ETV Bharat / state

ಬಳ್ಳಾರಿಯಲ್ಲಿ ಕೊರೊನಾ ಹೆಚ್ಚಳ: ಸಚಿವ ಆನಂದ್​ ಸಿಂಗ್​ ಕಳವಳ

author img

By

Published : Apr 25, 2021, 11:39 AM IST

ಬಳ್ಳಾರಿಯಲ್ಲಿ ದಿನೇ ದಿನೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಆನಂದ್​ ಸಿಂಗ್​ ಸೋಂಕು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Bellary
ಬಳ್ಳಾರಿಯಲ್ಲಿ ಕೊರೊನಾ ಹೆಚ್ಚಳ

ಬಳ್ಳಾರಿ: ಮಹಾನಗರ ಪಾಲಿಕೆ ಚುನಾವಣೆ ಪ್ರಚಾರ, ಜನರ ಓಡಾಟ ಸೇರಿದಂತೆ ವಿವಿಧ ಕಾರಣಗಳಿಂದ ಬಳ್ಳಾರಿ ನಗರದಲ್ಲಿ ಹೆಚ್ಚಿನ ಕೊರೊನಾ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಕಳವಳ ವ್ಯಕ್ತಪಡಿಸಿದ ಜಿಲ್ಲಾ ಉಸ್ತುವಾರಿ ಸಚಿವ ಆನಂದ್​ ಸಿಂಗ್,​ ಸೋಂಕು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಕೋವಿಡ್​ ಸ್ಥಿತಿಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸದ್ಯ 4522 ಸಕ್ರಿಯ ಪ್ರಕರಣಗಳಿವೆ. ಅವುಗಳಲ್ಲಿ ಬಳ್ಳಾರಿಯಲ್ಲಿ 2178 ಪ್ರಕರಣಗಳು ಇವೆ. ಕೊರೊನಾ 1ನೇ ಅಲೆಯನ್ನು ನಿಭಾಯಿಸಿದಂತೆ 2ನೇ ಅಲೆಯಲ್ಲೂ ಕಾರ್ಯನಿರ್ವಹಿಸಿ. ಪ್ರತೀ ತಾಲೂಕುಗಳಲ್ಲಿ ಆಕ್ಸಿಜನ್​ ವ್ಯವಸ್ಥೆಯ ಬಗ್ಗೆ ವರದಿ ತರಿಸಿಕೊಳ್ಳಿ. ಆ ಪ್ರಕಾರ ಕ್ರಮ ವಹಿಸಿ. ಸೋಂಕಿತರ ಚಿಕಿತ್ಸೆಗೆ ಆಕ್ಸಿಜನ್​ ಕೊರತೆಯಾಗದಂತೆ ಕ್ರಮ ವಹಿಸಿ ಎಂದರು.

ಇದೇ ವೇಳೆ ಜಿಲ್ಲಾಧಿಕಾರಿಯಿಂದ ಮಾಹಿತಿ ಪಡೆದರು. ಜಿಲ್ಲೆಯ ಹಳೇ ಡೆಂಟಲ್​ ಕಾಲೇಜು, ನ್ಯೂ ಡೆಂಟಲ್​ ಕಾಲೇಜು, ಜಿಲ್ಲಾಸ್ಪತ್ರೆ ಸೇರಿದಂತೆ ಅನೇಕ ಭಾಗಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ 1128 ಆಕ್ಸಿಜನ್ ಬೆಡ್‍ಗಳಿದ್ದು, ಅವುಗಳಲ್ಲಿ 700 ಆಕ್ಸಿಜನ್ ಬೆಡ್‍ಗಳು ಬಳ್ಳಾರಿ ನಗರದಲ್ಲಿವೆ. ಇವುಗಳಲ್ಲಿ 210 ಮಾತ್ರ ಸದ್ಯ ಖಾಲಿ ಇವೆ. ಉಳಿದ ತಾಲೂಕು ಕೇಂದ್ರಗಳಲ್ಲಿ ಯಾವುದೇ ರೀತಿಯ ಆಕ್ಸಿಜನ್ ಕೊರತೆ ಸದ್ಯಕ್ಕೆ ಕಂಡುಬಂದಿಲ್ಲ ಎಂದರು.

ಹೋಂ ಐಸೋಲೇಷನ್‍ನಲ್ಲಿರುವವರ ಮೇಲೆ ತೀವ್ರ ನಿಗಾ ವಹಿಸಲಾಗಿದೆ. ಸದ್ಯಕ್ಕೆ ಆಕ್ಸಿಜನ್ ಸಮಸ್ಯೆ ಉದ್ಭವಿಸಿಲ್ಲ. ಮುಂದೆ ಉದ್ಭವಿಸುವ ಸಾಧ್ಯತೆ ಇದ್ದು, ಇದಕ್ಕೆ ಸಂಬಂಧಿಸಿದಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.