ETV Bharat / state

ತುಮಕೂರು-ಬೀದರ್​ನಲ್ಲಿ ಅಂಗನವಾಡಿ ಹುದ್ದೆಗಳ ನೇಮಕಾತಿ; ಇಲ್ಲಿದೆ ವಿವಿರ

author img

By ETV Bharat Karnataka Team

Published : Jan 13, 2024, 1:01 PM IST

Anganwadi Worker and helpers job in tumakuru and bidar
Anganwadi Worker and helpers job in tumakuru and bidar

ಅಂಗನವಾಡಿಯಲ್ಲಿ ಹುದ್ದೆಗಳ ಭರ್ತಿ ಸಂಬಂಧ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಅಧಿಸೂಚನೆ ಹೊರ ಬಿದ್ದಿದೆ.

ಬೆಂಗಳೂರು: ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಪ್ರಸ್ತುತ ತುಮಕೂರು ಹಾಗೂ ಬೀದರ್​ನಲ್ಲಿ ಈ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಈ ಹುದ್ದೆಗಳ ಮಾಹಿತಿ ಹೀಗಿದೆ.

ಹುದ್ದೆ ವಿವರ: ತುಮಕೂರು ಜಿಲ್ಲೆಯ ವಿವಿಧ ತಾಲೂಕಿನಲ್ಲಿ ಒಟ್ಟು 384 ಅಂಗನಾಡಿಯಲ್ಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.

ಅಂಗನಾಡಿ ಕಾರ್ಯಕರ್ತರು - 106

ಅಂಗನಾಡಿ ಸಹಾಯಕರು - 278

ವಿದ್ಯಾರ್ಹತೆ:

ಅಂಗನವಾಡಿ ಕಾರ್ಯಕರ್ತರ ಹುದ್ದೆಗೆ ಅಭ್ಯರ್ಥಿಗಳು ಪಿಯುಸಿಯನ್ನು ಪೂರ್ಣಗೊಳಿಸಿರಬೇಕು

ಅಂಗನಾಡಿ ಸಹಾಯಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್​ಎಸ್​ಎಲ್​ಸಿ ಪೂರ್ಣಗೊಳಿಸಿರಬೇಕು.

ಅಧಿಸೂಚನೆ
ಅಧಿಸೂಚನೆ

ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 19 ರಿಂದ 35 ವರ್ಷದ ವಯೋಮಿತಿ ಹೊಂದಿರಬೇಕು. ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಈ ಹುದ್ದೆಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬೇಕಿದೆ. ಅಭ್ಯರ್ಥಿಗಳನ್ನು ಮೆರಿಟ್​ ಪಟ್ಟಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಜನವರಿ 10 ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಫೆಬ್ರವರಿ 5 ಆಗಿದೆ.

ಬೀದರ್​ನಲ್ಲೂ ಅಂಗನಾಡಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

ಬೀದರ್​ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದಲೂ 96 ಅಂಗನವಾಡಿ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. 31 ಅಂಗನವಾಡಿ ಕಾರ್ಯಕರ್ತರು ಮತ್ತು 65 ಅಂಗನವಾಡಿ ಸಹಾಯಕರ ಹುದ್ದೆ ನೇಮಕಾತಿ ನಡೆಯಲಿದೆ.

ಮೇಲೆ ತಿಳಿಸಿದಂತೆ ಅಭ್ಯರ್ಥಿಗಳ ವಿದ್ಯಾರ್ಹತೆ ಮತ್ತು ನೇಮಕಾತಿ ನಡೆಯಲಿದ್ದು, ಈ ಹುದ್ದೆಗಳಿಗೆ ಜನವರಿ 10 ರಿಂದ ಫೆಬ್ರವರಿ 5ರ ವರೆಗೆ ಅರ್ಜಿ ಸಲ್ಲಿಸಲು ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಗ್ರಾಮಾಂತರ ಪ್ರದೇಶ ಮತ್ತು ನಗರ ಪ್ರದೇಶದಲ್ಲಿ ವಾಸ್ತವ್ಯ ಹೊಂದಿದ್ದು, ಈ ಸಂಬಂಧ ಪ್ರಮಾಣ ಪತ್ರ ಸಲ್ಲಿಕೆ ಮಾಡಬೇಕು. ಅಭ್ಯರ್ಥಿಗಳು ಕನ್ನಡ ಭಾಷೆಯ ಕುರಿತು ಓದುವ, ಬರೆಯುವ ಜ್ಞಾನ ಇರಬೇಕು.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಇನ್ನಿತರ ಮಾಹಿತಿಗೆ ಅಭ್ಯರ್ಥಿಗಳು karnemakaone.kar.nic.in/abcd/ApplicationForm_JA_org.aspx ಇಲ್ಲಿಗೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ: ಎನ್ಐಎಯಲ್ಲಿ ಕಾನ್ಸ್​ಟೆಬಲ್​, ಇನ್ಸ್​​ಪೆಕ್ಟರ್​ ಹುದ್ದೆಗಳಿಗೆ ಅರ್ಜಿ ಆಹ್ವಾನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.