ETV Bharat / state

ಸಿದ್ದರಾಮಯ್ಯ ಸಂಯಮ ಕಳೆದುಕೊಂಡು ಮಾತನಾಡುತ್ತಿದ್ದಾರೆ: BSY

author img

By

Published : Jul 30, 2021, 12:02 PM IST

ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಸಂಯಮ ಕಳೆದುಕೊಂಡು ಮಾತನಾಡಿದರೆ ಅವರಿಗೆ ಶೋಭೆ ತರುವುದಿಲ್ಲ. ಸಿಎಂ ಬೊಮ್ಮಾಯಿ ಅವರು ಒಳ್ಳೆಯ ಕೆಲಸ ಮಾಡಲೆಂದಷ್ಟೇ ನಾನು ಸಲಹೆ ಕೊಡಬಲ್ಲೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

former CM yediyurappa
ಬಿಎಸ್​ವೈ

ಚಾಮರಾಜನಗರ: ಇತ್ತೀಚೆಗೆ ಸಿದ್ದರಾಮಯ್ಯ ಸಂಯಮ ಕಳೆದುಕೊಂಡು ಮಾತನಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗುಂಡ್ಲುಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಪಕ್ಷ ನಾಯಕರಾದವರು ಸಂಯಮ ಕಳೆದುಕೊಂಡು ಮಾತನಾಡಿದರೆ ಅವರಿಗೆ ಶೋಭೆ ತರುವುದಿಲ್ಲ. ಸಿಎಂ ಬೊಮ್ಮಾಯಿ ಅವರು ಒಳ್ಳೆಯ ಕೆಲಸ ಮಾಡಲೆಂದಷ್ಟೇ ನಾನು ಸಲಹೆ ಕೊಡಬಲ್ಲೆ ಎಂದರು.

ಗುಂಡ್ಲುಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ

ಸಿಎಂ ಇಂದು ದೆಹಲಿಗೆ ಹೋಗಿದ್ದಾರೆ, ಹೈಕಮಾಂಡ್ ಜೊತೆ ಚರ್ಚಿಸಿ ಕೆಲವೇ ದಿನಗಳಲ್ಲಿ ಸಚಿವ ಸಂಪುಟ ರಚನೆ ಮಾಡುತ್ತಾರೆ. 17 ಶಾಸಕರಿಗೆ ಸಚಿವ ಸ್ಥಾನ ನೀಡುವುದು ಬೊಮ್ಮಾಯಿ ಅವರಿಗೆ ಬಿಟ್ಟ ವಿಚಾರ. ಎಲ್ಲರ ಜೊತೆ ಸಮಾಲೋಚನೆ ನಡೆಸಿ, ಸಚಿವ ಸ್ಥಾನ ನೀಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಇನ್ನು ಬೆಂಗಳೂರಿನಿಂದ ಗುಂಡ್ಲುಪೇಟೆಗೆ ಹೆಲಿಕಾಪ್ಟರ್ ಮೂಲಕ ಬಂದ ಬಿಎಸ್​ವೈ ರಸ್ತೆ ಮಾರ್ಗದ ಮೂಲಕ ಬೊಮ್ಮಲಾಪುರದ ಅಭಿಮಾನಿ ಮನೆಗೆ ತೆರಳಿ ಸಾಂತ್ವನ ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.