ETV Bharat / state

ಎಸಿಬಿ ದಾಳಿ : ಗುಂಡ್ಲುಪೇಟೆ ಅಬಕಾರಿ ಇನ್ಸ್‌ಪೆಕ್ಟರ್ ಬಳಿ 4 ನಿವೇಶನ, 5 ಮನೆ, 1 ಕಾಂಪ್ಲೆಕ್ಸ್, ಬಗೆದಷ್ಟು ಬಂಗಾರ..

author img

By

Published : Mar 16, 2022, 4:59 PM IST

ಕಳೆದ ಒಂದು ವರ್ಷದಿಂದ ಗುಂಡ್ಲುಪೇಟೆಯಲ್ಲಿ ಅಬಕಾರಿ ಇನ್ಸ್‌ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಚೆಲುವರಾಜು ವಿರುದ್ಧ ವ್ಯಾಪಕ ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆ ಈ ದಾಳಿ ನಡೆಸಲಾಗಿದೆ..

ಗುಂಡ್ಲುಪೇಟೆ ಅಬಕಾರಿ ನಿರೀಕ್ಷಕ ಚೆಲುವರಾಜ್
ಗುಂಡ್ಲುಪೇಟೆ ಅಬಕಾರಿ ನಿರೀಕ್ಷಕ ಚೆಲುವರಾಜ್

ಚಾಮರಾಜನಗರ : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಏಟು ಕೊಟ್ಟಿರುವ ಎಸಿಬಿ ಅಧಿಕಾರಿಗಳು ಗುಂಡ್ಲುಪೇಟೆ ಅಬಕಾರಿ ನಿರೀಕ್ಷಕ ಚೆಲುವರಾಜ್ ಮನೆ, ಕಚೇರಿ ಸೇರಿದಂತೆ ಒಟ್ಟು 7 ಕಡೆ ದಾಳಿ ನಡೆಸಿ ಆದಾಯ ಮೀರಿದ ಆಸ್ತಿ ಪತ್ತೆ ಹಚ್ಚಿದ್ದಾರೆ‌.

ಮೈಸೂರು ಮತ್ತು ಬೆಂಗಳೂರು ಸೇರಿದಂತೆ ಪ್ರತಿಷ್ಠಿತ ಬಡಾವಣೆಗಳಲ್ಲಿ 4 ನಿವೇಶನ, 5 ಮನೆ ಹಾಗೂ ಒಂದು ಕಾಂಪ್ಲೆಕ್ಸ್ ಹೊಂದಿರುವ ಪತ್ರಗಳನ್ನು ವಶಪಡಿಸಿಕೊಂಡಿದ್ದು, ಬಂಗಾರ, ಚಿನ್ನಾಭರಣವನ್ನು ಲೆಕ್ಕ ಹಾಕಬೇಕಿದೆ.

ಗುಂಡ್ಲುಪೇಟೆ ಅಬಕಾರಿ ನಿರೀಕ್ಷಕ ಚೆಲುವರಾಜ್ ಮನೆ, ಕಚೇರಿ ಮೇಲೆ ಎಸಿಬಿ ದಾಳಿ..

ಇನ್ನೂ ಪರಿಶೀಲನೆಯಲ್ಲಿ ತೊಡಗಿರುವ ಅಧಿಕಾರಿಗಳು ಸಂಜೆವರೆಗೆ ಕಾರ್ಯಾಚರಣೆ ನಡೆಸಲಿದ್ದಾರೆ. ಒಟ್ಟಾರೆ ಆಸ್ತಿ ಪ್ರಮಾಣ ಇನ್ನೂ ಲೆಕ್ಕಕ್ಕೆ ಸಿಕ್ಕಿಲ್ಲ.‌ ಚಾಮರಾಜನಗರದಲ್ಲಿ ಎರಡು ಕಡೆ, ಮೈಸೂರು, ರಾಮನಗರ, ಚನ್ನಪಟ್ಟಣ ಹಾಗೂ ಬೆಂಗಳೂರಿನಲ್ಲಿ ಎಸಿಬಿ ಡಿವೈಎಸ್ಪಿ ಸದಾನಂದ ತಿಪ್ಪಣ್ಣವರ್ ನೇತೃತ್ವದಲ್ಲಿ 40 ಸಿಬ್ಬಂದಿ ಏಕಕಾಲದಲ್ಲಿ ದಾಳಿ ನಡೆಸಿ ಸರ್ಕಾರಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.

ಇದನ್ನೂ ಓದಿ: ಯಾದಗಿರಿಯಲ್ಲಿ ಎರಡು ಕಡೆ ಎಸಿಬಿ ದಾಳಿ : 5 ಲಕ್ಷ ನಗದು, ಚಿನ್ನ ಹಾಗೂ ಬೆಳ್ಳಿ ವಶಕ್ಕೆ

ಕಳೆದ ಒಂದು ವರ್ಷದಿಂದ ಗುಂಡ್ಲುಪೇಟೆಯಲ್ಲಿ ಅಬಕಾರಿ ಇನ್ಸ್‌ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಚೆಲುವರಾಜು ವಿರುದ್ಧ ವ್ಯಾಪಕ ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆ ಈ ದಾಳಿ ನಡೆಸಲಾಗಿದೆ.

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.