ETV Bharat / state

ರಾಜ್ಯ ವಿಧಾನಸಭಾ ಚುನಾವಣೆ: ಇವಿಎಂ, ವಿವಿ ಪ್ಯಾಟ್​ನೊಂದಿಗೆ ಮತಗಟ್ಟೆಗೆ ತೆರಳಿದ ಸಿಬ್ಬಂದಿ

author img

By

Published : May 9, 2023, 5:23 PM IST

Updated : May 9, 2023, 6:15 PM IST

ವಿವಿ ಪ್ಯಾಟ್​ನೊಂದಿಗೆ ಮತಗಟ್ಟೆಗೆ ತೆರಳಿದ ಸಿಬ್ಬಂದಿ
ವಿವಿ ಪ್ಯಾಟ್​ನೊಂದಿಗೆ ಮತಗಟ್ಟೆಗೆ ತೆರಳಿದ ಸಿಬ್ಬಂದಿ

ರಾಯಚೂರು ನಗರ ಹಾಗೂ ಗ್ರಾಮೀಣ ವಿಧಾನಸಭಾ ಕ್ಷೇತ್ರಗಳಿಗೆ ನಗರದ ಎಸ್​ಆರ್​ಪಿಎಸ್​ ಹಾಗೂ ಎಲ್​ವಿಡಿ ಕಾಲೇಜಿನಲ್ಲಿ ಮಸ್ಟರಿಂಗ್​ ಕಾರ್ಯ ನಡೆಯುತ್ತಿದೆ.

ಜಿಲ್ಲಾ ಚುನಾವಣಾಧಿಕಾರಿ ಚಂದ್ರಶೇಖರ್ ನಾಯಕ

ರಾಯಚೂರು : ಜಿಲ್ಲೆಯಲ್ಲಿ ಏಳು ವಿಧಾನಸಭಾ ಕ್ಷೇತ್ರಗಳಿದ್ದು, ಏಳು ಕ್ಷೇತ್ರಗಳಲ್ಲಿ ಆಯಾ ತಾಲೂಕು ಕೇಂದ್ರಗಳಿಗೆ ಮತದಾನ ಪ್ರಕ್ರಿಯೆಗೆ ನಿಯೋಜಿಸಿರುವ ಸಿಬ್ಬಂದಿ ಮತದಾನ ಪ್ರಕ್ರಿಯೆಗೆ ಬೇಕಾಗಿರುವ ಇವಿಎಂ ಮಿಷನ್, ವಿವಿ ಪ್ಯಾಟ್ ಹಾಗೂ ಶಾಸನ ಬದ್ಧ ಹಾಗೂ ಶಾಸನ ಬದ್ಧವಲ್ಲದ ಪೇಪರ್​ಗಳೊಂದಿಗೆ ತೆರಳುತ್ತಿದ್ದಾರೆ.

ಇತ್ತ ರಾಯಚೂರು ನಗರ ಹಾಗೂ ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರಗಳಿಗೆ ರಾಯಚೂರು ನಗರದ ಎಸ್ ಆರ್ ಪಿಎಸ್ ಹಾಗೂ ಎಲ್​ವಿಡಿ ಕಾಲೇಜಿನಲ್ಲಿ ಮಾಸ್ಟರಿಂಗ್ ಕಾರ್ಯ ನಡೆಯುತ್ತಿದೆ. ಚುನಾವಣೆ ಕರ್ತವ್ಯಕ್ಕೆ ನಿಯೋಜಿಸಿದ್ದ ಸಿಬ್ಬಂದಿ, ಅಧಿಕಾರಿಗಳು ಮಾಸ್ಟರಿಂಗ್ ಕೇಂದ್ರಕ್ಕೆ ಆಗಮಿಸಿ, ಚುನಾವಣೆಯ ಪ್ರಕ್ರಿಯೆಗೆ ಬೇಕಾಗಿರುವ ಇವಿಎಂ, ವಿವಿ ಪ್ಯಾಟ್, ದಾಖಲೆಗಳನ್ನು ಪಡೆದುಕೊಂಡು ಅವುಗಳನ್ನು ಕೇಂದ್ರದಲ್ಲಿ ಪರಿಶೀಲನೆ ಮಾಡಿಕೊಂಡು ಕರ್ತವ್ಯಕ್ಕೆ ನಿಯೋಜಿಸಿದ್ದ ಸ್ಥಳಕ್ಕೆ ತೆರಳುತ್ತಿದ್ದಾರೆ.

ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಚಂದ್ರಶೇಖರ್ ನಾಯಕ, ಏಳು ಮತಕ್ಷೇತ್ರಗಳಲ್ಲಿ ಆಯಾ ತಾಲೂಕು ಕೇಂದ್ರಗಳಲ್ಲಿ ಮಾಸ್ಟರಿಂಗ್ ಕಾರ್ಯ ನಡೆಯುತ್ತಿದೆ. ಒಟ್ಟು 8900 ಪೋಲಿಂಗ್ ಸಿಬ್ಬಂದಿಗೆ ಅವರನ್ನು ಪೋಲಿಂಗ್ ಪಾರ್ಟಿಗಳನ್ನು ಮಾಡಲಾಗಿದೆ. ಅವುಗಳನ್ನು ತೆಗೆದುಕೊಂಡು ಕರ್ತವ್ಯಕ್ಕೆ ನಿಯೋಜಿಸಲಾಗಿದ್ದು, ಹೆಚ್ಚುವರಿ ಸಿಬ್ಬಂದಿಯನ್ನು ಕಾಯ್ದಿರಿಸಿಕೊಳ್ಳಲಾಗಿದೆ.

ಚುನಾವಣೆಗೆ ನಿಯೋಜಿಸಿದ ಅಭ್ಯರ್ಥಿಗಳನ್ನು ಕರ್ತವ್ಯವನ್ನು ನಿಯೋಜನೆ ಮಾಡಲು ಆಗದವರನ್ನು ಚುನಾವಣೆ ಕರ್ತವ್ಯಕ್ಕೆ ನಿಯೋಜನೆ ಮಾಡಿಲ್ಲ. ಒಂದು ವೇಳೆ ಏನಾದರೂ ಮತದಾನ ಪ್ರಕ್ರಿಯೆ ಸಂದರ್ಭದಲ್ಲಿ ಸಿಬ್ಬಂದಿಗೆ ಅನಾರೋಗ್ಯ ಎದುರಾದರೆ, ಹೆಚ್ಚುವರಿ ಸಿಬ್ಬಂದಿ ನಿಯೋಜನೆ ಮಾಡಿಕೊಳ್ಳಲಾಗಿದೆ. ಮತದಾನ ಪ್ರಕ್ರಿಯೆಯನ್ನು ಶಾಂತಿ ಸುವ್ಯವಸ್ಥೆಯಿಂದ ನಡೆಸಲು ಸಕಲ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಎಂ ಸುಂದರೇಶಬಾಬು

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮಾಹಿತಿಯಿದೆ. ಈ ಹಿನ್ನಲೆ ಅಗತ್ಯ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದ್ದು, ವಾಟರ್ ಪ್ರೂಫ್​ ಟೆಂಟ್ ವ್ಯವಸ್ಥೆಯ ಕಾರ್ಯ ನಡೆಸಲಾಗಿದೆ. ಅಲ್ಲದೇ ಮಳೆ ಬಂದರೆ ಎದುರಾಗುವ ಮತಗಟ್ಟೆ ಕೇಂದ್ರಗಳನ್ನು ಸಹ ಗುರುತಿಸಿ ಅಲ್ಲಿಯ ಯಾವುದೇ ರೀತಿಯಲ್ಲಿ ಅಡತಡೆ ಆಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಬಳ್ಳಾರಿಯಲ್ಲಿ ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ಸಕಲ ಸಿದ್ದತೆ: ನಾಳೆ ಬುಧವಾರ ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಗಾಗಿ ಜಿಲ್ಲಾಡಳಿತ ಎಲ್ಲಾ ರೀತಿಯ ಸಕಲ ಸಿದ್ದತೆಗಳನ್ನ ಮಾಡಿಕೊಳ್ಳುತ್ತಿದೆ. ಮತದಾನದ ಪ್ರಕ್ರಿಯೆಗೆ ಮಸ್ಟರಿಂಗ್ ಕಾರ್ಯ ಭರದಿಂದ ಸಾಗಿದ್ದು, ಇವಿಎಂ ಮಷಿನ್​​ಗಳನ್ನು ಚುನಾವಣೆಗೆ ನಿಯೋಜಿಸಿದ ಸಿಬ್ಬಂದಿ ಬಸ್​ಗಳ ಮೂಲಕ ಮತದಾನದ ಕೇಂದ್ರಗಳಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ.

