ETV Bharat / state

ವ್ಯಾಸಂಗ, ಉದ್ಯೋಗ ನಿಮಿತ್ತ ವಿದೇಶಕ್ಕೆ ತೆರಳುವವರಿಗೆ ಲಸಿಕೆ

author img

By

Published : Jun 6, 2021, 6:50 AM IST

MG Hiremath
ಎಂ.ಜಿ.ಹಿರೇಮಠ

ವ್ಯಾಸಂಗ ಹಾಗೂ ಉದ್ಯೋಗವನ್ನರಸಿ ವಿದೇಶಕ್ಕೆ ತೆರಳುವವರನ್ನು ಆದ್ಯತಾ ಗುಂಪಿನಲ್ಲಿ ಸೇರಿಸಿ ಲಸಿಕೆ ನೀಡಲಾಗುವುದು ಎಂದು ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ತಿಳಿಸಿದ್ದಾರೆ.

ಬೆಳಗಾವಿ: ವ್ಯಾಸಂಗ ಅಥವಾ ಉದ್ಯೋಗ ನಿಮಿತ್ತ ವಿದೇಶಕ್ಕೆ ತೆರಳುವ 18 ರಿಂದ 45 ವರ್ಷದೊಳಗಿನವರಿಗೆ ಆದ್ಯತೆಯ ಮೇರೆಗೆ ಕೋವಿಡ್‌ ಲಸಿಕೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.

ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರು ಹೊರಡಿಸಿರುವ ಆದೇಶದಂತೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಲಸಿಕೆ ಹಾಕಿಸಿಕೊಳ್ಳಬೇಕೇ? ಹಾಗಿದ್ದರೆ, ನಿಮಗಿದು ತಿಳಿದಿರಲಿ..

1. ಜಿಲ್ಲೆಯ 18 ರಿಂದ 45 ವರ್ಷದೊಳಗಿನವರು ವ್ಯಾಸಂಗ ಅಥವಾ ಉದ್ಯೋಗದ ನಿಮಿತ್ತ ವಿದೇಶಕ್ಕೆ ತೆರಳುತ್ತಿದ್ದಲ್ಲಿ, ಆ ಬಗ್ಗೆ ಸೂಕ್ತ ದಾಖಲಾತಿಗಳೊಂದಿಗೆ ಆಯಾ ತಾಲೂಕಿನ, ತಾಲೂಕು ಆರೋಗ್ಯಾಧಿಕಾರಿಗಳ ಮೇಲ್​ರುಜುವನ್ನು ಅನುಬಂಧ-3 ರಲ್ಲಿ ಪಡೆದುಕೊಳ್ಳಬೇಕು.

2. ಆಯಾ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಲಸಿಕೆಯ ಲಭ್ಯತೆಗೆ ಅನುಗುಣವಾಗಿ ಲಸಿಕೆಯನ್ನು ಪಡೆದುಕೊಳ್ಳಬೇಕಿದೆ.

ಇದನ್ನೂ ಓದಿ: ರೋಹಿಣಿ ಸಿಂಧೂರಿ, ಶಿಲ್ಪಾ ನಾಗ್ ಎತ್ತಂಗಡಿ: IAS ಮಹಿಳಾಮಣಿಗಳ ಜಗಳಕ್ಕೆ ಈ ಶಿಕ್ಷೆ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.