ETV Bharat / state

ಚಾಮರಾಜನಗರದಲ್ಲಿ ಎರಡನೇ ದಿನವೂ ಸೋಂಕಿತರಿಗಿಂತ ಗುಣಮುಖರಾದವರೇ ಹೆಚ್ಚು

author img

By

Published : May 17, 2021, 10:19 PM IST

ಚಾಮರಾಜನಗರದಲ್ಲಿ ಸೋಂಕಿತ ಪ್ರಕರಣಗಳಿಗಿಂತ ಕೊರೊನಾದಿಂದ ಗುಣಮುಖರಾದವರ ಸಂಖ್ಯೆ ಹೆಚ್ಚಾಗಿದ್ದು, ಸದ್ಯ ಇಂದು 602 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

chamrajnagar
chamrajnagar

ಚಾಮರಾಜನಗರ: ಸತತ ಎರಡನೇ ದಿನವೂ ಸೋಂಕಿತರಿಗಿಂತ ಗುಣಮುಖರಾದವರ ಸಂಖ್ಯೆಯೇ ಜಿಲ್ಲೆಯಲ್ಲಿ ಹೆಚ್ಚಿದ್ದು, 502 ಹೊಸ ಕೋವಿಡ್ ಕೇಸ್ ಪತ್ತೆಯಾದರೇ, 602 ಮಂದಿ ಮಹಾಮಾರಿಯಿಂದ ಗುಣಮುಖರಾಗಿದ್ದಾರೆ.

ಸಕ್ರಿಯ ಪ್ರಕರಣಗಳ‌ ಸಂಖ್ಯೆ 3,793ಕ್ಕೆ ಇಳಿದಿದ್ದು 50 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 2,418 ಮಂದಿ ಹೋಂ ಐಸೋಲೇಷನ್​ನಲ್ಲಿದ್ದಾರೆ. 6,024 ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ.

10 ಮಂದಿ ಸಾವು: ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗಿದ್ದರೂ ಸಾವಿನ ಸರಣಿ ಮಾತ್ರ ಮುಂದುವರೆದಿದೆ. ಇಂದು 10 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ಕೊರೊನಾ ಸೋಂಕಿತರ ಸಾವಿನ ಸಂಖ್ಯೆ 308ಕ್ಕೆ ಏರಿಕೆಯಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.