ಜಿಲ್ಲೆಯಲ್ಲಿ ಗ್ರಾಮೀಣ ವ್ಯಾಪ್ತಿಯಲ್ಲಿ 676 ಮತಗಟ್ಟೆ ಕೇಂದ್ರ, ನಗರ, ಪಟ್ಟಣ ಪ್ರದೇಶದಲ್ಲಿ 515 ಮತಗಟ್ಟೆ ಕೇಂದ್ರಗಳು ಸೇರಿ ಒಟ್ಟು 1,222 ಮತಗಟ್ಟೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಕಂಪ್ಲಿ-240, ಸಿರಗುಪ್ಪ-227, ಬಳ್ಳಾರಿ ಗ್ರಾಮೀಣ-242, ಬಳ್ಳಾರಿ ನಗರ-262 ಹಾಗೂ ಸಂಡೂರು ಕ್ಷೇತ್ರದಲ್ಲಿ 251 ಮತಗಟ್ಟೆಗಳಿವೆ. ಜಿಲ್ಲೆಯ 5 ವಿಧಾನಸಭಾ ಮತಕ್ಷೇತ್ರಗಳ ವ್ಯಾಪ್ತಿಯಲ್ಲಿ ಒಟ್ಟು 295 ಸೂಕ್ಷ್ಮ ಹಾಗೂ 73 ಮತಗಟ್ಟೆಗಳನ್ನು ಅತಿಸೂಕ್ಷ್ಮ ಎಂದು ಗುರುತಿಸಲಾಗಿದೆ.

ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ 1,222 ಮತಗಟ್ಟೆಗಳಿಗೆ 2445 (ಬ್ಯಾಲೆಟ್ ಯುನಿಟ್), 1716 (ಕಂಟ್ರೋಲ್ ಯುನಿಟ್) ಮತ್ತು 1857 (ವಿ.ವಿ.ಪ್ಯಾಟ್)ಗಳನ್ನು ಬಳಸಲಾಗುತ್ತಿದೆ. 5,815 ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ. ಜಿಲ್ಲೆಯಲ್ಲಿ 5,67,319 ಪುರುಷ ಮತದಾರರು ಮತ್ತು 5,84,920 ಮಹಿಳಾ ಮತದಾರರು, 172 ತೃತೀಯ ಲಿಂಗಿ ಮತದಾರರು ಸೇರಿ ಒಟ್ಟು 11,52,411 ಮತದಾರರು ಮತದಾನದ ಹಕ್ಕು ಚಲಾಯಿಸಲಿದ್ದಾರೆ. ಇನ್ನು ಎಲ್ಲಾ ಮತಗಟ್ಟೆಗಳಲ್ಲಿ ಫ್ಯಾನ್, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲದ ವ್ಯವಸ್ಥೆ ಕಲ್ಪಿಸಲಾಗಿದೆ.

