ETV Bharat / state

ಜಾಮೀನಿನ ಮೇಲೆ ಹೊರಬಂದಿದ್ದ ರೌಡಿಶೀಟರ್​​ನಿಂದ ಅಪ್ರಾಪ್ತೆಯ ಮೇಲೆ ಅತ್ಯಾಚಾರ

author img

By

Published : Jan 3, 2021, 1:44 AM IST

rape on minor girl
ಅಪ್ರಾಪ್ತೆಯ ಮೇಲೆ ಅತ್ಯಾಚಾರ

ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ರೌಡಿಶೀಟರ್ ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಬೀದರ್​ನಲ್ಲಿ ನಡೆದಿದೆ.

ಬಸವಕಲ್ಯಾಣ (ಬೀದರ್): ಪಾಲಕರೊಂದಿಗೆ ಜಮೀನಿಗೆ ತೆರಳಿದ್ದ ಅಪ್ರಾಪ್ತೆಯ ಮೇಲೆ ಕಾಮುಕನೊಬ್ಬ ಅತ್ಯಾಚಾರವೆಸಗಿದ ಘಟನೆ ಬಸವಕಲ್ಯಾಣ ತಾಲೂಕಿನ ರಾಜೇಶ್ವರ ಹೋಬಳಿ ವ್ಯಾಪ್ತಿಯಲ್ಲಿ ಜರುಗಿದೆ.

12 ವರ್ಷದ ಅಪ್ರಾಪ್ತ ಬಾಲಕಿ ಮೇಲೆ 25 ವರ್ಷದ ಯುವಕನಿಂದ ಅತ್ಯಾಚಾರ ನಡೆದಿದ್ದು, ಬಾಲಕಿಯನ್ನು ಬಸವಕಲ್ಯಾಣ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪಾಲಕರೊಂದಿಗೆ ಜಮೀನಿಗೆ ತೆರಳಿದ ಬಾಲಕಿಯು ಪಾಲಕರಿಂದ ತುಸು ದೂರದಲ್ಲಿಯೇ ಇದ್ದ ರೊಟ್ಟಿ ಬುತ್ತಿ ಹಾಗೂ ನೀರು ತರಲೆಂದು ತೆರಳಿದ್ದಾಗ ಏಕಾಏಕಿ ದಾಳಿ ನಡೆಸಿದ ಕಾಮುಕ ಅತ್ಯಾಚಾರ ಎಸೆಗಿದ್ದಾನೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಕೊಳ್ಳೇಗಾಲ: ಆಸ್ಪತ್ರೆಗೆಂದು‌‌ ಬಂದ ಗೃಹಿಣಿ ಮಗುವಿನೊಂದಿಗೆ ನಾಪತ್ತೆ!

ಘಟನೆ ನಂತರ ಆರೋಪಿ ತಲೆ ಮರೆಸಿಕೊಂಡಿದ್ದು, ಬಾಲಕಿಯ ಪೋಷಕರು ನೀಡಿದ ದೂರಿನ ಆಧಾರದಲ್ಲಿ ಬಸವಕಲ್ಯಾಣ ಗ್ರಾಮೀಣ ಠಾಣೆಯ ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಯ ಪತ್ತೆಗೆ ಜಾಲ ಬೀಸಿದ್ದಾರೆ.

ಆರೋಪಿ ಯುವಕ ರೌಡಿಶೀಟರ್ ಆಗಿದ್ದು, ಕಳ್ಳತನ ಪ್ರಕರಣ ಸೇರಿದಂತೆ ಅನೇಕ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ಕೆಲ ಪ್ರಕರಣಗಳಲ್ಲಿ ಜೈಲು ಸೇರಿದ್ದ ಈತ ಕಳೆದ ತಿಂಗಳ ಹಿಂದಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿ ಬಂದಿದ್ದ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.