ETV Bharat / state

ಬಿಸಿಯೂಟದಲ್ಲಿ ಹುಳುಗಳು ಪತ್ತೆ: ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡ ಪೋಷಕರು

author img

By

Published : May 27, 2022, 11:05 PM IST

ಶಾಲೆಯ ಮಕ್ಕಳಿಗೆ ಬಿಸಿಯೂಟದಲ್ಲಿ ಹುಳು ಹಿಡಿದ ದವಸ ಧಾನ್ಯಗಳನ್ನು ಬಳಸಿ ಅನ್ನ, ಸಾಂಬಾರು ತಯಾರಿಸಿ ಬಡಿಸಿರುವ ಘಟನೆ ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿಯ ದೇವಲಾಪುರ ಗ್ರಾಮದಲ್ಲಿ ನಡೆದಿದೆ.

ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡ ಪೋಷಕರು
ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡ ಪೋಷಕರು

ವಿಜಯನಗರ: ಅಕ್ಷರ ಬಿಸಿಯೂಟ ಸೇವಿಸುತ್ತಿದ್ದ ಮಕ್ಕಳ ತಟ್ಟೆಯಲ್ಲಿ ಹುಳುಗಳು ಕಂಡು ಬಂದಿದ್ದರಿಂದ ಪಾಲಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಜಿಲ್ಲೆಯ ಮರಿಯಮ್ಮನಹಳ್ಳಿಯ ದೇವಲಾಪುರ ಗ್ರಾಮದ ಶಾಲೆಯಲ್ಲಿ ನಡೆದಿದೆ.

ಶಾಲೆಯ ಮಕ್ಕಳಿಗೆ ಬಿಸಿಯೂಟದಲ್ಲಿ ಹುಳು ಹಿಡಿದ ದವಸ ಧಾನ್ಯಗಳನ್ನು ಬಳಸಿ ಅನ್ನ, ಸಾಂಬಾರು ತಯಾರಿಸಿ ಬಡಿಸಿದ್ದಾರೆ. ಇದರಲ್ಲಿ ಬಾಲಹುಳು, ನುಸಿಹುಳುಗಳು ಕಂಡು ಬಂದಿವೆ. ಇದನ್ನು ಕಂಡ ಮಕ್ಕಳು ಕೂಡಲೇ ಪಾಲಕರಿಗೆ ವಿಷಯ ತಿಳಿಸಿದ್ದಾರೆ. ಇದರಿಂದ ಪಾಲಕರು ಶಾಲೆಗೆ ಭೇಟಿ ನೀಡಿ ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಾವು ಊಟ ಮಾಡಿದ್ದೇವೆ. ಮಕ್ಕಳು ಯಾವ ಲೆಕ್ಕ ಎಂದು ಸಹಶಿಕ್ಷಕರೊಬ್ಬರು ಪಾಲಕರ ಎದುರೇ ಮಾತಾಡಿದ್ದರಿಂದ ಪರಿಸ್ಥಿತಿ ಕೆಲಕಾಲ ವಿಕೋಪಕ್ಕೆ ತಿರುಗಿದೆ.

ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡ ಪೋಷಕರು

ಮಕ್ಕಳು ಎಲ್ಲರಿಗೂ ಮಕ್ಕಳೇ. ಅವರ ಆರೋಗ್ಯ ಕಾಪಾಡಬೇಕಾದದ್ದು ಶಿಕ್ಷಕರ ಜವಾಬ್ದಾರಿ. ಈ ರೀತಿಯಾದಂತಹ ಉದಾಸೀನದ ಉತ್ತರವನ್ನು ನೀಡುತ್ತಾ ಅವರ ಜೀವದ ಜೊತೆ ಚೆಲ್ಲಾಟ ಆಡಬಾರದು. ಅಧಿಕಾರಿಗಳು ತಪ್ಪಿತಸ್ತರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಇಂತಹ ಘಟನೆ ಜರುಗದಂತೆ ಎಚ್ಚರವಹಿಸಬೇಕು ಎಂದು ಪೋಷಕರು ಒತ್ತಾಯಿಸಿದರು.

ಓದಿ: ಜಾತಿ ಸಮಾವೇಶ ವಿಚಾರ: ಸಿದ್ದರಾಮಯ್ಯ, ಈಶ್ವರಪ್ಪ ಬಣಗಳ ನಡುವೆ ಭಾರಿ ಕಿತ್ತಾಟ

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.