ETV Bharat / state

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸರ್ಕಾರಿ ಶಿಷ್ಟಾಚಾರ ಉಲ್ಲಂಘಿಸುತ್ತಿದ್ದಾರೆ: ರಮೇಶ್ ಜಾರಕಿಹೊಳಿ

author img

By

Published : Feb 18, 2023, 6:27 PM IST

Updated : Feb 18, 2023, 9:12 PM IST

ಶಿವಾಜಿ ಮಹಾರಾಜರ ಪುತ್ಥಳಿ ಅನಾವರಣ - ಪೂರ್ಣ ಪ್ರಮಾಣದ ಕಾಂಗ್ರೆಸ್ ಕಾರ್ಯಕ್ರಮವನ್ನಾಗಿ ಮಾಡುವುದಕ್ಕೆ ಹೋಗುತ್ತಿದ್ದಾರೆ - ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆರೋಪ.

Ramesh Jarakiholi reaction on Lakshmi Hebbalkar
ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸರ್ಕಾರಿ ಶಿಷ್ಟಾಚಾರ ಉಲ್ಲಂಘಿಸುತ್ತಿದ್ದಾರೆ: ರಮೇಶ್ ಜಾರಕಿಹೊಳಿ

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮತ್ತು ಚನ್ನರಾಜ್ ಹಟ್ಟಿಹೋಳಿ ಪ್ರತಿಕ್ರಿಯೆ

ಬೆಳಗಾವಿ: ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಸರ್ಕಾರಿ ಶಿಷ್ಟಾಚಾರ ಉಲ್ಲಂಘಿಸಿ ರಾಜಹಂಸಗಡದಲ್ಲಿ ನಿರ್ಮಾಣ ಆಗುತ್ತಿರುವ ಶಿವಾಜಿ ಮಹಾರಾಜರ ಪುತ್ಥಳಿ ಅನಾವರಣ ಮಾಡುವುದಕ್ಕೆ ಹೋಗುತ್ತಿದ್ದಾರೆ ಇದನ್ನು ನಾನು ಖಂಡಿಸುತ್ತೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ರಾಜಹಂಸಗಡದಲ್ಲಿ ಶಿವಾಜಿ ಮಹಾರಾಜರ ಪುತ್ಥಳಿ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಪೂರ್ಣ ಪ್ರಮಾಣದ ಕಾಂಗ್ರೆಸ್ ಕಾರ್ಯಕ್ರಮವನ್ನಾಗಿ ಮಾಡುವುದಕ್ಕೆ ಹೋಗುತ್ತಿದ್ದಾರೆ, ನಾನು ಆ ರೀತಿ ಆಗುವುದಕ್ಕೆ ಬಿಡುವುದಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮತ್ತೋಮ್ಮೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್​ ವಿರುದ್ಧ ಸಮರ ಸಾರಿದ್ದಾರೆ.

2010 ರಿಂದಲೇ ರಾಜಹಂಸಗಡದಲ್ಲಿ ಅಭಿವೃದ್ಧಿ ನಡೆಯುತ್ತಿದೆ. ನಾನು ನೀರಾವರಿ ಸಚಿವನಾಗಿದ್ದಾಗ, ಸಿ.ಟಿ ರವಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾಗಿದ್ದರು. ಹಣ ಬಿಡುಗಡೆ ವಿಚಾರ ಕ್ಯಾಬಿನೆಟ್‌ನಲ್ಲೂ ಚರ್ಚೆ ಆಗಿತ್ತು. ಯಾವುದೇ ಪಕ್ಷ ಇರಲಿ ಅಭಿವೃದ್ಧಿ ಮುಖ್ಯ ಎಂದು ನಾನು ಅಂದಿನ ಸಭೆಯಲ್ಲಿ ಹೇಳಿದ್ದೆ. ಶಾಸಕರಿಗೆ ಸಿಗಬೇಕಾದ ಗೌರವ ಸಿಗಲೇಬೇಕು, ಅದಕ್ಕೆ ವಿರೋಧವಿಲ್ಲ. ಇದು ಸರ್ಕಾರಿ ಕಾರ್ಯಕ್ರಮವಾಗಿರುವುದರಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲೇ ಕಾರ್ಯಕ್ರಮ ಆಗಬೇಕು ಎಂದರು.

