ETV Bharat / state

ರಾಣಿ ಚೆನ್ನಮ್ಮ ವಿವಿ 9ನೇ ಘಟಿಕೋತ್ಸವ: ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ಪ್ರದಾನ

author img

By

Published : Mar 9, 2022, 5:32 PM IST

Updated : Mar 9, 2022, 5:56 PM IST

ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ 9ನೇ ಘಟಿಕೋತ್ಸವ
ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ 9ನೇ ಘಟಿಕೋತ್ಸವ

ಹಲಗಾ ಬಸ್ತವಾಡ ಗ್ರಾಮದಲ್ಲಿರುವ ಸುವರ್ಣಸೌಧದಲ್ಲಿ ನಡೆದ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ 9ನೇ ವಾರ್ಷಿಕ ಘಟಿಕೋತ್ಸವದಲ್ಲಿ, ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು.

ಬೆಳಗಾವಿ: ರಾಣಿಚೆನ್ನಮ್ಮ ವಿಶ್ವವಿದ್ಯಾಲಯದ 9ನೇ ಘಟಿಕೋತ್ಸವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಮೂವರು ಸಾಧಕರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು.


ಪದ್ಮಶ್ರೀ ಪುರಸ್ಕೃತ ಡಾ‌.ಎಚ್.‌ಸುದರ್ಶನ್ ಬಲ್ಲಾಳ್ ಅವರಿಗೆ ವೈದ್ಯಕೀಯ ಕ್ಷೇತ್ರದಲ್ಲಿ 'ಡಾಕ್ಟರ್ ಆರ್ ಸೈನ್ಸ್', ವಾದಿರಾಜ ಬಿ.ದೇಶಪಾಂಡೆಯವರಿಗೆ ಸಾಹಿತ್ಯ ಕ್ಷೇತ್ರದಲ್ಲಿ 'ಡಾಕ್ಟರ್ ಆರ್ ಲೆಟರ್ಸ್' ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು.

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಪಂಡಿತ್ ರಾಜೀವ ತಾರಾನಾಥ ಅವರಿಗೆ ಭಾರತೀಯ ಸಂಗೀತ ಕ್ಷೇತ್ರದಲ್ಲಿ 'ಡಾಕ್ಟರ್ ಆಪ್ ಲೆಟರ್ಸ್' ಪ್ರಕಟಿಸಲಾಗಿದ್ದು, ಅವರು ಉಪಸ್ಥಿತರಿರಲಿಲ್ಲ. ಇದೇ ವೇಳೆ 86 ಜನ ಸಂಶೋಧನಾ ವಿದ್ಯಾರ್ಥಿಗಳಿಗೆ ಪಿಎಚ್​​ಡಿ ಪದವಿ, ಸ್ನಾತಕೋತ್ತರ ಪದವಿ ಮುಗಿಸಿದ 2,739 ವಿದ್ಯಾರ್ಥಿಗಳು, 35,484 ಪದವಿಪೂರ್ವ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಹಾಗೂ 188 ಜನ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗಿದೆ.

ಘಟಿಕೋತ್ಸವದಲ್ಲಿ ಮಾತನಾಡಿದ ನವದೆಹಲಿಯ ಅಂತರಾಷ್ಟ್ರೀಯ ಜೆನೆಟಿಕ್ ಎಂಜಿನಿಯರಿಂಗ್ ಮತ್ತು ಬಯೋಟೆಕ್ನಾಲಜಿ ಕೇಂದ್ರದ ನಿರ್ದೇಶಕ ಮತ್ತು ನ್ಯಾಕ್ ಕಾರ್ಯಕಾರಿ ಸಮಿತಿಯ ಅಧ್ಯಕ್ಷ, ಪ್ರೊ.ವಿ.ಎಸ್.ಚೌಹಾನ್, ಜ್ಞಾನವನ್ನು ಸೃಷ್ಟಿಸುವುದರ ಜತೆಗೆ ಮನುಕುಲದ ಭವಿಷ್ಯದ ಸವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿ ಯುವ ಸಮುದಾಯವನ್ನು ಅಣಿಗೊಳಿಸುವುದು ಉನ್ನತ ಶಿಕ್ಷಣದ ಉದ್ದೇಶ ಎಂದರು.

ಭಾರತದ ಉನ್ನತ ಶೈಕ್ಷಣಿಕ ವ್ಯವಸ್ಥೆಯು ಜಗತ್ತಿನ ಎರಡನೇ ಸ್ಥಾನದಲ್ಲಿದ್ದರೂ, ಸಂಕೀರ್ಣಾವಸ್ಥೆಯಲ್ಲಿದೆ. ಪ್ರಸ್ತುತ ದೇಶದಲ್ಲಿ 960ಕ್ಕೂ ಅಧಿಕ ವಿಶ್ವವಿದ್ಯಾಲಯ, 45 ಸಾವಿರ‌ ಕಾಲೇಜುಗಳಲ್ಲಿ 3.7 ಕೋಟಿ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಪಡೆಯುತ್ತಿದ್ದಾರೆ. ಬ್ರಿಟಿಷರು ಭಾರತ ಬಿಟ್ಟು ತೆರಳಿದ ಈ 75 ವರ್ಷಗಳಲ್ಲಿ ಶೈಕ್ಷಣಿಕವಾಗಿ ದೇಶ ಅಗಾಧ ಸಾಧನೆಗೈದಿದೆ. ಪ್ರಜಾಪ್ರಭುತ್ವದ ಬೇರುಗಳನ್ನು ಗಟ್ಟಿಗೊಳಿಸುವ ಕೆಲಸವನ್ನು ಶಿಕ್ಷಣ ಮಾಡಿದೆ ಎಂದರು.

Last Updated :Mar 9, 2022, 5:56 PM IST

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.