ವಾಹನ ಸವಾರರಿಂದ ಹಣ ವಸೂಲಿ: ಆರ್​ಟಿಒ ಚೆಕ್ ​ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ

author img

By

Published : Sep 30, 2022, 11:19 AM IST

Updated : Sep 30, 2022, 2:12 PM IST

lokayukta raid

ತಪಾಸಣೆ ಮಾಡೋ ನೆಪದಲ್ಲಿ ವಾಹನ ಚಾಲಕರಿಂದ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದ ಹಿನ್ನೆಲೆ ಬಳ್ಳಾರಿಯ ಗೋಡೆಹಾಳ್ ಬಳಿ ಇರೋ ಆರ್​ಟಿಒ ಚೆಕ್ ​ಪೋಸ್ಟ್​ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ, ಪರಿಶೀಲನೆ ಮುಂದುವರೆಸಿದ್ದಾರೆ.

ಬಳ್ಳಾರಿ: ವಾಹನ ಸವಾರರಿಂದ ಹಣ ವಸೂಲಿ ಮಾಡುತ್ತಿರುವ ಕುರಿತು ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಆರ್​ಟಿಒ ಚೆಕ್ ​ಪೋಸ್ಟ್​ಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದೆ.

ಬಳ್ಳಾರಿಯಿಂದ 12 ಕಿ.ಮೀ ದೂರದಲ್ಲಿರುವ ಎನ್​ಹೆಚ್ ​63‌ ರಸ್ತೆಯ ಗೋಡೆಹಾಳ್ ಬಳಿ ಇರೋ ಆರ್​ಟಿಒ ಚೆಕ್ ಪೋಸ್ಟ್ ಮೇಲೆ ಬೆಳಗಿನ ಜಾವ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಎಸ್​ಪಿ ಪುರುಷೋತ್ತಮ ಮತ್ತು ಡಿವೈಎಸ್​ಪಿ ರಾಮರಾವ್ ನೇತೃತ್ವದ ತಂಡ ದಾಳಿ ಮಾಡಿ, ಎರಡೂವರೆ ತಾಸುಗಳ ಕಾಲ ದಾಖಲೆಗಳ ಪರಿಶೀಲನೆ ಮಾಡಿದೆ.

RTO ಚೆಕ್ ​ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ

ಇನ್ನು ಲೋಕಾಯುಕ್ತ ಡಿಎಸ್​ಪಿ ಅಯ್ಯನಗೌಡ ನೇತೃತ್ವದಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ಹೊರವಲಯದ ವಾಹನ ತಪಾಸಣಾ ಕೇಂದ್ರದ ಮೇಲೆ ದಾಳಿ ನಡೆಸಲಾಗಿದ್ದು, ಈ ಸಂದರ್ಭದಲ್ಲಿ ಹಣ ಮತ್ತು ದಾಖಲೆ ವಶಕ್ಕೆ ಪಡೆಯಲಾಗಿದೆ ಎಂದು ಹೇಳಲಾಗುತ್ತಿದೆ.

ಆಂಧ್ರಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 63 ರಲ್ಲಿರುವ ಚೆಕ್‌ಪೋಸ್ಟ್‌ನಲ್ಲಿ ಗಡಿ ಭಾಗದಿಂದ ನಿತ್ಯ ನೂರಾರು ವಾಹನಗಳು ಬಳ್ಳಾರಿಗೆ ಎಂಟ್ರಿ ಕೊಡುತ್ತವೆ. ದಾಖಲೆಗಳನ್ನು ಸರಿಯಾಗಿ ಚೆಕ್‌ ಮಾಡುತ್ತಿಲ್ಲ, ತಪಾಸಣೆ ನೆಪದಲ್ಲಿ ಹಣ ಪಡೆಯುತ್ತಾರೆಂಬ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ದಾಳಿ ಮಾಡಲಾಗಿದೆ.

ಇದನ್ನೂ ಓದಿ: ಪ್ರಯಾಣಿಕರಿಂದ ದುಪ್ಪಟ್ಟು ಟಿಕೆಟ್ ದರ ವಸೂಲಿ ​ಮಾಡುತ್ತಿರುವ ಖಾಸಗಿ ಬಸ್​ಗಳು : ಆರ್​​​​ಟಿಒ ದಾಳಿ

Last Updated :Sep 30, 2022, 2:12 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.