ಈಗಾಗಲೇ ಲಕ್ಷ್ಮಿ ಹೆಬ್ಬಾಳ್ಕರ್​ ಅವರು ಶಿವಾಜಿ ಮಹಾರಾಜರ ಪುತ್ಥಳಿ ಉದ್ಘಾಟನೆ ದಿನಾಂಕ ಘೋಷಣೆ ಮಾಡಿದ್ದಾರೆ, ಆದರೆ ಇಲ್ಲಿ ಸಂಪೂರ್ಣವಾಗಿ ಸರ್ಕಾರ ಶಿಷ್ಟಾಚಾರ ಉಲ್ಲಂಘಿಸಿ ಅವರು ಕಾರ್ಯಕ್ರಮ ಮಾಡುತ್ತಿದ್ದಾರೆ, ಇದಕ್ಕೆ ನಾವು ಅವಕಾಶ ನೀಡುವುದಿಲ್ಲ, ಶಿಷ್ಟಾಚಾರ ಪ್ರಕಾರ ಕಾರ್ಯಕ್ರಮ ಮಾಡುತ್ತಿದ್ದರೆ ನಮ್ಮ ವಿರೋಧವಿಲ್ಲ ಎಲ್ಲರೂ ಜೊತೆಯಾಗಿ ಶಿವಾಜಿ ಮಹಾರಾಜರ ಪುತ್ಥಳಿ ಉದ್ಘಾಟನೆ ಮಾಡಲಾಗುವುದು ಎಂದು ಸಹಮತಿ ಸೂಚಿಸಿದರು.

ನಾವು ಯಾವುದೇ ಶಿಷ್ಟಾಚಾರ ಉಲ್ಲಂಘಿಸಿ ಕಾರ್ಯಕ್ರಮ ಮಾಡುತ್ತಿಲ್ಲ ಎಂಎಲ್​ಸಿ ಚನ್ನರಾಜ್ ಹಟ್ಟಿಹೋಳಿ ಹೇಳಿಕೆಗೆ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆಸಿ , ಚನ್ನರಾಜ್ ಹಟ್ಟಿಹೋಳಿ ಬಾಗಿಲು ಕಾದು ಎಂಎಲ್​ಸಿ ಆಗಿರುವ ಹುಡುಗ, ಹೋರಾಟ ಮಾಡಿ, ಸಂಘಟನೆ ಮಾಡಿದ ಮನುಷ್ಯ ಅಲ್ಲ ಅವನ ಬಗ್ಗೆ ನಾನು ಹೆಚ್ಚಿಗೆ ಮಾತನಾಡುವುದಕ್ಕೆ ಹೋಗುದಿಲ್ಲ ಎಂದು ಹೇಳಿದರು.