ಕೊಪ್ಪಳದಲ್ಲಿ ಶಾಂತಿಯುತ ಮತದಾನಕ್ಕೆ ಅಗತ್ಯ ಸಿದ್ಧತೆ: ಮೇ 10ರಂದು ಮತದಾನ ಮತ್ತು ಮೇ 13ರಂದು ಮತ ಎಣಿಕೆ ಸುಗಮವಾಗಿ ಸಾಗಿ ವಿಧಾನಸಭಾ ಚುನಾವಣೆ-2023ರ ಯಶಸ್ವಿಗೆ ಸಹಕರಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಎಂ ಸುಂದರೇಶಬಾಬು ಕೊಪ್ಪಳ ಜಿಲ್ಲೆಯ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಒಟ್ಟು 11,36,838 ಮತದಾರರು ಮತದಾನಕ್ಕೆ ಅರ್ಹ: ಮೇ 8ರಂದು ಜಿಲ್ಲಾಡಳಿತ ಭವನದಲ್ಲಿನ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕೊಪ್ಪಳ ಜಿಲ್ಲೆಯಲ್ಲಿ ಈ ವಿಧಾನಸಭಾ ಚುನಾವಣೆಗೆ 5,66,381 ಪುರುಷರು ಹಾಗೂ 5,70,407 ಮಹಿಳೆಯರು ಮತ್ತು ಇತರೆ 50 ಸೇರಿ ಒಟ್ಟು 11,36,838 ಮತದಾರರು ಮತದಾನಕ್ಕೆ ಅರ್ಹರಿದ್ದಾರೆ. ಜಿಲ್ಲೆಯ ಐದು ಕ್ಷೇತ್ರಗಳಲ್ಲಿನ ಒಟ್ಟು 11,36,838 ಮತದಾರರ ಪೈಕಿ 30,511 ಯುವ ಮತದಾರರು, 14,145 ವಿಕಲಚೇತನರು, 80 ವರ್ಷ ಮೇಲ್ಪಟ್ಟ 18,309 ಮತ್ತು 536 ಸೇವಾ ಮತದಾರರಿದ್ದಾರೆ.

ಅಂದ ಮತದಾರರಿಗೆ ಬ್ರೈಲ್ ಮತಪತ್ರ: ಜಿಲ್ಲೆಯಲ್ಲಿ 28 ಮಾದರಿ ಮತಗಟ್ಟೆಗಳು, 12 ಸಖಿ ಮತಗಟ್ಟೆಗಳು, ತಲಾ 5 ವಿಶೇಷಚೇತನರ ಮತಗಟ್ಟೆಗಳು ಮತ್ತು ಯುವ ಸಿಬ್ಬಂದಿ ನಿರ್ವಹಿಸುವ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಜಿಲ್ಲೆಯ ಎಲ್ಲ 1,322 ಮತಗಟ್ಟೆಗಳಲ್ಲಿ ಮೂಲ ಸೌಕರ್ಯಗಳಾದ ಕುಡಿಯುವ ನೀರು, ಶೌಚಾಲಯ, ವಿಕಲಚೇತನರಿಗೆ ರ‍್ಯಾಂಪ್ ವ್ಯವಸ್ಥೆ, ವಿದ್ಯುತ್ ಸಂಪರ್ಕ, ನೆರಳಿನ ವ್ಯವಸ್ಥೆ ಮಾಡಲಾಗಿದೆ ಎಂದರು.

ಬಿಗಿ ಬಂದೋಬಸ್ತ್​ : ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲಾಗಿದ್ದು, ಏಪ್ರಿಲ್ 29ರಿಂದ ಮೇ 7ರವರೆಗೆ 3,91,40,900 ನಗದು ಜಪ್ತು ಮಾಡಲಾಗಿದೆ. 47,43,403.46 ಮೌಲ್ಯದ 10914.88 ಲೀಟರ್ ಮದ್ಯ, 7,40,000 ರೂ.ಮೌಲ್ಯದ 0.124088 ಕೆ. ಜಿ ಬಂಗಾರ, 1,36,500 ರೂ. ಮೌಲ್ಯದ 2.395 ಕೆ. ಜಿ ಮಾದಕ ದ್ರವ್ಯ ವಶಕ್ಕೆ ಪಡೆಯಲಾಗಿದೆ. 19,03,696 ರೂ. ಮೌಲ್ಯದ 45807 ಸಾಮಗ್ರಿಗಳನ್ನು ಜಪ್ತಿ ಮಾಡಲಾಗಿದೆ. ಪ್ಲೈಯಿಂಗ್ ಸ್ಕ್ವಾಡ್‌ಗಳಿಂದ 33, ಪೊಲೀಸ್ ಇಲಾಖೆಯಿಂದ 9 ಮತ್ತು ಅಬಕಾರಿ ಇಲಾಖೆಯಿಂದ 46 ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ : ಮತಗಟ್ಟೆಯತ್ತ ಸಿಬ್ಬಂದಿ: ಕಾಡಂಚಿನ ಗ್ರಾಮಗಳಿಗೆ ಜೀಪ್ ವ್ಯವಸ್ಥೆ- ಭೂರಿ ಭೋಜನ

Last Updated :May 9, 2023, 6:15 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.