬೆದರಿಕೆ ಹಾಕಿದ್ದರು. ನಾನು ಯಾರ ಬೆದರಿಕೆಗೂ ಹೆದರುವವನಲ್ಲ. ನನ್ನ ಬೆನ್ನಿಗೆ ನನ್ನ ಕುಟುಂಬ ಹಾಗೂ ಕ್ಷೇತ್ರದ ಜನರಿದ್ದಾರೆ. ಇವರ ಬೆದರಿಕೆಗಳಿಗೆ ಹೆದರುವ ಮಾತೇ ಇಲ್ಲ. ಈ ಮೊದಲು ಡಿಕೆಶಿ ಈಗಿನಂತಿರಲಿಲ್ಲ. ವಿಷಕನ್ಯೆಯ ಸಹವಾಸ ಡಿಕೆಶಿಯನ್ನು ಬದಲು ಮಾಡಿದೆ. ಈ ಪ್ರಕರಣ ಸಿಬಿಐಗೆ ಒಪ್ಪಿಸಿದರೆ ನೂರಾರು ಜನರು ನೆಮ್ಮದಿಯ ಜೀವನ ಮಾಡುತ್ತಾರೆ ಎಂದು ರಮೇಶ ಜಾರಕಿಹೊಳಿ ಹೇಳಿದರು.

ಈ ಬಾರಿ ಬೆಳಗಾವಿ ಜಿಲ್ಲೆಯಲ್ಲಿ ಬಿಜೆಪಿ 17 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದಾರೆ. ಮೇ 13 ರಂದು ಅಭೂತಪೂರ್ವ ಫಲಿತಾಂಶದಿಂದ ಬಿಜೆಪಿ ಅಧಿಕಾರದ ಗದ್ದುಗೆ ಏರಲಿದೆ ಎಂದು ರಮೇಶ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ಸ್ಪರ್ಧಿಸುತ್ತಿರುವ ಕ್ಷೇತ್ರದಲ್ಲಿ ಮತ ಚಲಾಯಿಸಲು ಸಾಧ್ಯವಾಗದ ಅಭ್ಯರ್ಥಿಗಳಿವರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.