ಚನ್ನರಾಜ್ ನನ್ನ ಲೇವಲ್ ಅಲ್ಲ: ಇನ್ನು ಈ ಬಗ್ಗೆ ನಿಮ್ಮನ್ನು ಬಹಿರಂಗ ಚರ್ಚೆಗೆ ಕರೆಯುತ್ತಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಯಿಸಿ, ನಾನು ಚನ್ನರಾಜ್​ ಜೊತೆಗೆ ಬಹಿರಂಗ ಚರ್ಚೆ ಮಾಡಲ್ಲ, ನಾನು ಡಿ.ಕೆ.ಶಿವಕುಮಾರ್ ಜೊತೆಗೆ ಚರ್ಚೆ ಮಾಡುತ್ತೇನೆ. ಚನ್ನರಾಜ್ ನನ್ನ ಲೇವಲ್ ಅಲ್ಲ, ಎಂಎಲ್‌ಸಿ ಆದರೂ ಕನಿಷ್ಠ ಜ್ಞಾನವೂ ಆತನಿಗೆ ಇಲ್ಲ. ಹಕ್ಕುಚ್ಯುತಿ ಮಂಡನೆ ಮಾಡಲು ಆತನಿಗೆ ಹಕ್ಕಿದೆ. ಹಾಗಾದರೆ ನನ್ನ ಪಕ್ಷ ಸಂಘಟನೆ ಮಾಡಲು ನನಗೆ ಹಕ್ಕಿಲವೇ, ಸರ್ಕಾರಿ ಕೆಲಸದಲ್ಲಿ ಶಿಷ್ಟಾಚಾರ ಪಾಲಿಸಿ ಕಾರ್ಯಕ್ರಮ ಮಾಡಲಿ ಎಂದರು.

ಶಿಷ್ಟಾಚಾರ ಉಲ್ಲಂಘನೆ ಪ್ರಶ್ನೆ ಉದ್ಭವಿಸುವುದಿಲ್ಲ: ರಾಜಹಂಸಗಡನಲ್ಲಿ ನಿರ್ಮಾಣ ವಾಗಿರುವ ಶಿವಾಜಿ ಮಹಾರಾಜರ ಮೂರ್ತಿ ಉದ್ಘಾಟನೆಯಲ್ಲಿ ಯಾವುದೇ ಶಿಷ್ಟಾಚಾರ ಉಲ್ಲಂಘನೆ ಆಗುವುದಿಲ್ಲ, ಯಾಕೆಂದರೆ ಬೆಳಗಾವಿ ಜಿಲ್ಲಾ ಆಡಳಿತದಿಂದ ಆಹ್ವಾನ ಪತ್ರಿಕೆ ಇನ್ನೂ ಬಿಡುಗಡೆಯಾಗಿಲ್ಲ. ಇದರಿಂದಾಗಿ ಈ ವಿಷಯದಲ್ಲಿ ಯಾವುದೇ ರೀತಿಯ ಶಿಷ್ಟಾಚಾರ ಉಲ್ಲಂಘನೆ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೋಳಿ ಹೇಳಿದ್ದರು.

ರಮೇಶ್ ಜಾರಕಿಹೊಳಿ ಹಾಗೂ ಬೆಳಗಾವಿ ಗ್ರಾಮೀಣ ಮಾಜಿ ಶಾಸಕ ಸಂಜಯ್​ ಪಾಟೀಲ, ಹಾಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಶಿವಾಜಿ ಮಹಾರಾಜರ ಮೂರ್ತಿ ಉದ್ಘಾಟನೆಯ ಸಮಾರಂಭದಲ್ಲಿ ಶಿಷ್ಟಾಚಾರ ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ಎಂಎಲ್​ಸಿ ಚನ್ನರಾಜ್ ಹಟ್ಟಿಹೊಳಿ ಪ್ರತಿಕ್ರಿಯಿಸಿ, ಇದು ಸರ್ಕಾರದಿಂದ 3.5 ಕೋಟಿ ರೂಪಾಯಿ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಂದ ವೈಯಕ್ತಿಕವಾಗಿ 1 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಶಿವಾಜಿ ಮಹಾರಾಜರ ಮೂರ್ತಿ ಉದ್ಘಾಟನೆಯಲ್ಲಿ ಯಾವುದೇ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ. ಬೆಳಗಾವಿ ಜಿಲ್ಲಾಡಳಿತದಿಂದ ಅಧಿಕೃತವಾಗಿ ಯಾವುದೇ ಆಹ್ವಾನ ಪತ್ರಿಕೆ ಬಿಡುಗಡೆಯಾಗಿಲ್ಲ ಎಂದು ಸ್ಪಷ್ಟನೆ ನೀಡಿದರು.

