ETV Bharat / state

ಕೊರೊನಾ ಬಗ್ಗೆ ಮನೆ ಮನೆಗೆ ತೆರಳಿ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಂದ ಸಮೀಕ್ಷೆ..

author img

By

Published : Apr 2, 2020, 2:35 PM IST

Narsery workers are visiting very house and testing the health condition
ಅಂಗನವಾಡಿ ಕಾರ್ಯಕರ್ತರಿಂದ ಮನೆ ಮನೆಗೆ ತೆರಳಿ ಆರೋಗ್ಯ ತಪಾಷಣೆಯ ಸಮೀಕ್ಷೆ

ಕೆಮ್ಮು, ನೆಗಡಿ, ಶೀತ ಹಾಗೂ ಇನ್ನಿತರ ಕಾಯಿಲೆಗಳಿದ್ದರೆ ತಕ್ಷಣವೇ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ತಿಳಿಸುತ್ತಿದ್ದಾರೆ.

ಹೊಸಪೇಟೆ : ನಗರದಲ್ಲಿ ಕೋವಿಡ್-19‌ ಪ್ರಕರಣ ಖಚಿತವಾದ ಬಳಿಕ ಅಧಿಕಾರಿಗಳು ತಮ್ಮ ಕರ್ತವ್ಯದಲ್ಲಿ ನಿರತರಾಗಿದ್ದಾರೆ. ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಕೂಡ ಮನೆ ಮನೆಗೆ ಭೇಟಿ ನೀಡಿ ಸಾರ್ವಜನಿಕರ ಆರೋಗ್ಯದ ಕುರಿತು ವಿಚಾರಿಸಿ ಮಾಹಿತಿ ಪಡೆಯುತ್ತಿದ್ದಾರೆ.

ಇಂದು ನಗರದ ಎಲ್ಲ ನಿವಾಸಿಗಳ ಮನೆ ಮನೆಗೆ ಖುದ್ದು ತಾವೇ ಭೇಟಿ ನೀಡಿ ಆರೋಗ್ಯ ಸ್ಥಿತಿಯ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ಜೊತೆಗೆ ಕೊರೊನಾ ವೈರಸ್ ಹರಡುವಿಕೆ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ. ಕೆಮ್ಮು, ನೆಗಡಿ, ಶೀತ ಹಾಗೂ ಇನ್ನಿತರ ಕಾಯಿಲೆಗಳಿದ್ದರೆ ತಕ್ಷಣವೇ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ತಿಳಿಸುತ್ತಿದ್ದಾರೆ.

ನಗರದ ಎಸ್‌ ಆರ್‌ ಕಾಲೋನಿಯ ಒಂದೇ ಕುಟುಂಬದ 3 ಸದಸ್ಯರಿಗೆ ಕೊರೊನಾ ಸೋಂಕು ತಗುಲಿರುವುದರಿಂದ ಆರೋಗ್ಯ, ಪೊಲೀಸ್ ಇಲಾಖೆ ಸಿಬ್ಬಂದಿ ಹೆಚ್ಚು ಕಾಳಜಿಯಿಂದ ಕೆಲಸ ಮಾಡುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.