ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ನೀರುಪಾಲು

author img

By

Published : Sep 26, 2022, 9:19 PM IST

four-people-drowned-in-lake-at-bidar

ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ನೀರು ಪಾಲಾಗಿರುವ ಘಟನೆ ಬೀದರ್ ತಾಲೂಕಿನ ಕಂಗಟಿ ಗ್ರಾಮದಲ್ಲಿ ನಡೆದಿದೆ.

ಬೀದರ್ : ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ನೀರು ಪಾಲಾಗಿರುವ ಘಟನೆ ಬೀದರ್​ ತಾಲೂಕಿನ ಕಂಗಟಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಸುನೀತಾ (32), ಆಕೆಯ ಪುತ್ರ ನಾಗಶೆಟ್ಟಿ (12) ಹಾಗೂ ತಾಯಿ ಆನಂದಾ (33) ಮತ್ತು ಆಕೆಯ ಪುತ್ರ ಪ್ರಜ್ವಲ್ (14) ಎಂದು ಗುರುತಿಸಲಾಗಿದೆ.

ಕೆರೆಯಲ್ಲಿ ಬಟ್ಟೆ ತೊಳೆಯುತ್ತಿದ್ದ ವೇಳೆ ಇಬ್ಬರು ಮಕ್ಕಳು ಈಜಾಡಲು ಹೋಗಿ ದುರ್ಘಟನೆ ನಡೆದಿದೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಜನವಾಡ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ತಾಯಿ ಮಗಳು ಕೆರೆಗೆ ಹಾರಿ ಆತ್ಮಹತ್ಯೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.