ETV Bharat / state

ಚಾಮರಾಜನಗರ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿ, 6 ಮಂದಿಗೆ ಗಾಯ

author img

By

Published : Dec 2, 2021, 1:56 PM IST

ಗುಂಡ್ಲುಪೇಟೆಯ ಎಪಿಎಂಸಿ ಸಮೀಪ ಟಿಪ್ಪರ್ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿ 6 ಮಂದಿ ಗಾಯಗೊಂಡಿದ್ದಾರೆ.

accident in Chamarajanagar
ಟಿಪ್ಪರ್-ಬಸ್ ಆಕ್ಸಿಡೆಂಟ್

ಚಾಮರಾಜನಗರ: ಟಿಪ್ಪರ್ ಹಾಗೂ ಬಸ್ ಮುಖಾಮುಖಿ ಡಿಕ್ಕಿಯಾಗಿ 6 ಮಂದಿ ಗಾಯಗೊಂಡಿರುವ ಘಟನೆ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಗುಂಡ್ಲುಪೇಟೆಯ ಎಪಿಎಂಸಿ ಸಮೀಪ ನಡೆದಿದೆ.

ಬಸ್​ನಲ್ಲಿ ಪ್ರಯಾಣಿಸುತ್ತಿದ್ದ ಚಾಲಕ ಸೇರಿದಂತೆ 6 ಮಂದಿ ಗಾಯಗೊಂಡಿದ್ದು, ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಬಸ್​​ ಚಾಲಕನ ಸಮಯ ಪ್ರಜ್ಞೆಯಿಂದ ಸಂಭಾವ್ಯ ಅನಾಹುತ ತಪ್ಪಿದೆ. ಟಿಪ್ಪರ್ ಚಾಲಕನ ಅಜಾಗರೂಕ ಚಾಲನೆಯೇ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ.

ಗಾಯಾಳುಗಳನ್ನು ಗುಂಡ್ಲುಪೇಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಗುಂಡ್ಲುಪೇಟೆ ಪೊಲೀಸರು ಭೇಟಿ ನೀಡಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಮುಖಂಡ ರಾಮೋಜಿ ಗೌಡ ಕಚೇರಿಗಳ ಮೇಲೆ ಐಟಿ ದಾಳಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.