ಬೆಳಗಾವಿ ಗ್ರಾಮೀಣ ಶಾಸಕಿ ಹಕ್ಕು ಚ್ಯುತಿ ಆಗುತ್ತಿದೆ: ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಹಕ್ಕು ಚ್ಯುತಿ ಆಗುತ್ತಿದೆ, ವಿನಾಕಾರಣ ರಮೇಶ್ ಜಾರಕಿಹೊಳಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಗೋಕಾಕ್​ ಶಾಸಕರು ಜಿಲ್ಲಾ ಉಸ್ತುವಾರಿ ಸಚಿವರಲ್ಲ ಇವರು ಗೋಕಾಕ ಶಾಸಕರು ಬೆಳಗಾವಿ ಗ್ರಾಮೀಣ ಕ್ಷೇತ್ರ ಇವರಿಗೆ ಏನು ಸಂಬಂದ ಎಂದು ಪ್ರಶ್ನೆ ಮಾಡಿದರು. ಇವರಿಂದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹಕ್ಕು ಚ್ಯುತಿ ಆಗುತ್ತಿದೆ. ನಾವು ಇದರ ಕುರಿತು ಸಭಾಪತಿಯವರಿಗೆ ಪತ್ರ ಮುಖೇನ ದೂರು ಸಲ್ಲಿಸಲಾಗುವುದು ಎಂದು ರಮೇಶ್ ಜಾರಕಿಹೊಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಶಿವಾಜಿ ಮಹಾರಾಜರ ಮೂರ್ತಿ ಉದ್ಘಾಟನೆಗೆ ಎಲ್ಲರಿಗೂ ಸ್ವಾಗತ: ಸಮಸ್ತ ದೇಶವಾಸಿಗಳ ಅಭಿಮಾನದ ಸಂಕೇತ, ಶಿವಾಜಿ ಮಹಾರಾಜರು ಒಂದು ಸಮಾಜಕ್ಕೆ ಸೀಮಿತವಲ್ಲ, ಛತ್ರಪತಿ ಶಿವಾಜಿ ಮಹಾರಾಜರು ದೇಶಕ್ಕೆ ಛತ್ರಪತಿ ಮಹಾರಾಜ ಆಗಿದ್ದರಿಂದ ನಾವು ಪಕ್ಷಾತೀತವಾಗಿ ಎಲ್ಲರನ್ನೂ ಈ ಕಾರ್ಯಕ್ರಮಕ್ಕೆ ಆಹ್ವಾನ ನೀಡುತ್ತಿದ್ದೇವೆ. ಹೆಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದ ಸಮಯದಲ್ಲಿ 5.5 ಕೋಟಿ ಅನುದಾನ ನೀಡಿದ್ದರು. ಡಿ ಕೆ ಶಿವಕುಮಾರ್ ಅವರು ಕನ್ನಡ ಮತ್ತು ಸಂಸ್ಕೃತ ಇಲಾಖೆ ಸಚಿವರಾಗಿದ್ದಾಗ ಮೂರ್ತಿಗೆ 50 ಲಕ್ಷ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದರು. ಈ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವರು ಬಂದರು ಸ್ವಾಗತ ಮಾಡುತ್ತೇನೆ. ಇದು ಒಂದು ಐತಿಹಾಸಿಕ ಕಾರ್ಯಕ್ರಮ. ಎಲ್ಲರೂ ಜೊತೆಗೂಡಿ ಈ ಕಾರ್ಯ ಮಾಡುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ:ಮೋದಿ ಕೈಕೆಳಗೆ ಕೆಲಸ ಮಾಡಲು ಖುಷಿ ಇದೆ, ರಾಜ್ಯ ರಾಜಕಾರಣದತ್ತ ಬರೋಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Last Updated :Feb 18, 2023, 9:12 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.